ಹೊಸ ಕಾರಿಲ್ಲ, ಮನೆ, ಕಚೇರಿಗೆ ಬಣ್ಣ ಇಲ್ಲ


Team Udayavani, Jun 4, 2018, 6:00 AM IST

3bnp-23.jpg

ಬೆಂಗಳೂರು:ರೈತರ ಸಾಲ ಮನ್ನಾ ಸೇರಿ ಸಮ್ಮಿಶ್ರ ಸರ್ಕಾರದಲ್ಲಿ ಎರಡೂ ಪಕ್ಷಗಳ ಪ್ರಣಾಳಿಕೆಗಳ ಘೋಷಣೆಗಳನ್ನು ಜಾರಿಗೊಳಿಸಲು ಸಂಪನ್ಮೂಲ ಕ್ರೂಢೀಕರಿಸುವ ನಿಟ್ಟಿನಲ್ಲಿ ಅನಗತ್ಯ ಹಾಗೂ ದುಂದು ವೆಚ್ಚಗಳಿಗೆ ಕಡಿವಾಣ ಹಾಕಲು ನಿರ್ಧರಿಸಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಅನಗತ್ಯ ವೆಚ್ಚ ನಿಯಂತ್ರಿಸುವಂತೆ ಸೂಚನೆ ನೀಡಿದ್ದಾರೆ.

ಮುಖ್ಯವಾಗಿ ನೂತನ ಸಚಿವರು ಹಾಗೂ ನಿಗಮ ಮಂಡಳಿ ಅಧ್ಯಕ್ಷರಿಗೆ ಹೊಸ ವಾಹನ ಖರೀದಿ, ಸಚಿವಾಲಯಗಳಲ್ಲಿರುವ ಅನಗತ್ಯ ಸಿಬ್ಬಂದಿ ಕಡಿತ, ಶಾಸಕರ ಭವನ, ವಿಧಾನಸೌಧದ ಕೊಠಡಿಗಳಲ್ಲಿ ನವೀಕರಣದ ಹೆಸರಿನಲ್ಲಿ ಕೋಟ್ಯಂತರ ರೂ. ವೆಚ್ಚ ಮಾಡುವುದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿದೇಶ ಪ್ರವಾಸಗಳಿಗೆ ಕಡಿವಾಣ ಹಾಕಲು ತೀರ್ಮಾನಿಸಿದ್ದಾರೆ.

ಈಗಾಗಲೇ ಈ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆರ್ಥಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಒಂದು ಸುತ್ತಿನ ಸಮಾಲೋಚನೆ ನಡೆಸಿದ್ದಾರೆ. ಅಲ್ಲದೆ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿ ನೇಮಕಗೊಂಡಿರುವ ನಿವೃತ್ತ ಐಎಎಸ್‌ ಅಧಿಕಾರಿ ಸುಬ್ರಮಣ್ಯ ಅವರೂ ಈ ಕುರಿತು ಮುಖ್ಯಮಂತ್ರಿಗಳಿಗೆ ಹಲವು ಸಲಹೆಗಳನ್ನು ನೀಡಿದ್ದಾರೆ. ಸೋಮವಾರ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೊಂದಿಗೆ ಈ ಕುರಿತು ಮುಖ್ಯಮಂತ್ರಿಗಳು ಚರ್ಚಿಸಿ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ,  ಈಗಾಗಲೇ ಸಚಿವರಿಗಾಗಿ ಹೊಸದಾಗಿ ಇನ್ನೋವಾ ಕಾರು ಖರೀದಿ ಮಾಡಿ ಶಾಸಕರ ಭವನ ಆವರಣದ ವಾಹನ ನಿಲುಗಡೆ ಸ್ಥಳದಲ್ಲಿ ನಿಲ್ಲಿಸಲಾಗಿದೆ. ಜತೆಗೆ ಶಾಸಕರ ಭವನ ಹಾಗೂ ವಿಧಾನಸೌಧ-ವಿಕಾಸಸೌಧದ ಕೊಠಡಿಗಳ ನವೀಕರಣ ಕಾರ್ಯವೂ ನಡೆಯುತ್ತಿದೆ. ಸಚಿವಾಲಯದಲ್ಲಿ 50 ಸಿºಬಂದಿಯ ಅಗತ್ಯತೆ ಇದ್ದರೆ 250 ಮಂದಿಯನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ.  ಈ ಎಲ್ಲ ವಿಚಾರ ಗಮನಕ್ಕೆ ಬಂದಿದ್ದರಿಂದಲೇ ಮುಖ್ಯಮಂತ್ರಿ ಕುಮಾರಸ್ವಾಮಿ, ಅಧಿಕಾರಿಗಳಿಗೆ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕುವಂತೆ ಸೂಚನೆ ನೀಡಿ ತಕ್ಷಣದಿಂದಲೇ ಜಾರಿಯಾಗುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

