ಸೋಂಕಿತ ಮಕ್ಕಳಲ್ಲಿ ಗಂಭೀರತೆ ಕಂಡುಬಂದಿಲ್ಲ

ಬಿಬಿಎಂಪಿ ಮಕ್ಕಳ ತಜ್ಞರ ಸಮಿತಿ ಸ್ಪಷ್ಟನೆ ; ರಾಜ್ಯದಲ್ಲಿ ಕೋವಿಡ್‌ ಸೋಂಕು ನಿಯಂತ್ರಣ

Team Udayavani, Aug 15, 2021, 3:57 PM IST

ಸೋಂಕಿತ ಮಕ್ಕಳಲ್ಲಿ ಗಂಭೀರತೆ ಕಂಡುಬಂದಿಲ್ಲ

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ 9ರಿಂದ19 ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚು ಕೋವಿಡ್‌ ಸೋಂಕು ಕಂಡುಬರುತ್ತಿದೆ ಎಂದು ಹಬ್ಬಿರುವ
ಸುದ್ದಿಯಿಂದ ಪೋಷಕರಲ್ಲಿ ಭೀತಿ ಉಂಟಾಗಿದೆ.

ಆದರೆ, ಬೇರೆ ವಯೋಮಾನದ ಕೋವಿಡ್‌ ಸೋಂಕಿತರಿಗೆ ಹೋಲಿಸಿದರೆ, ಸೋಂಕಿತ ಮಕ್ಕಳಲ್ಲಿ ಗಂಭೀರತೆ ಕಂಡುಬಂದಿಲ್ಲ ಎಂದು
ಬಿಬಿಎಂಪಿ ಮಕ್ಕಳ ತಜ್ಞರ ಸಮಿತಿ ಸ್ಪಷ್ಟಪಡಿಸಿದೆ.

ನಗರದಲ್ಲಿ ಕಳೆದ ನಾಲ್ಕು ತಿಂಗಳಿಂದ ದೃಢವಾದ ಕೋವಿಡ್‌ ಸೋಂಕು ಪ್ರಕರಣಗಳ ಪೈಕಿ 0-18 ವರ್ಷದೊಳಗಿನವರ ಸೋಂಕು ಪಾಸಿಟಿವಿಟಿ ದರ ಶೇ.11 ಇದೆ. ಹೀಗಾಗಿ, ಪೋಷಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ.ಕಳೆದ10 ದಿನಗಳಲ್ಲಿ ಪತ್ತೆಯಾದ ಕೋವಿಡ್‌ ಸೋಂಕಿತರಲ್ಲಿ ಐದು ಮಕ್ಕಳು ಸರ್ಕಾರಿ ಮತ್ತು 24 ಮಕ್ಕಳು ಖಾಸಗಿ ಕೋಟಾದಡಿ ಆಸ್ಪತ್ರೆ ದಾಖಲಾಗಿದ್ದಾರೆ. ಒಟ್ಟು ಸೋಂಕು ಪ್ರಕರಣದ ಶೇ.5.7 ಮಕ್ಕಳು ಮಾತ್ರ ಆಸ್ಪತ್ರೆಗೆ ದಾಖಲಾತಿಯಾಗಿದ್ದು, ಬೇರೆ ವಯೋಮಾನದ ಸೋಂಕಿತರಿಗೆ ಹೋಲಿಸಿದರೆ ಇದುಕಡಿಮೆಯಾಗಿದೆ ಎಂದು ಹೇಳಿದೆ.

ಇದನ್ನೂ ಓದಿ:ತಾಲಿಬಾನ್ ಗೆ ಶರಣಾದ ಅಫ್ಘಾನ್: ಉಗ್ರರಿಗೆ ಅಧಿಕಾರ ಹಸ್ತಾಂತರಿಸಿದ ಅಫ್ಘಾನ್ ಅಧ್ಯಕ್ಷ!

ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್‌ ಸೋಂಕು ಪ್ರಕರಣ ಹೆಚ್ಚಳವಾಗಿದ್ದರೂ, ರಾಜ್ಯದಲ್ಲಿ ಕೋವಿಡ್‌ ಸೋಂಕು ನಿಯಂತ್ರಣದಲ್ಲಿದೆ. ನಗರದಲ್ಲಿ ಕಳೆದ 20 ದಿನಗಳಲ್ಲಿ ನಿತ್ಯ ಸರಾಸರಿ 388(350-400) ಸೋಂಕು ಪತ್ತೆಯಾಗುತ್ತಿದೆ. 0-12 ವಯಸ್ಸಿನ ಮಕ್ಕಳಿಗೆ ಜೂನ್‌ನಲ್ಲಿ2,643, ಜುಲೈನಲ್ಲಿ 778 ಮತ್ತು ಆ.13ರ ಅಂತ್ಯಕ್ಕೆ 309 ಸೋಂಕು ಕಂಡುಬಂದಿದೆ. ಇದಕ್ಕೆ ಹೋಲಿಕೆ ಮಾಡಿದಲ್ಲಿ ಮಕ್ಕಳ ಸೋಂಕು ಪ್ರಮಾಣ ಇಳಿಕೆಯಾಗಿದೆ.

