ಅವ್ರ್ ಬಿಟ್ ಇವ್ರ್ ಬಿಟ್ ಇನ್ಯಾರು?
Team Udayavani, Oct 15, 2018, 6:00 AM IST
ಬೆಂಗಳೂರು: “ಮಹಾಘಟಬಂಧನ್’ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಉತ್ಸಾಹದಲ್ಲಿರುವ ಕಾಂಗ್ರೆಸ್ಸಿಗೆ ಮಾಯಾವತಿ ನಡೆಯಿಂದ ರಾಷ್ಟ್ರ ಮಟ್ಟದಲ್ಲಿ ಹಿನ್ನಡೆ ಅನುಭವಿಸಿದೆ. ಹಾಗೇ, ರಾಜ್ಯದಲ್ಲಿಯೂ ಮೈತ್ರಿ ಮುಂದುವರಿಕೊಂಡು ಮುಂಬರುವ ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಕನಸು ಕಾಣುತ್ತಿರುವ ಕಾಂಗ್ರೆಸ್‌ಗೆ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಗಳೇ ಸಿಗುತ್ತಿಲ್ಲ! ಉನ್ನತ ಮೂಲಗಳ ಪ್ರಕಾರ ಬೆಂಗಳೂರು ಉತ್ತರ, ಧಾರವಾಡ, ವಿಜಯಪುರ, ಶಿವಮೊಗ್ಗ, ಉಡುಪಿ- ಚಿಕ್ಕಮಗಳೂರು, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಮೈಸೂರು, ಮಂಡ್ಯ, ಮಂಗಳೂರು, ಹಾವೇರಿ ಕ್ಷೇತ್ರಗಳಲ್ಲಿ ಬಿಜೆಪಿಗೆ ಪ್ರಬಲ ಸ್ಪರ್ಧೆ ನೀಡಿ, ಗೆಲುವಿನ ದಡ ಮುಟ್ಟುವ ಅಭ್ಯರ್ಥಿಗಳು ಕಾಂಗ್ರೆಸ್‌ಗೆ ದೊರೆಯುತ್ತಿಲ್ಲ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು 20 ಕ್ಷೇತ್ರಗಳನ್ನು ತನ್ನ ಬಳಿ ಉಳಿಸಿಕೊಂಡು 8 ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟು ಕೊಡುವ ಲೆಕ್ಕಾಚಾರದಲ್ಲಿರುವ ಕಾಂಗ್ರೆಸ್‌ಗೆ ಉಪ ಚುನಾವಣೆಯಲ್ಲೇ ಈ ಬಿಸಿ ತಟ್ಟಿದೆ. ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ ರಾಘ ವೇಂದ್ರ ಎದುರು ಸ್ಪರ್ಧೆ ಮಾಡಲು ಸೂಕ್ತ ಅಭ್ಯರ್ಥಿ ಸಿಗದಿರುವುದು ಮುಜುಗರಕ್ಕೆ ಕಾರಣವಾಗಿದೆ.
ಲೋಕಸಭೆ ಚುನಾವಣೆ ಸಿದ್ಧತೆ ಕುರಿತಂತೆ ಕಾಂಗ್ರೆಸ್‌ನಲ್ಲಿ ಈಗಾಗಲೇ ಜಿಲ್ಲಾ ಮುಖಂಡರು ಹಾಗೂ ರಾಜ್ಯ ಪದಾಧಿಕಾರಿಗಳನ್ನೊಳಗೊಂಡ ಒಂದು ಸುತ್ತಿನ ಸಭೆ ನಡೆಸಲಾಗಿದೆ. ಆ ಸಂದರ್ಭದಲ್ಲೇ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಚರ್ಚಿಸಲಾಗಿದೆ. ಈಗಾಗಲೇ ಹಾಲಿ ಸಂಸದರಿರುವ
9 ಕ್ಷೇತ್ರಗಳಿಗೆ ಅವರನ್ನೇ ಮತ್ತೆ ಅಭ್ಯರ್ಥಿಗಳನ್ನಾಗಿ ಮಾಡಬೇಕೆಂಬ ಲೆಕ್ಕಾಚಾರ ಕಾಂಗ್ರೆಸ್‌ನಲ್ಲಿದೆ. ಆದರೆ, ಕಾಂಗ್ರೆಸ್ ಸಂಸದರಿರುವ ಕೆಲವು ಕ್ಷೇತ್ರಗಳ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ ಎಂದು ಹೇಳಲಾಗಿದೆ. ಜೆಡಿಎಸ್ ಈಗಾಗಲೆ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಚಿತ್ರದುರ್ಗ ಕ್ಷೇತ್ರಗಳತ್ತ ದೃಷ್ಟಿ ಬೀರಿದ್ದು, ಅವುಗಳು ಕಾಂಗ್ರೆಸ್‌ಗೆ ಕೈ ತಪ್ಪುವ ಸಾಧ್ಯತೆ ಇದೆ.
