ಹಾಲಿನ ದರ ಕಡಿತ ಮಾಡಿಲ್ಲ: ಕಾಶಂಪೂರ್
Team Udayavani, Jun 12, 2018, 6:40 AM IST
ಬೆಂಗಳೂರು: ರೈತರಿಗೆ ಸರ್ಕಾರ ನೀಡುವ ಹಾಲಿನ ಪ್ರೋತ್ಸಾಹ ಧನ ಕಡಿಮೆ ಮಾಡಿಲ್ಲ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್ ಹೇಳಿದ್ದಾರೆ.
ಸಚಿವರಾಗಿ ಮೊದಲ ದಿನ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿ ಲೀಟರ್‌ಗೆ ಐದು ರೂ. ಪ್ರೋತ್ಸಾಹ ಧನ ನೀಡುತ್ತಿದ್ದು, ಅದರಲ್ಲಿ ಯಾವುದೇ ಕಡಿತ ಮಾಡಿಲ್ಲ. ಹಾಲು ಒಕ್ಕೂಟಗಳು ಹೆಚ್ಚಿನ ಪ್ರಮಾಣದಲ್ಲಿ ಹಾಲು ಉತ್ಪಾದನೆಯಾಗುತ್ತಿರುವ ಹಿನ್ನೆಲೆಯಲ್ಲಿ ದರ ಕಡಿತ ಮಾಡುತ್ತಿವೆ.
ಆದರೆ, ಬಹುತೇಕ ಹಾಲು ಒಕ್ಕೂಟಗಳು ದರ ಕಡಿಮೆ ಮಾಡಿಲ್ಲ ಎಂದು ಹೇಳಿದರು.ನಮ್ಮದು ರೈತರ ಪರ ಸರ್ಕಾರವಾಗಿದ್ದು, ಕೆಎಂಎಫ್ ಉತ್ತಮ ಕೆಲಸ ಮಾಡುತ್ತಿದೆ. ಕುಮಾರಸ್ವಾಮಿ ಮತ್ತು ದೇವೇಗೌಡರು ಜನಪರವಾಗಿ ಕೆಲಸ ಮಾಡುವ ಸಹಕಾರ ಖಾತೆ ನೀಡಿದ್ದಾರೆ. ಸರ್ಕಾರ ಈಗಾಗಲೇ ರೈತರ ಸಾಲ ಮನ್ನಾ ಮಾಡುವ ತೀರ್ಮಾನ ಮಾಡಿದೆ.
ಹಿಂದಿನ ಸರ್ಕಾರ ಸಹಕಾರ ಬ್ಯಾಂಕ್‌ಗಳಲ್ಲಿ ರೈತರು ಪಡೆದಿದ್ದ 50 ಸಾವಿರವರೆಗಿನ ಸಾಲ ಮನ್ನಾ ಮಾಡಿದೆ. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕೆನ್ನುವುದು ನಮ್ಮ ಸರ್ಕಾರದ ನಿಲುವಾಗಿದೆ. ಅಲ್ಲದೇ ಹಿಂದಿನ ಸರ್ಕಾರದ
ಸಾಲ ಮನ್ನಾ ಬಾಕಿ 3 ಸಾವಿರ ಕೋಟಿ ಇದೆ.
ಎಲ್ಲ ಸಾಧಕ ಬಾಧಕಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದ್ದು, ಶೀಘ್ರವೇ ಸರ್ಕಾರ ಅಧಿಕೃತ ಘೋಷಣೆ ಮಾಡಲಿದೆ ಎಂದು ಹೇಳಿದರು.
ಸಹಕಾರ ಕ್ಷೇತ್ರದ ಮೂಲಕ ರೈತರಿಗೆ ಹೇಗೆ ಕೆಲಸ ಮಾಡಬಹುದು ಎನ್ನುವುದನ್ನು ಇಸ್ರೇಲಿಗೆ ಹೋದಾಗ ನೋಡಿ ಬಂದಿದ್ದೇನೆ. ಎಪಿಎಂಸಿ ಮೂಲಕ ರೈತರಿಗೆ ಸಾಕಷ್ಟು ಅನುಕೂಲ ಮಾಡಿಕೊಡಬೇಕಿದೆ. ಮಹಾರಾಷ್ಟ್ರ ಮತ್ತು
ಗುಜರಾತ್‌ನಲ್ಲಿ ಸಹಕಾರ ಕ್ಷೇತ್ರ ಸಾಕಷ್ಟು ಬೆಳೆದಿದೆ. ರೈತರಿಗೆ ಬೆಂಬಲ ಬೆಲೆ ಮತ್ತು ಉತ್ಪನ್ನ ಸಂಗ್ರಹಣೆಗೆ ಗೋದಾಮು ಸಿದ್ದಪಡಿಸಬೇಕಿದೆ ಎಂದು ಹೇಳಿದರು.
ಜಿ.ಟಿ. ದೇವೇಗೌಡರಿಗೆ ಖಾತೆ ಬಗ್ಗೆ ಅಸಮಾಧಾನ ಇರುವ ಬಗ್ಗೆ ಪ್ರತಿಕ್ರಿ ಯಿಸಿರುವ ಅವರು ಯಾರಿಗೆ ಯಾವ ಖಾತೆ
ನೀಡಬೇಕೆಂದು ಪಕ್ಷ ತೀರ್ಮಾನ ಮಾಡಿದೆ.ನಾನು ಬಯಸದೇ ಸಹಕಾರ ಖಾತೆ ನೀಡಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.