ಲೋಡ್‌ಶೆಡ್ಡಿಂಗ್ ಇಲ್ಲ: ಡಿಕೆಶಿ
Team Udayavani, Mar 20, 2018, 6:35 AM IST
ಬೆಂಗಳೂರು: ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚುವರಿಯಾಗಿ 1000 ಮೆಗಾವ್ಯಾಟ್ ವಿದ್ಯುತ್ ಲಭ್ಯವಿದ್ದು, ಅಧಿಕೃತ ಅಥವಾ ಅನಧಿಕೃತ ಲೋಡ್‌ಶೆಡ್ಡಿಂಗ್ ಮಾಡುತ್ತಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೇಂದ್ರ ಸರ್ಕಾರ ಅಗತ್ಯ ವಿದ್ಯುತ್ ಪೂರೈಸಲು ಸಿದ್ಧವಿದ್ದರೂ ರಾಜ್ಯ ಸರ್ಕಾರ ಅದನ್ನು ಪಡೆದುಕೊಳ್ಳಲು ಮುಂದಾಗದೆ ಅನಿಯಮಿತ ಲೋಡ್‌ಶೆಡಿಂಗ್ ಮಾಡಲಾಗುತ್ತಿದೆ ಎಂಬ ಕೇಂದ್ರ ಸಚಿವ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಅವರು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಪ್ರತಿಕ್ರಿಯೆ ನೀಡಿದರು.
ರಾಜ್ಯದಲ್ಲಿ ಮಾರ್ಚ್ ತಿಂಗಳಲ್ಲಿ ಬೇಡಿಕೆಗಿಂತ 1000 ಮೆಗಾವ್ಯಾಟ್ ಹೆಚ್ಚುವರಿ ವಿದ್ಯುತ್ ಲಭ್ಯವಿದೆ. ಅಲ್ಲದೆ, ವಿದ್ಯುತ್ ಸಮಸ್ಯೆ ಉದ್ಭವವಾಗಬಾರದು ಎಂದು 900 ಮೆಗಾವ್ಯಾಟ್ ವಿದ್ಯುತ್ ಖರೀದಿಸಲಾಗುತ್ತಿದೆ. ಮಕ್ಕಳು ಮತ್ತು ರೈತರ ಭವಿಷ್ಯದ ಉದ್ದೇಶದಿಂದ ಸರ್ಕಾರ ಎಚ್ಚರಿಕೆಯಿಂದ ವಿದ್ಯುತ್ ಪೂರೈಕೆ ಮಾಡುತ್ತಿದ್ದು, ಪ್ರಕಾಶ್ ಜವಾಡೇಕರ್ ಅವರು ಮಾಹಿತಿ ಇಲ್ಲದೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಹೇಳಿದರು.
ಕಲ್ಲಿದ್ದಲಿಗೆ ಅಪಾಯ ಉಂಟಾಗಿತ್ತು:
ರಾಜ್ಯದ ಬಳ್ಳಾರಿ ಮತ್ತು ಯರಮರಸ್‌ನ ತಲಾ 800 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಒಡಿಷಾದ ಘೋಗ್ರಪಲ್ಲಿಯಿಂದ ಕಲ್ಲಿದ್ದಲು ಪೂರೈಕೆಯಾಗುತ್ತಿದ್ದು, 2018ರ ಮೇ 31ರ ನಂತರ ಕಲ್ಲಿದ್ದಲು ಪೂರೈಕೆ ಸ್ಥಗಿತಗೊಳಿಸಲಾಗುವುದು. ಹೀಗಾಗಿ ಈ ಘಟಕಗಳಿಗೆ ಕಲ್ಲಿದ್ದಲು ಬೇಕಾದಲ್ಲಿ ಕೇಂದ್ರ ಸರ್ಕಾರದ ಶಕ್ತಿ ಸ್ಕೀಂನಡಿ ಪ್ರಸ್ತಾವನೆ ಸಲ್ಲಿಸಿ ಎಂದು ಕೇಂದ್ರ ಸರ್ಕಾರದಿಂದ ಪತ್ರ ಬಂದಿತ್ತು. ಇದರಿಂದ ಈ ಘಟಕಗಳಿಗೆ ಕಲ್ಲಿದ್ದಲು ಸಮಸ್ಯೆ ಉಂಟಾಗುವ ಸಂಭವವಿತ್ತು. ಈ ಬಗ್ಗೆ ಕೇಂದ್ರ ಇಂಧನ ಸಚಿವರಲ್ಲಿ ಮಾತುಕತೆ ನಡೆಸಿದ್ದು, ಅವರು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಪ್ರಕಾಶ್ ಜಾವಡೇಕರ್ ಅವರು ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುವುದನ್ನು ಕೈಬಿಟ್ಟು ಸಮರ್ಪಕ ಕಲ್ಲಿದ್ದಲು ಪೂರೈಸುವಂತೆ ಕೇಂದ್ರ ಸರ್ಕಾರದ ಮನವೊಲಿಸಲಿ ಎಂದು ಸಲಹೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.