ರಾಜಕೀಯ ನಿವೃತ್ತಿ ಇಲ್ಲ
Team Udayavani, Jun 22, 2018, 11:44 AM IST
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ವಿಧಾನ ಪರಿಷತ್ ಸದಸ್ಯತ್ವದಿಂದ ನಿವೃತ್ತಿಯಾಗಿದ್ದಾರೆ. ಆದರೆ, ರಾಜಕೀಯ ನಿವೃತ್ತಿ ಹೊಂದುವುದಿಲ್ಲ ಎಂದು ಅವರು ಘೋಷಿಸಿದ್ದಾರೆ. ಸಭಾಪತಿಯಾಗಿ ಕೊನೆಯ ದಿನವಾದ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರಿಷತ್ ಸಭಾಪತಿಯಾಗಿ ಕಾರ್ಯ ನಿರ್ವಹಿಸಿದ ಖುಷಿ ಇದೆ. ಸಿಹಿ ಕಹಿ ಅನೇಕ ಘಟನೆಗಳು ನಡೆದಿವೆ.
ನಾನು ಹುದ್ದೆಯಿಂದ ನಿವೃತ್ತಿಯಾಗುತ್ತಿದ್ದು, ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ. ರಾಜ್ಯಪಾಲರ ಹುದ್ದೆ ನೀಡುತ್ತೇನೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹೇಳಿದ್ದರು. ಅದಕ್ಕೆ ಸಮ್ಮತಿ ಸೂಚಿಸಿದ್ದೆ. ಆದರೆ, ರಾಜ್ಯಪಾಲರ ಹುದ್ದೆ ಸಿಗಲಿಲ್ಲ. ಇದರಿಂದ ಯಾವುದೇ ಬೇಸರವಿಲ್ಲ. ಮುಂದಿನ ಅವಕಾಶಗಳ ಕುರಿತು ಇನ್ನೂ ಯಾವುದೇ ಮಾತುಕತೆಯಾಗಿಲ್ಲ ಎಂದು ಹೇಳಿದರು.
ಡಿ.ಎಚ್. ಶಂಕರ ಮೂರ್ತಿ ನೈರುತ್ಯ ಪದವಿಧರ ಕ್ಷೇತ್ರದಿಂದ 1988 ರಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದು, 1994, 2000, 2006, 2012ರ ವರೆಗೂ ಸತತವಾಗಿ ಆಯ್ಕೆಯಾಗುತ್ತ ಬಂದಿದ್ದರು. 2006 ರಲ್ಲಿ ಜೆಡಿಎಸ್ ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಈ ಬಾರಿ ಬಿಜೆಪಿ ನೈರುತ್ಯ ಪದವಿಧರ ಕ್ಷೇತ್ರಕ್ಕೆ ಅವರ ಬದಲು ಆಯನೂರು ಮಂಜುನಾಥ ಅವರಿಗೆ ಟಿಕೆಟ್ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.