ಆಗಸ್ಟ್‌ ತಿಂಗಳಲ್ಲಿ 0-18 ವರ್ಷದ 511 ಮಕ್ಕಳಿಗೆ ಕೋವಿಡ್‌ ಸೋಂಕು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.11.5ರಷ್ಟಿದೆ. ಏಪ್ರಿಲ್‌ ನಿಂದ ಜೂನ್‌ವರೆಗೆ 14 ಮಕ್ಕಳುಸಾವನ್ನಪ್ಪಿದ್ದು, ಜುಲೈ ಮತ್ತು ಆಗಸ್ಟ್‌ನಲ್ಲಿ ಯಾರೂ ಮೃತರಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಶೀಘ್ರ 30 ಹಾಸಿಗೆಗಳ ಸಾಮರ್ಥ್ಯ ಆಸ್ಪತ್ರೆ: ಅಮೇರಿಕನ್‌ ಅಕಾಡೆಮಿ ಆಫ್ ಪೀಡಿಯಾ ಟ್ರಿಕ್ಸ್‌ ಪ್ರಕಟಿಸಿದ ಜಾಗತಿಕ ದತ್ತಾಂಶದಲ್ಲಿ ಒಟ್ಟು
ಕೋವಿಡ್‌ ಪ್ರಕರಣಗಳಲ್ಲಿ ಶೇ.14.3 ಮಕ್ಕಳಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. ಈ ಪೈಕಿ ಕೇವಲ ಶೇ.1.9 ಮಕ್ಕಳು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬೆಂಗಳೂರಲ್ಲಿ ಜಾಗತಿಕ ದತ್ತಾಂಶಕ್ಕಿಂತಲೂ ಕಡಿಮೆ ಸೋಂಕು ವರದಿ ಯಾಗುತ್ತಿದೆ. ಸೋಂಕಿತ ಮಕ್ಕಳ ಆರೈಕೆಗೆ
ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ಸೇರಿದಂತೆ 7 ಆಸ್ಪತ್ರೆ ಗುರುತಿಸಲಾಗಿದೆ. ಜತೆಗೆ, ಬಿಬಿಎಂಪಿ ವತಿಯಿಂದ ಮಕ್ಕಳ ಆರೈಕೆಗೆ ಶೀಘ್ರ 30
ಹಾಸಿಗೆಗಳ ಸಾಮರ್ಥ್ಯ ಆಸ್ಪತ್ರೆ ವ್ಯವಸ್ಥೆ ಮಾಡಲಿದೆ ಎಂದು ತಿಳಿಸಿದೆ.

ಭಯಪಡುವ ಅಗತ್ಯವಿಲ್ಲ
ಕೋವಿಡ್‌ ಸೋಂಕು ಪತ್ತೆಯಾದ ಬಹುತೇಕ ಮಕ್ಕಳಲ್ಲಿ ಸೌಮ್ಯ ರೋಗಲಕ್ಷಣಗಳು ಕಂಡುಬಂದಿದ್ದು, ತಮ್ಮಷ್ಟಕ್ಕೆ ತಾವೇ ಚೇತರಿಸಿಕೊಳ್ಳುತ್ತಾರೆ. ಹೀಗಾಗಿ, ನಗರದ ಜನರು ಹಾಗೂ ಪೋಷಕರು ಭಯಪಡುವ ಅಗತ್ಯವಿಲ್ಲ. ಮಕ್ಕಳಲ್ಲಿ ಸೋಂಕು ಲಕ್ಷಣ ಕಂಡು ಬಂದಲ್ಲಿ ವೈದ್ಯಕೀಯ ಮೌಲ್ಯಮಾಪನಕ್ಕಾಗಿ ಬಿಬಿಎಂಪಿ ದೈಹಿಕ ಚಿಕಿತ್ಸಾ ಕೇಂದ್ರ(ಪಿಟಿಸಿ), ಪ್ರಾಥಮಿಕ ಆರೋಗ್ಯಕೇಂದ್ರ(ಪಿಎಚ್‌ಸಿ) ಅಥವಾ ಸಮುದಾಯ
ಆರೋಗ್ಯ ಕೇಂದ್ರಗಳಿಗೆ (ಸಿಎಚ್‌ಸಿಎ) ತೆರಳಿ ತಪಾಸಣೆ ಮಾಡಿಸಿಕೊಳ್ಳಬಹುದು. ಮೂರು ವರ್ಷ ಮೇಲ್ಪಟ್ಟ ಎಲ್ಲ ಮಕ್ಕಳುಕಡ್ಡಾಯವಾಗಿ ಕೋವಿಡ್‌ನಿಯಮಗಳನ್ನು ಪಾಲಿಸಬೇಕು ಎಂದು ಬಿಬಿಎಂಪಿಯ ಮಕ್ಕಳ ತಜ್ಞರ ಸಮಿತಿಯು ಸಲಹೆ ನೀಡಿದೆ.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.