ಕಚೇರಿ ನೀಡುವ ಅಧಿಕಾರವಿಲ್ಲ; ಸಂಸದರ ಪತ್ರಕ್ಕೆ ಸ್ಪಷ್ಟನೆ


Team Udayavani, Jun 15, 2019, 3:00 AM IST

Udayavani Kannada Newspaper

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಅನಂತ ಕುಮಾರ್‌ ಅವರ ಬಳಸುತ್ತಿದ್ದ ಸಂಸದರ ಕಚೇರಿಯ ಬದಲಿಗೆ ತನಗೆ ಹೊಸ ಕಚೇರಿ ನೀಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದ್ದು, ಸಂಸದರಿಗೆ ಕಚೇರಿ ನೀಡುವ ಅಧಿಕಾರ ಪಾಲಿಕೆಗಿಲ್ಲ ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

ಜಯನಗರ ಸೌತ್‌ಎಂಡ್‌ ವೃತ್ತದಲ್ಲಿ ಕೇಂದ್ರ ಮಾಜಿ ಸಚಿವರಾಗಿದ್ದ ದಿವಂಗತ ಅನಂತಕುಮಾರ್‌ ಅವರಿಗೆ ಸಂಸದರ ಕಚೇರಿಯನ್ನು ಪಾಲಿಕೆಯ ಕಟ್ಟಡದಲ್ಲಿ ನೀಡಲಾಗಿದೆ. ಆದರೆ, ತೇಜಸ್ವಿ ಸೂರ್ಯ ಅವರು, ತನಗೆ ಅನಂತಕುಮಾರ್‌ ಅವರಿಗೆ ನೀಡಿದ ಸಂಸದರ ಕಚೇರಿ ಬೇಡ, ಜಯನಗರದ ಶಾಲಿನಿ ಗ್ರೌಂಡ್ಸ್‌ ಎದುರಿನ ಪಾಲಿಕೆಯ ಕಟ್ಟಡದಲ್ಲಿ ಕಚೇರಿ ನೀಡುವಂತೆ ಪತ್ರ ಬರೆದಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌, ಸಂಸದರು, ರಾಜ್ಯಸಭಾ ಸದಸ್ಯರಿಗೆ ರಾಜ್ಯ ಸರ್ಕಾರವೇ ಕಚೇರಿಯನ್ನು ನೀಡುತ್ತದೆ. ಆದರೆ, ತೇಜಸ್ವಿ ಸೂರ್ಯ ಅವರು ಪಾಲಿಕೆಯ ಕಟ್ಟಡದಲ್ಲಿ ಕಚೇರಿ ನೀಡುವಂತೆ ಪತ್ರ ಬರೆದಿದ್ದು, ಪಾಲಿಕೆಗೆ ಕಚೇರಿ ನೀಡುವ ಅಧಿಕಾರವಿಲ್ಲ. ಹೀಗಾಗಿ ಈ ಕುರಿತು ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಜಂಟಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಸಂಸದರು ಕೇಳುತ್ತಿರುವ ಕಟ್ಟಡದ ಹಿನ್ನೆಲೆ: ಜಯನಗರದ ಶಾಲಿ ಮೈದಾನಗಳ ಮುಂದಿರುವ ಪಾಲಿಕೆಯ ಕಟ್ಟಡವನ್ನು ಶಿಕ್ಷಣ ಟ್ರಸ್ಟ್‌ಗೆ ಐದು ವರ್ಷಗಳ ಭೋಗ್ಯಕ್ಕೆ ನೀಡಲಾಗಿತ್ತು. ಇದೀಗ ಐದು ವರ್ಷಗಳು ಮುಗಿದ ಹಿನ್ನೆಲೆಯಲ್ಲಿ ಕಟ್ಟಡವನ್ನು ಪಾಲಿಕೆಗೆ ಹಸ್ತಾಂತರ ಮಾಡುವಂತೆ ಟ್ರಸ್ಟ್‌ಗೆ ನೋಟಿಸ್‌ ನೀಡಲಾಗಿತ್ತು. ಅದನ್ನು ಪ್ರಶ್ನಿಸಿ ಟ್ರಸ್ಟ್‌ ನ್ಯಾಯಾಲಯದ ಮೆಟ್ಟಿರೇಲಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಕಾನೂನಿನ ಪ್ರಕಾರ ಕ್ರಮಕೈಗೊಳ್ಳುವಂತೆ ಪಾಲಿಕೆಯ ಜಂಟಿ ಆಯುಕ್ತರಿಗೆ ಸೂಚನೆ ನೀಡಿತ್ತು ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು.

ಕಟ್ಟಡ ಪಡೆಯುವುದರ ಹಿಂದಿನ ಉದ್ದೇಶವೇನು?: ಪಾಲಿಕೆಯ ಕಟ್ಟಡವನ್ನು ಭೋಗ್ಯಕ್ಕೆ ಪಡೆದಿರುವ ಶಿಕ್ಷಣ ಟ್ರಸ್ಟ್‌ ಬಿಜೆಪಿಯೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಇದೇ ಕಾರಣದಿಂದ ಹಿಂದೆ ಶಾಕಸರಾಗಿದ್ದ ವಿಜಯಕುಮಾರ್‌ ಅವರು ಕಟ್ಟಡವನ್ನು ಟ್ರಸ್ಟ್‌ಗೆ ಕೊಡಿಸಿದ್ದರು. ಆದರೀಗ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರಿರುವ ಹಿನ್ನೆಲೆಯಲ್ಲಿ ಕಟ್ಟಡವನ್ನು ಹಿಂಪಡೆಯುವ ಪ್ರಯತ್ನಗಳು ನಡೆದಿವೆ. ಆ ಹಿನ್ನೆಲೆಯಲ್ಲಿ ಟ್ರಸ್ಟ್‌ಗೆ ಸಹಾಯ ಮಾಡುವ ಉದ್ದೇಶದಿಂದ ನೂತನ ಸಂಸದರು ಇದೇ ಕಟ್ಟಡದಲ್ಲಿ ತಮಗೆ ಕಚೇರಿ ನೀಡುವಂತೆ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

4-bng

Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.