ದಿವ್ಯಾಂಗರಿಗೆ ಅನುಕಂಪದ ಅಗತ್ಯವಿಲ್ಲ


Team Udayavani, Dec 4, 2018, 11:58 AM IST

divyanga.jpg

ಬೆಂಗಳೂರು: ದಿವ್ಯಾಂಗರಿಗೆ ಅನುಕಂಪ ತೋರಿಸುವ ಅಗತ್ಯ ಇಲ್ಲ. ಅವರಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದಿಂದ ಸೋಮವಾರ ನಗರದ ಸ್ವತಂತ್ರ್ಯ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ದಿವ್ಯಾಂಗರಲ್ಲಿನ ಪ್ರತಿಭೆ ಗುರುತಿಸಿ ಸಹಕಾರ ನೀಡುವ ಕಾರ್ಯವನ್ನು ಸಮ್ಮಿಶ್ರ ಸರ್ಕಾರ ಮಾಡುತ್ತಿದೆ ಎಂದರು.

ದಿವ್ಯಾಂಗರ ಕಲ್ಯಾಣ ಮತ್ತು ಶಿಕ್ಷಣಕ್ಕೆ ಅಗತ್ಯ ನೆರವು ನೀಡುತ್ತಿದ್ದೇವೆ. ದಿವ್ಯಾಂಗರಿಗೆ ಬೋಧಿಸುವ ವಿಶೇಷ ಶಿಕ್ಷಕರ ವೇತನ ಹೆಚ್ಚಳ ಮಾಡುವುದು, ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸುವುದು ಸೇರಿ ದಿವ್ಯಾಂಗರಿಗೆ ಸರ್ಕಾರ ಈಗ ನೀಡುತ್ತಿರುವ ಸೌಲಭ್ಯವನ್ನು 2019-20ರ ಬಜೆಟ್‌ನಲ್ಲಿ ಇನ್ನಷ್ಟು ಉನ್ನತೀಕರಿಸಲಿದ್ದೇವೆ ಎಂದು ಭರವಸೆ ನೀಡಿದರು.

ಪ್ರತಿನಿತ್ಯ ದಿವ್ಯಾಂಗರು ಅನೇಕ ಸಮಸ್ಯೆಗಳನ್ನು ಹೊತ್ತು ಕಚೇರಿಗೆ ಬರುತ್ತಾರೆ. ಅವರೆಲ್ಲರ ಸಮಸ್ಯೆಗೂ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ. ಇತ್ತೀಚಿಗೆ ಸಮಸ್ಯೆ ಹೊತ್ತು ಬಂದಿದ್ದ ದಿವ್ಯಾಂಗ ಮಹಿಳೆಯೊಬ್ಬರಿಗೆ ತಕ್ಷಣವೇ ಸರ್ಕಾರದಿಂದ ಎರಡು ಲಕ್ಷ ರೂ.ಅನುದಾನ ನೀಡಿದ್ದೇವೆ. ದಿವ್ಯಾಂಗರ ಎಲ್ಲ ಸಮಸ್ಯೆಗಳ ಬಗ್ಗೆಯೂ ಅರಿವಿದೆ. ಅವುಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಡಾ.ಜಯಮಾಲಾ ಮಾತನಾಡಿ, ವಿಕಲಚೇತರ ಸಬಲೀಕರಣ, ಸಶಕ್ತೀಕರಣದ ಅಗತ್ಯವಿದೆ. ದಿವ್ಯಾಂಗರು, ವಿಕಲಚೇತನರು ಎಂಬ ಪದ ಬಳಕೆ ಮುಂದುವರಿಸದೇ ವಿಶಿಷ್ಟ ಚೇತನರು ಎಂಬ ಪದ ಬಳಕೆ ಮಾಡಬೇಕು ಎಂದು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

1988ರಿಂದ ಇಂದಿನವರೆಗೆ ನಮ್ಮಲ್ಲಿ ದಿವ್ಯಾಂಗರು ಅನೇಕ ಸಾಧನೆ ಮಾಡಿದ್ದಾರೆ. 2011ರ ಗಣತಿ ಪ್ರಕಾರ ರಾಜ್ಯದಲ್ಲಿ 13.24 ಲಕ್ಷ ದಿವ್ಯಾಂಗರಿದ್ದು, 7 ವಿಧದ ವಿಕಲತೆ ಗುರುತಿಸಲಾಗಿತ್ತು. ಈಗ 21 ಬಗೆಯ ಅಂಗವಿಕಲತೆ ಇದ್ದು, ಊನತೆಯೂ ಬೇರೆ ಬೇರೆ ಸ್ವರೂಪ ಪಡೆದುಕೊಳ್ಳುತ್ತಿದೆ. ರಾಜ್ಯದಲ್ಲಿ ದಿವ್ಯಾಂಗರ ಸಮೀಕ್ಷೆಗೆ ಎಲ್ಲ ತಯಾರಿ ಮಾಡಿದ್ದೇವೆ. ಸರ್ಕಾರ ಇದಕ್ಕೆ ಸಹಕಾರ ನೀಡಬೇಕು ಎಂದು ಕೋರಿಕೊಂಡರು.

