ಈ ಬಾರಿ ಸಾರ್ವಜನಿಕ ಹೊಸ ವರ್ಷಾಚರಣೆಗೆ ಬ್ರೇಕ್
ಎಂ.ಜಿ. ರಸ್ತೆಯಲ್ಲಿ ಹೊಸ ವರ್ಷಾಚರಣೆ ನಿಷೇಧಿಸುವಂತೆ ಸರ್ಕಾರಕ್ಕೆ ಬಿಬಿಎಂಪಿ ಅಭಿಪ್ರಾಯ
Team Udayavani, Dec 2, 2020, 4:43 PM IST
ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.
ಈ ಕುರಿತು ಬುಧವಾರ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾತನಾಡಿ, ಕಳೆದ ವಾರ ಕಂದಾಯ ಸಚಿವರು, ಗೃಹ ಸಚಿವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಭೆ ನಡೆಯಿತು. ಸದ್ಯ ಕೋವಿಡ್ ಸೋಂಕು ಇಳಿಕೆಯಾಗಿದೆ. ಮುಂದಿ️ನ ದಿನಗಳಲ್ಲಿ ಎರಡನೇ ಅಲೆ ಭೀತಿ ಇದೆ. ಜತೆಗೆ ಚಳಿಗಾಲವೂ ಇದೆ. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಡಿಸೆಂಬರ್ 31ರಂದು ಮಧ್ಯರಾತ್ರಿ ನಗರದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್‌ಸ್ಟ್ರೀಟ್ ನಡೆಯುತ್ತಿದ್ದ ಸಂಭ್ರಮಾಚರಣೆಗಳು ಈ ವರ್ಷ ನಿಷೇಧಿಸಬೇಕು. ಸಾರ್ವಜನಿಕವಾಗಿ ಹೊಸ ವರ್ಷಾಚರಣೆಯ ಕಾರ್ಯಕ್ರಮಗಳನ್ನು ನಿಯಂತ್ರಿಸಬೇಕು. ಜತೆಗೆ ಬಾರ್, ಕ್ಲಬ್‌ಗಳಲ್ಲಿ ವಿಶೇಷ ಪಾರ್ಟಿ ಆಯೋಜಿಸಲು ಅನುಮತಿ ನೀಡಬಾರದು ಎಂಬ ಅಭಿಪ್ರಾಯವನ್ನು ನೀಡಿದ್ದೇವೆ ಎಂದರು.
ಇದನ್ನೂ ಓದಿ:ನ್ಯಾಯಾಧೀಶರುಗಳ ಪತ್ನಿಯರ ವಿರುದ್ಧ ಅಶ್ಲೀಲ ಹೇಳಿಕೆ; ನಿವೃತ್ತ ಜಡ್ಜ್ ಕರ್ಣನ್ ಬಂಧನ
ಸಾಮಾನ್ಯ ದಿ️ನಗಳಂತೆ ಬಾರ್, ರೆಸ್ಟೋರಂಟ್‌ಗೆ ತೆರಳುವುದಕ್ಕೆ, ಊಟ ಉಪಹಾರಗಳಿಗೆ ಯಾವುದೇ ಅಡಚಣೆ ಇರುವುದಿ️ಲ್ಲ. ಈ ಕುರಿತು ಅಂತಿಮ ತೀರ್ಮಾವನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದರು.
ತಜ್ಞರು ವರದಿ️ ನೀಡಿದ್ದಾರೆ
ಹೊಸ ವರ್ಷ ಸಂಭ್ರಮಾಚರಣೆಗಳು ಸಂಪೂರ್ಣ ನಿಷೇಧಿಸಬೇಕು ಎಂದು ಸರ್ಕಾರಮಟ್ಟದ ಕೋವಿಡ್ ನಿರ್ವಹಣೆ ತಜ್ಞರ ತಾಂತ್ರಿಕ ಮಂಡಳಿ ಸರ್ಕಾರಕ್ಕೆ ಸಲಹೆ ನೀಡಿದೆ. ಡಿ.26 ರಿಂದ ಜ.2 ರವರೆಗೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುುಮತಿ ನೀಡಬಾರದು ಎಂದು ತಿಳಿಸಿದೆ. ಈ ಮೂಲಕ ಸಂಭ್ರಮಾಚರಣೆಗಳಿಗೆ ಸಂಪೂರ್ಣ ಬ್ರೇಕ್ ಬೀಳುವ ಸಾಧ್ಯತೆ ಹೆಚ್ಚಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.