ತಮ್ಮಿಂದಲೇ ಚಾಲನೆ:
ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವ ಪ್ರಕ್ರಿಯೆಯನ್ನು ತಮ್ಮಿಂದಲೇ ಚಾಲನೆ ನೀಡಲು ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ. ಈಗಾಗಲೇ ತಮ್ಮ ಮನೆಯನ್ನೇ ಮುಖ್ಯಮಂತ್ರಿಗಳ ಅಧಿಕೃತ ನಿವಾಸವಾಗಿ ಮಾಡಿಕೊಂಡು ಸರ್ಕಾರದ ನಿವಾಸ ತಿರಸ್ಕರಿಸಿರುವ ಕುಮಾರಸ್ವಾಮಿ, ತಮಗಾಗಲೀ, ಸಚಿವಾಲಯದ ಸಿಬ್ಬಂದಿಗಾಗಲೀ ಹೊಸ ವಾಹನ ಖರೀದಿಸುವುದು ಬೇಡ ಎಂದು ಸೂಚನೆ ನೀಡಿದ್ದಾರೆ. ಅಲ್ಲದೆ, ತಮ್ಮ ಭದ್ರತೆಗೂ ಹೆಚ್ಚಿನ ಸಿಬ್ಬಂದಿ ಬೇಡ ಎಂದು ಹೇಳಿದ್ದಾರೆ.

ಹೊರಗುತ್ತಿಗೆಗೆ ಕಡಿವಾಣ
ಸರ್ಕಾರದ ಕೆಲವು ಇಲಾಖೆಗಳಲ್ಲಿ ಸಾಕಷ್ಟು ಖಾಲಿ ಹುದ್ದೆಗಳಿವೆ. ಆದರೆ, ಇವುಗಳನ್ನು ಭರ್ತಿ ಮಾಡದ ಕಾರಣ ಹೊರಗುತ್ತಿಗೆ ಮೂಲಕ ಸಿಬ್ಬಂದಿ ನೇಮಿಸಿ ಅವರಿಂದ ಕೆಲಸ ಪಡೆಯಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಒಬ್ಬರು ನಿರ್ವಹಿಸಬಹುದಾದ ಕೆಲಸಗಳಿಗೆ ಇಬ್ಬರು ಅಥವಾ ಮೂವರನ್ನು ನೇಮಿಸಿಕೊಂಡು ಅವರಿಂದ ಸ್ವಂತ ಕೆಲಸಗಳನ್ನು ಮಾಡಿಕೊಳ್ಳುವುದು ಕೂಡ ಇದೆ. ಇದರಿಂದಾಗಿ ಸರ್ಕಾರಕ್ಕೆ ಹೊರೆ ಹೆಚ್ಚಾಗುತ್ತಿದೆ. ಇನ್ನೊಂದೆಡೆ ಅಧಿಕಾರಿಗಳು ಸರ್ಕಾರಿ ವಾಹನ ಚಾಲಕರನ್ನು ನೇಮಿಸಿಕೊಳ್ಳದೆ ಹೊರಗುತ್ತಿಗೆ ಆಧಾರದ ಮೇಲೆ ತಮಗೆ ಬೇಕಾದ ಚಾಲಕರನ್ನು ನೇಮಿಸಿಕೊಳ್ಳುತ್ತಿದ್ದಾರೆ. ಇದರಿಂದ ಸರ್ಕಾರಿ ವಾಹನ ಚಾಲಕರು ತಮಗೆ ವಾಹನಗಳಿಲ್ಲದೆ ದಿನನಿತ್ಯ ಕಚೇರಿಗೆ ಬಂದುಹೋಗುವುದಷ್ಟನ್ನೇ ಮಾಡುತ್ತಿದ್ದಾರೆ. ಇದೆಲ್ಲದಕ್ಕೂ ಕಡಿವಾಣ ಹಾಕುವ ಉದ್ದೇಶದಿಂದ ಅಗತ್ಯವಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಂಡು ಅನಗತ್ಯವಾಗಿ ಹೊರಗುತ್ತಿದೆ ಆಧಾರದ ಮೇಲೆ ನೌಕರರನ್ನು ನೇಮಿಸಿಕೊಳ್ಳುವುದಕ್ಕೂ ಕಡಿವಾಣ ಹಾಕಲು ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಹೆಚ್ಚುತ್ತಿರುವ ಯೋಜನೇತರ ವೆಚ್ಚ
ಯೋಜನೇತರ ವೆಚ್ಚಗಳಿಗೆ ಕಡಿವಾಣ ಹಾಕಬೇಕು ಎಂದು ಪ್ರತಿ ವರ್ಷ ಹೇಳಲಾಗುತ್ತಿದೆಯಾದರೂ ವರ್ಷ ಕಳೆದಂತೆ ಯೋಜನೆತರ ವೆಚ್ಚದಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆಯೇ ಹೊರತು ಇಳಿಕೆ ಕಂಡುಬರುತ್ತಿಲ್ಲ. 2014-15ರಲ್ಲಿ 73,629 ಕೋಟಿ ರೂ. ಇದ್ದ ಯೋಜನೆತರ ವೆಚ್ಚ 2015-16ರಲ್ಲಿ 75,840 ಕೋಟಿ ರೂಗೆ ಏರಿತ್ತು. 2016-17ರಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿ 84,883 ಕೋಟಿ ರೂ. ತಲುಪಿತ್ತು. 2017-18ರಲ್ಲಿ 90 ಸಾವಿರ ಕೋಟಿ ರೂ. ದಾಟಿತ್ತು. ಈ ವೆಚ್ಚಗಳಿಗೆ ಕಡಿವಾಣ ಹಾಕಿದರೆ ವಾರ್ಷಿಕ 10 ಸಾವಿರ ಕೋಟಿ ರೂ. ಉಳಿಸಬಹುದು ಎಂಬ ಲೆಕ್ಕಾಚಾರವಿದೆ. ಈ ಕಾರಣಕ್ಕಾಗಿಯೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಯೋಜನೇತರ ವೆಚ್ಚಗಳಿಗೆ ನಿರ್ಬಂಧ ವಿಧಿಸಲು ಮುಂದಾಗಿದ್ದಾರೆ.