ಹಾಲಿ, ಮಾಜಿಗಳ ಮೇಲೆ ಕಣ್ಣು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಮಾಜಿ ಸಚಿವರು ಮತ್ತು ಮಾಜಿ ಶಾಸಕರನ್ನು ಮುಂಬರುವ
ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನಾಗಿ ಮಾಡಬೇಕೆಂಬ ಲೆಕ್ಕಾಚಾರ ಕಾಂಗ್ರೆಸ್ ವಲಯದಲ್ಲಿ ನಡೆಯುತ್ತಿದೆ. ಕೆಲವು ಕ್ಷೇತ್ರಗಳಲ್ಲಿ ಹಾಲಿ ಶಾಸಕರನ್ನೂ ಕಣಕ್ಕಿಳಿಸಬೇಕೆನ್ನುವ ಅಭಿಪ್ರಾಯ ಕಾಂಗ್ರೆಸ್‌ನ ಕೆಲವು ನಾಯಕರದ್ದಾಗಿದೆ ಎಂದು ಹೇಳಲಾಗುತ್ತಿದೆ. ಬೀದರ್‌ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಹಾಲಿ ಶಾಸಕ ಈಶ್ವರ್ ಖಂಡ್ರೆ ಅಥವಾ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಪುತ್ರ ವಿಧಾನ ಪರಿಷತ್ ಸದಸ್ಯ ವಿಜಯ್ ಧರ್ಮಸಿಂಗ್ ಮೇಲೆ ಪಕ್ಷದ ನಾಯಕರು ಕಣ್ಣಿಟ್ಟಿದ್ದಾರೆ.
ಬೆಂಗಳೂರು ಉತ್ತರಕ್ಕೆ ಕೃಷ್ಣ ಬೈರೇಗೌಡ, ಬೆಳಗಾವಿಗೆ-ಸತೀಶ್ ಜಾರಕಿಹೊಳಿ, ಬೆಂಗಳೂರು ಕೇಂದ್ರಕ್ಕೆ-ರೋಷನ್ ಬೇಗ್ ಅವರನ್ನು ಕಣಕ್ಕಿಳಿಸಿದರೆ ಗೆಲುವು ಪಡೆಯಬಹುದೆಂಬ ಆಲೋಚನೆ ರಾಜ್ಯ ನಾಯಕರದ್ದಾಗಿದೆ. ವಿಜಯಪುರದಲ್ಲಿ ಮಾಜಿ ಸಚಿವ ಶಿವರಾಜ್ ತಂಗಡಗಿ, ಕೊಪ್ಪಳಕ್ಕೆ ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ, ಧಾರವಾಡ-ವಿನಯ್ ಕುಲಕರ್ಣಿ ಹಾಗೂ ಸಂತೋಷ್ ಲಾಡ್, ದಕ್ಷಿಣ ಕನ್ನಡದಲ್ಲಿ ರಮಾನಾಥ ರೈ, ಬೆಂಗಳೂರು ದಕ್ಷಿಣಕ್ಕೆ-ಪ್ರಿಯಾ ಕೃಷ್ಣ, ಹಾವೇರಿಗೆ-ಡಿ.ಆರ್. ಪಾಟೀಲ್ ಪ್ರಭಲ ಅಭ್ಯರ್ಥಿಗಳಾಬಹುದೆಂಬ ಲೆಕ್ಕಾಚಾರ ಹಾಕಲಾಗಿದೆ ಎಂದು ತಿಳಿದು ಬಂದಿದೆ. ಈಗಾಗಲೇ ವಿಧಾನಸಭೆ ಚುನಾವಣೆಯಲ್ಲಿ ಸೋತು ನಷ್ಟ ಅನುಭವಿಸಿರುವ ಬಹುತೇಕ ಮಾಜಿ ಸಚಿವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು
ಹಾಕುತ್ತಿದ್ದಾರೆ. ಸಮ್ಮಿಶ್ರ ಸರ್ಕಾರದ ಭವಿಷ್ಯ ಅತಂತ್ರವಾಗಿರುವುದರಿಂದ ಲೋಕಸಭೆಗೆ ಸ್ಪರ್ಧಿಸಿ, ಮತ್ತೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾದರೆ, ವಿಧಾನಸಭೆ ಚುನಾವಣೆಗೂ ಸ್ಪರ್ಧಿಸುವ ಅವಕಾಶ ಕೈ ತಪ್ಪುವ ಸಾಧ್ಯತೆ ಇದೆ. ಒಂದು ವೇಳೆ ಲೋಕಸಭೆ ಚುನಾವಣೆಯಲ್ಲಿ ಜಯ ಗಳಿಸಿದರೆ ಮರಳಿ ರಾಜ್ಯ ರಾಜಕಾರಣಕ್ಕೆ ಬರುವುದು ಕಷ್ಟವಾಗುತ್ತದೆ ಎನ್ನುವ ಕಾರಣಕ್ಕೆ ಅನೇಕ ಮಾಜಿ ಹಾಗೂ ಹಾಲಿ ಶಾಸಕರು
ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ತೋರುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.
ಹೊಸ ಮುಖ ಹುಡುಕಿ: ರಾಹುಲ್ ಹಾಲಿ ಶಾಸಕರನ್ನು ಕಣಕ್ಕಿಳಿಸುವ ಪ್ರಯತ್ನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರೋಧ ವ್ಯಕ್ತಪಡಿಸಿದ್ದಾರೆಎಂದು ಹೇಳಲಾಗುತ್ತಿದೆ. ಹಾಲಿ ಶಾಸಕರನ್ನು ಚುನಾವಣೆಗೆ ನಿಲ್ಲಿಸಿ ಉಪ ಚುನಾವಣೆಗಳಿಗೆ ಕಾರಣವಾಗುವ ಬದಲು ಈಗಿನಿಂದಲೇ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡುವ ಹಾಗೂ ಪಕ್ಷದಲ್ಲಿ ಸಕ್ರೀಯರಾಗಿರುವ ಹೊಸ ಮುಖಗಳನ್ನು ಗುರುತಿಸುವಂತೆ ರಾಹುಲ್ ಅವರು ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.