ಬಿಲ್ಲವರು ಒಗ್ಗಟ್ಟಾದರೆ ಎದುರಿಸುವ ಶಕ್ತಿ ಯಾರಿಗೂ ಇಲ್ಲ
Team Udayavani, Jan 29, 2018, 6:40 AM IST
ಬೆಂಗಳೂರು: ದಕ್ಷಿಣ ಕನ್ನಡದಲ್ಲಿ ಬಿಲ್ಲವ ಸಮಾಜ ಒಗ್ಗಟ್ಟಾದರೆ, ನಮ್ಮನ್ನು ಎದುರಿಸುವ ಶಕ್ತಿ ಯಾರಿಗೂ ಇರುವುದಿಲ್ಲ ಎಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಕವಿತಾ ಸನಿಲ್ ಹೇಳಿದ್ದಾರೆ.
ಬೆಂಗಳೂರಿನ ಬಿಲ್ಲವ ಅಸೋಸಿ ಯೇಷನ್‌ನ ವತಿಯಿಂದ ರವಿವಾರ “ಬಿಲ್ಲವ ಭವನ’ದ ದೇವಕಿ ಆನಂದ ಸುವರ್ಣ ಕನ್ವೆನ್‌ಷನ್ ಹಾಲ್‌ನಲ್ಲಿ ಹಮ್ಮಿ ಕೊಂಡಿದ್ದ ಸಾಮೂಹಿಕ ಸತ್ಯ ನಾರಾಯಣ ಪೂಜೆ ಹಾಗೂ ಮಹಿಳಾ ದಿನಾಚರಣೆ-2018’ರಲ್ಲಿ ಸಮ್ಮಾನ ಸ್ವೀಕರಿಸಿ ಮಾತನಾಡಿದ ಅವರು ದಕ್ಷಿಣ ಕನ್ನಡದಲ್ಲಿ ಬಿಲ್ಲವ ಸಮಾಜ ಮತ್ತು ಯುವಕರ ಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಬಿಲ್ಲವ ಸಮಾಜ ಇಷ್ಟೊಂದು ಸಂಘಟಿತವಾಗಿರುವುದನ್ನು ನೋಡಿದರೆ ಬಹಳ ಸಂತಸವಾಗುತ್ತದೆ. ಆದರೆ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಜನಸಂಖ್ಯೆ ಇರುವ ಬಿಲ್ಲವ ಸಮಾಜ ರಾಜಕೀಯದ ಸಹಿತ ಇತರ ಕ್ಷೇತ್ರಗಳಲ್ಲಿ ಅವಕಾಶ ವಂಚಿತವಾಗಿದೆ. ಹೆಚ್ಚಿನ ಸಂಖ್ಯೆಯ ಬಿಲ್ಲವ ಯುವಕರು ಇಂದು ಜೈಲಿನಲ್ಲಿದ್ದಾರೆ. ಬಿಲ್ಲವ ಯುವಕರು ದಾರಿ ತಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು.
ಕೊಲೆ ಮಾಡಬೇಡಿ: ಮೇಯರ್ ಅವರ ಮಾತಿಗೆ ಪೂರಕವಾಗಿ ಮಾತನಾಡಿದ ಬೆಂಗಳೂರಿನ ಬಿಲ್ಲವ ಅಸೋಸಿಯೇಷನ್‌ನ ಅಧ್ಯಕ್ಷ ಎಂ. ವೇದಕುಮಾರ್, ದಕ್ಷಿಣ ಕನ್ನಡದಲ್ಲಿ ನಮ್ಮ ಬಿಲ್ಲವ ಸಮಾಜದ ಯುವಕರು ಯಾರ್ಯಾರದೋ ಮಾತು ಕೇಳಿ ದಾರಿ ತಪ್ಪುತ್ತಿದ್ದಾರೆ. ಅವರಿಗೆ ಬುದ್ಧಿವಾದ ಹೇಳಿ ಸರಿ ದಾರಿಗೆ ತರಬೇಕಿದೆ ಎಂದರು.
ಶಾಸಕ ಮತ್ತು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲೀಕಯ್ಯ ವಿ. ಗುತ್ತೇದಾರ್, ಬಿಬಿಎಂಪಿ ಸದಸ್ಯೆ ಭಾಗ್ಯಲಕ್ಷ್ಮೀ ಮುರಳಿ, ಕರ್ನಾಟಕ ಆರ್ಯ ಈಡಿಗ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ನಳಿನಾಕ್ಷಿ ಸಣ್ಣಪ್ಪ, ಬಿಲ್ಲವ ಅಸೋಸಿಯೇಷನ್‌ನ ಹಿರಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.