ಗೃಹ ಮಂಡಳಿಯಿಂದ ಇನ್ನು ಮುಂದೆ ಹೊಸ ಬಡಾವಣೆ ಇಲ್ಲ: ಸೋಮಣ್ಣ
ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿರುವವರಿಗೆ ಲಾಟರಿ ಮೂಲಕ ಹಂಚಿಕೆ ಮಾಡಲಾಗುವುದು
Team Udayavani, Jul 8, 2022, 3:49 PM IST
ಬೆಂಗಳೂರು: ಭೂಸ್ವಾಧೀನ ವೆಚ್ಚ ದುಬಾರಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ಮುಂದೆ ಹೊಸ ಬಡಾವಣೆ ನಿರ್ಮಾಣ ಮಾಡದಿರಲು ಕರ್ನಾಟಕ ಗೃಹ ಮಂಡಳಿ ತೀರ್ಮಾನಿಸಿದೆ. ಬಡಾವಣೆ ನಿರ್ಮಾಣಕ್ಕೆ ಅಗತ್ಯ ಜಮೀನು ಸಿಗುತ್ತಿಲ್ಲ. ಜತೆಗೆ ಭೂಮಿ ದರ ಹೆಚ್ಚಳಗೊಂಡಿದೆ.
ಹೀಗಾಗಿ, ಗೃಹ ಮಂಡಳಿ ವತಿಯಿಂದ ಬಡಾವಣೆ ರಚನೆ ಕಷ್ಟ. ಆದರೆ, ಕನಿಷ್ಠ 50 ಎಕರೆ ಜಮೀನು ಇರುವ ಮಾಲೀಕರು ಮುಂದೆ ಬಂದರೆ ಖಾಸಗಿ ಸಹಭಾಗಿತ್ವದಲ್ಲಿ ಬಡಾವಣೆ ರಚನೆ ಮಾಡಲಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಖಾಸಗಿ ಸಹಭಾಗಿತ್ವದಲ್ಲಿ ನಗರ ಪ್ರದೇಶದಲ್ಲಿ ಶೇ.50:50, ಗ್ರಾಮೀಣ ಭಾಗದಲ್ಲಿ ಶೇ.60:40 ಆಧಾರದಲ್ಲಿ ಬಡಾವಣೆ ನಿರ್ಮಿಸಲಾಗುವುದು ಎಂದು ಹೇಳಿದರು.
ಈ ಹಿಂದೆ ಗೃಹ ಮಂಡಳಿ ರಚನೆ ಮಾಡಿದ್ದ ಬಡಾವಣೆಗಳಲ್ಲಿ 6015 ನಿವೇಶಗಳನ್ನು ಮೂರು ತಿಂಗಳಲ್ಲಿ ವಿತರಣೆಗೆ ಸಮಯ ನಿಗದಿ ಮಾಡಲಾಗಿದೆ. ಮೈಸೂರು, ಬಳ್ಳಾರಿ, ವಿಜಯಪುರ, ಗದಗ, ನೆಲಮಂಗಲ ಸೇರಿ ರಾಜ್ಯದ ವಿವಿಧೆಡೆ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿರುವವರಿಗೆ ಲಾಟರಿ ಮೂಲಕ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.
ಈ ಬಡಾವಣೆಗಳಲ್ಲಿನ ಮೂಲೆ ನಿವೇಶನ ಹರಾಜು ಹಾಕಲಾಗುವುದು. ಸಿಎ ನಿವೇಶನ ಆಸ್ಪತ್ರೆ, ಶಾಲೆ, ನಗರಸಭೆ- ಪುರಸಭೆ, ಗ್ರಾಮ ಪಂಚಾಯಿತಿ ಕಟ್ಟಡಗಳಿಗೆ ನೀಡಲಾಗುವುದು. ಖಾಸಗಿ ಸಂಘ- ಸಂಸ್ಥೆಗಳು ಸೇವಾ ಸಂಘಟನೆಗಳು ಅರ್ಜಿ ಹಾಕಿದರೆ ಶೇ.30ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಹೇಳಿದರು.
1967 ಮನೆ ಹಂಚಿಕೆ: ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಒಂದು ಲಕ್ಷ ಮನೆ ಯೋಜನೆಯಡಿ 48 ಸಾವಿರ ಮನೆಗಳ ನಿರ್ಮಾಣ ಭರದಿಂದ ಸಾಗಿದ್ದು, 1967 ಮನೆಗಳನ್ನು ಈ ತಿಂಗಳಲ್ಲಿ ಹಂಚಿಕೆ ಮಾಡಲಾಗುವುದು. ಈ ವರ್ಷದಲ್ಲಿ 20 ಸಾವಿರ ಮನೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Surathkal: ಬೇಕು ವ್ಯವಸ್ಥಿತ ಒಳಚರಂಡಿ; ಸೋರುತ್ತಿರುವ ವೆಟ್‌ವೆಲ್‌ಗಳಿಂದ ಮಾಲಿನ್ಯ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.