ಅಧಿಕಾರಿಗಳ “ಕಾರು’ಬಾರಿಗೂ ಕಡಿವಾಣ
ಪ್ರಮುಖವಾಗಿ ಅಧಿಕಾರಿಗಳ “ಕಾರು’ಬಾರುಗಳಿಗೂ ಕಡಿವಾಣ ಹಾಕಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗಂಭೀರ ಚಿಂತನೆ ನಡೆಸಿದ್ದಾರೆ. ಸರ್ಕಾರದ ಉನ್ನತಾಧಿಕಾರಿಗಳಿಗೆ ಸರ್ಕಾರದಿಂದ ಒಂದು ಅಥವಾ ಎರಡು ವಾಹನ ನೀಡಲಾಗುತ್ತದೆ. ಆದರೆ, ಅನೇಕ ಅಧಿಕಾರಿಗಳು ಸರ್ಕಾರ ನೀಡಿದ ವಾಹನದ ಜತೆಗೆ ಇಲಾಖೆಗಳಿಗೆ ಸಂಬಂಧಿಸಿದ ನಿಗಮಗಳಿಂದ ಹೆಚ್ಚುವರಿ ವಾಹನಗಳನ್ನು ಪಡೆದು ತಮ್ಮ ಕುಟುಂಬದ ಉಪಯೋಗಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಕೆಲವು ಸರ್ಕಾರಿ ವಾಹನಗಳು ಅಧಿಕಾರಿಗಳ ಮನೆ ಬಳಿಯೇ ನಿಂತು ಕುಟುಂಬದವರ ಓಡಾಟಕ್ಕೆ ಮಾತ್ರ ಬಳಕೆಯಾಗುತ್ತವೆ. 