ಬೆನ್ನುಹುರಿ ಸಮಸ್ಯೆಯಿಂದ ಸಂಪೂರ್ಣವಾಗಿ ಹಾಸಿಗೆ ಹಿಡಿದರುವವರಿಗೆ ನೀಡುತ್ತಿರುವ ಸಹಾಯ ಧನದಲ್ಲಿ 5 ಸಾವಿರ ಹೆಚ್ಚುವರಿಯಾಗಿ ನೀಡಬೇಕು. ಗ್ರಾಮೀಣ ಪುನರ್‌ ವಸತಿ ಯೋಜನೆಯಡಿ ಸೇವೆ ಸಲ್ಲಿಸುತ್ತಿರುವವರಿಗೆ ಮಾಸಿಕ 6 ಸಾವಿರ ರೂ.ಬದಲಿಗೆ 10 ಸಾವಿರ ರೂ. ಹಾಗೂ 3 ಸಾವಿರ ರೂ. ಬದಲಿಗೆ 5 ಸಾವಿರ ರೂ. ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಶಾಸಕ ಎಸ್‌.ಟಿ.ಸೋಮಶೇಖರ್‌, ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ, ರಾಜ್ಯ ಅಂಗವಿಕಲ ವ್ಯಕ್ತಿಗಳ ಅಧಿನಿಯಮ ಕಚೇರಿ ಆಯುಕ್ತ ವಿ.ಎಸ್‌.ಬಸವರಾಜು, ಇಲಾಖೆ ನಿರ್ದೇಶಕ ಜಯವಿಭವಸ್ವಾಮಿ, ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್‌ ಇದ್ದರು.
ದಿವ್ಯಾಂಗರ ಏಳಿಗೆಗೆ ಶ್ರಮಿಸಿದ ಮತ್ತು ಕ್ರೀಡೆ, ಶಿಕ್ಷಣ ಹೀಗೆ ವಿವಿಧ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿದ ದಿವ್ಯಾಂಗರಿಗೆ ಹಾಗೂ ವಿಶೇಷ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸರ್ಕಾರಿ ಉದ್ಯೋಗ ಕೊಡಿ: ಕಾರ್ಯಕ್ರಮದ ವೇಳೆ ಪ್ರತಿಭಟನೆ ನಡೆಸಿದ ಕೆಲವು ದಿವ್ಯಾಂಗ ಅಭ್ಯರ್ಥಿಗಳು, ನಮಗೆ ಸರ್ಕಾರದಿಂದ ಮಾಸಿಕವಾಗಿ ನೀಡುತ್ತಿರುವ ಸಹಾಯಧನದಲ್ಲಿ ಜೀವನ ನಿರ್ವಹಣೆ ಸಾಧ್ಯವಾಗುತ್ತಿಲ್ಲ. ಸರ್ಕಾರದಿಂದ ಉದ್ಯೋಗ ಒದಗಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿಗಳ ಎದುರೇ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸಿದವರಲ್ಲಿ ಅನೇಕರು ಅಂಧರು ಹಾಗೂ ಕಿವುಡರಾಗಿದ್ದರು. ಪೊಲೀಸರು ತಕ್ಷಣ ಪ್ರತಿಭಟನಾಕಾರರನ್ನು ತಡೆದರು. ಇಲಾಖೆ ಅಧಿಕಾರಿಗಳು ಬಂದು ಸಮಾಧಾನ ಮಾಡಿದರು.

ಅಂಧ ವಿದ್ಯಾರ್ಥಿಗಳಿಂದ ಮಲ್ಲಕಂಬ ಪ್ರದರ್ಶನ: ನಮಗೆ ಕಣ್ಣು ಕಾಣದೇ ಇರಬಹುದು. ಆದರೆ, ಪ್ರತಿಭೆಯಲ್ಲಿ ನಾವು ಯಾರಿಗೂ ಕಡಿಮೆ ಇಲ್ಲ ಎಂಬುದನ್ನು ಗದಗ ಜಿಲ್ಲೆಯ ರೋಣ ತಾಲೂಕಿನ ಜ್ಞಾನಸಿಂಧು ಮಕ್ಕಳ ವಸತಿಯುತ ಶಾಲೆಯ ವಿದ್ಯಾರ್ಥಿಗಳು ವಿಶ್ವ ದಿವ್ಯಾಂಗರ ದಿನಾಚರಣೆ ಸಮಾರಂಭದಲ್ಲಿ ಸಾಭಿತುಪಡಿಸಿದರು. ಮುಖ್ಯಮಂತ್ರಿಗಳ ಎದುರು ಮಲ್ಲಕಂಬದ ಪ್ರದರ್ಶನ ನೀಡಿದ 8 ವಿದ್ಯಾರ್ಥಿಗಳು ಎಲ್ಲರ ಮನ ಗೆದ್ದರು. 

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮಾದರಿಯಲ್ಲಿ ದಿವ್ಯಾಂಗರಿಗೆ ವಸತಿ ಶಾಲೆ ಆರಂಭಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ದಿವ್ಯಾಂಗರಿಗೆ ಉತ್ತಮ ಶಿಕ್ಷಣ ನೀಡಿ, ಅವರ ಭವಿಷ್ಯ ಸದೃಢಗೊಳಿಸುವುದು ನಮ್ಮ ಸಂಕಲ್ಪವಾಗಿದೆ.
-ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.