ವಿಗ್ರಹ ಸ್ಥಳಾಂತರ ಬೇಡ: ಹೈಕೋರ್ಟ್
Team Udayavani, Apr 11, 2019, 6:42 AM IST
ಬೆಂಗಳೂರು: ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿರುವ ಅಗಸ್ತ್ಯ ದೇವಾಲಯದ ಅಗಸ್ತ್ಯ ಲಿಂಗದ ವಿಗ್ರಹ ಸ್ಥಳಾಂತರ ಮಾಡದಂತೆ ದೇವಾಲಯ ಸಮಿತಿಗೆ ಹೈಕೋರ್ಟ್ ಆದೇಶ ನೀಡಿದೆ.
ವಿಗ್ರಹ ಭಗ್ನವಾಗಿರುವ ಕಾರಣ ಲಿಂಗವನ್ನು ಸಮುದ್ರದಲ್ಲಿ ವಿಸರ್ಜನೆ ಮಾಡಬೇಕು ಎಂಬ ಉದ್ದೇಶವನ್ನು ದೇವಾಲಯ ಸಮಿತಿ ಹೊ0ದಿದ್ದು, ಈ ಅಷ್ಟಮಂಗಲ ಅಧಿಕೃತವಲ್ಲ ಎಂದು ಆಕ್ಷೇಪಿಸಿ ಮೈಸೂರಿನ ಲೋಹಿತ್ ಅರಸು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿ ವಿಚಾರಣೆಯನ್ನು ಬುಧವಾರ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಅಗಸ್ತ್ಯ ಲಿಂಗದ ವಿಗ್ರಹ ಸ್ಥಳಾಂತರ ಮಾಡದಂತೆ ದೇವಾಲಯ ಸಮಿತಿಗೆ ನಿರ್ದೇಶಿಸಿತು.
ಜತೆಗೆ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಮುಜರಾಯಿ ಇಲಾಖೆ ಆಯುಕ್ತರು, ಪುರಾತತ್ವ ಮತ್ತು ರಾಷ್ಟ್ರೀಯ ಸ್ಮಾರಕಗಳ ಸಂಗ್ರಹಾಲಯ ಇಲಾಖೆಯ ದಕ್ಷಿಣ ವಲಯದ ಪ್ರಾದೇಶಿಕ ನಿರ್ದೇಶಕರು ಮತ್ತು ಆಯುಕ್ತರು, ಕೊಡಗು ಜಿಲ್ಲಾಧಿಕಾರಿ, ಅಗಸ್ತ್ಯ ದೇವಾಲಯ ಸಮಿತಿ ಅಧ್ಯಕ್ಷ ತಮ್ಮಯ್ಯ ಮತ್ತು ಪ್ರಧಾನ ಅರ್ಚಕ ನಾರಾಯಣಾಚಾರ್ಯ ಅವರಿಗೆ ನೋಟಿಸಗ್ ಜಾರಿಗೊಳಿಸಿ ವಿಚಾರಣೆ ಮಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.