ಕೆಲವೊಂದು ಸಂದರ್ಭದಲ್ಲಿ ಇಲಾಖೆಗೆ ಹೊಸ ಮುಖ್ಯಸ್ಥ ಬಂದ ಕೂಡಲೇ ಅವರು ತಮ್ಮ ಹಳೆಯ ವಾಹನ ಬಿಟ್ಟು ಹೊಸ ವಾಹನ ಖರೀದಿಸುತ್ತಾರೆ. ಇನ್ನು ಕೆಲವು ಅಧಿಕಾರಿಗಳಿಗೆ ವಾಹನ ಸೌಲಭ್ಯ ಇಲ್ಲದಿದ್ದರೂ ಬಾಡಿಗೆ ವಾಹನಗಳನ್ನು ಬಳಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೆಲವು ಅಧಿಕಾರಿಗಳು ತಾವೇ ಕಾರು ಖರೀದಿಸಿ ಅದನ್ನು ಬಾಡಿಗೆ ಆಧಾರದಲ್ಲಿ ಬಳಸಿಕೊಂಡು ಬೊಕ್ಕಸದಿಂದ ಹಣ ಪಡೆಯುತ್ತಿದ್ದಾರೆ. ಇವೆಲ್ಲಕ್ಕೂ ಕಡಿವಾಣ ಹಾಕಿ ನಿಯಮಾನುಸಾರ ಅಧಿಕಾರಿಗಳಿಗೆ ಒದಗಿಸಲು ಮತ್ತು ವಾಹನ ಸೌಲಭ್ಯ ಇಲ್ಲದ ಅಧಿಕಾರಿಗಳಿಗೆ ವಾಹನ ಒದಗಿಸದೇ ಇರಲು ಕೂಡ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ವೆಚ್ಚ ಕಡಿವಾಣಕ್ಕೆ ದಾರಿಗಳು
– ಸರ್ಕಾರಿ ಕಚೇರಿಗಳಲ್ಲಿ ಆಡಂಬರ ಮತ್ತು ಅನಗತ್ಯ ವೆಚ್ಚಗಳನ್ನು ನಿಯಂತ್ರಿಸುವುದು. ಕಟ್ಟಡಗಳ ನಿರ್ವಹಣೆ, ಕಚೇರಿ ಸಾಧನ ಸಾಮಗ್ರಿಗಳು, ಸಾರಿಗೆ ಸಂಪರ್ಕ, ರಕ್ಷಣೆ, ಪೀಠೊಪಕರಣ, ಶಿಷ್ಟಾಚಾರದ ವೆಚ್ಚಗಳನ್ನು ಕಡಿತಗೊಳಿಸುವುದು.
– ರಾಜ್ಯದ ಅನುದಾನದಿಂದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿದೇಶಿ ಪ್ರವಾಸ ವೆಚ್ಚವನ್ನು ಭರಿಸುವಂತಿದ್ದರೆ ಅದಕ್ಕೆ ನಿರ್ಬಂಧ ಹೇರುವುದು. ವಿಮಾನ ಪ್ರಯಾಣಕ್ಕೆ ಆದಷ್ಟು ಕಡಿವಾಣ ಹಾಕುವುದು. ವಿಮಾನದಲ್ಲಿ ಪ್ರಯಾಣಿಸಲೇ ಬೇಕಾದರೆ ಎಕಾನಮಿ ಕ್ಲಾಸ್‌ನಲ್ಲಿ ಪ್ರಯಾಣಿಸುವುದು.
– ತುರ್ತು ಸಂದರ್ಭ ಹೊರತುಪಡಿಸಿ ಯಾವುದೇ ಹೊಸ ಹುದ್ದೆಗಳನ್ನು ಸೃಜಿಸಬಾರದು. ಇರುವ ಖಾಲಿ ಹುದ್ದೆಗಳಿಗೆ ಅಗತ್ಯವಾದರೆ ಮಾತ್ರ ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕು. ಹುದ್ದೆಗಳನ್ನು ಸೃಜಿಸಬೇಕಾದರೆ ಆರ್ಥಿಕ ಇಲಾಖೆ ಗಮನಕ್ಕೆ ತಂದು ಒಪ್ಪಿಗೆ ಪಡೆಯುವುದು.
– ಎಲ್ಲಾ ಇಲಾಖೆಗಳು ತಮ್ಮ ಯೋಜನೇತರ ವೆಚ್ಚದಲ್ಲಿ ಶೇ. 10ರಷ್ಟು ಕಡಿತ ಸಾಧಿಸಲು ಅಗತ್ಯ ಕ್ರಮ. ತಾರಾ ಹೋಟೆಲ್‌ಗ‌ಳಲ್ಲಿ ಸರ್ಕಾರದ ಕಾರ್ಯಕ್ರಮಗಳನ್ನು ಆಯೋಜಿಸುವುದು, ಅದ್ದೂರಿ ಸಮಾರಂಭಗಳಿಗೆ ಕಡಿವಾಣ ಹಾಕುವುದು.
– ಇಲಾಖೆಗಳಲ್ಲಿ ವಾಹನಗಳ ಅತಿಯಾದ ಬಳಕೆಗೆ ಕಡಿವಾಣ ಹಾಕಿ ವಾಹನಗಳಿಗೆ ಇಂಧನ ಖರೀದಿಸಲು ವಾರ್ಷಿಕ ಇಂತಿಷ್ಟು ಎಂದು ಆಯವ್ಯಯ ನಿಗದಿಪಡಿಸುವುದು. ಹೊಸ ವಾಹನಗಳ ಖರೀದಿಗೆ ನಿರ್ಬಂಧ ಹೇರುವುದು.

ಟಾಪ್ ನ್ಯೂಸ್

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.