ಯಾವುದೇ ಕೆಲಸವೂ ಸಣ್ಣದಲ್ಲ
Team Udayavani, Mar 19, 2019, 6:28 AM IST
ಕೆಂಗೇರಿ: ಯಾವುದೇ ಕಾರ್ಯವನ್ನು ನಾವು ಮಾಡುವಾಗ ಅದು ಸಣ್ಣದಾದರು ನಿರ್ಲಕ್ಷಿಸಬಾರದು ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಆರ್.ವೇಣುಗೋಪಾಲ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಬೆಂಗಳೂರು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಭವನದಲ್ಲಿ ವಿಇಟಿ ಪ್ರಥಮದರ್ಜೆ ಕಾಲೇಜು ಮತ್ತು ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಮ್ಯಾನೇಜ್‌ಮೆಂಟ್‌ನ 2018-19ನೇ ಸಾಲಿನ ವಾರ್ಷಿಕ ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಂದುವರಿದ ರಾಷ್ಟ್ರಗಳ ಉದಾಹರಣೆ ತೆಗೆದುಕೊಂಡರೆ ಬಹಳಷ್ಟು ವಿಷಯಗಳಲ್ಲಿ ನಾವು ಹಿಂದೆ ಇದ್ದೇವೆ. ಆರ್ಥಿಕವಾಗಿ ಸಬಲರಾದರಷ್ಟೇ ಸಾಲದು ಎಲ್ಲ ಕ್ಷೇತ್ರಗಳಲ್ಲೂ ಮುಂದಿರಬೇಕು. ನೀವು ಇಲ್ಲಿಂದ ತೆರಳಿದ ನಂತರವೂ ಜನ ನೆನೆಯುವಂತಹ ಕಾರ್ಯಗಳನ್ನು ನೀವು ಮಾಡಬೇಕು ಎಂದು ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕೇಂದ್ರಯ ವಿದ್ಯಾಲಯದ ಸಿಂಡಿಕೇಟ್ ಸದಸ್ಯ ಎಚ್.ಟಿ.ಅರವಿಂದ ಮಾತನಾಡಿ, ಸಾಮಾಜಿಕ ಜವಾಬ್ದಾರಿ, ಪ್ರಜ್ಞೆಯನ್ನು ಜಾಗೃತಗೊಳಿಸಿ ನಾಯಕತ್ವದ ಗುಣವನ್ನು ಎನ್‌ಎಸ್‌ಎಸ್ ಬೆಳಸುತ್ತದೆ. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿ ಮೂಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮಹತ್ವದ ಪಾತ್ರ ನಿರ್ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ಬೆಂಗಳೂರು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ.ಶ್ರೀನಿವಾಸ್ ಮಾತನಾಡಿ, ಎನ್‌ಎಸ್‌ಎಸ್ ಶಿಬಿರದಲ್ಲಿ ಪಾಲ್ಗೊàಳ್ಳುವ ಮೂಲಕ ಬಹಳಷ್ಟು ವಿಷಯಗಳನ್ನು ವಿದ್ಯಾರ್ಥಿಗಳು ಕಲಿಯಬಹುದು. ಶಿಸ್ತು, ಶ್ರಮದಾನ, ಯೋಗ, ಆರೋಗ್ಯ, ಎರೋಬಿಕ್ಸ್, ರಕ್ತದಾನ, ಸ್ವತ್ಛತಾ ಕಾರ್ಯ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಉಪಯುಕ್ತ ಮಾಹಿತಿಯನ್ನು ವಿದ್ಯಾರ್ಥಿಗಳು ಶಿಬಿರದಲ್ಲಿ ಪಡೆಯುತ್ತಾರೆ ಎಂದರು.
ಬೆಂಗಳೂರು ಕೇಂದ್ರ ವಿವಿ ಆಡಳಿತ ಸಮಿತಿ ಸದಸ್ಯೆ ಹಾಗೂ ವಿಇಟಿ ಪ್ರಿನ್ಸಿಪಾಲ್ ಡಾ.ಆರ್.ಪಾರ್ವತಿ, ಶಿಬಿರದ ಕಾರ್ಯಕ್ರಮಾಧಿಕಾರಿಗಳಾದ ಬೀರಲಿಂಗ ಪೂಜಾರಿ ಮತ್ತು ಎಸ್.ಜಿ.ನಾರಾಯಣಸ್ವಾಮಿ, ಶಿಬಿರಾರ್ಥಿಗಳಾದ ಮಂಜುಳಾ, ಅಂಕಿತಾ, ಮಾಧುರಿ, ಭೂಮಿಕಾ, ಅರವಿಂದರಾಜ್ ಸೇರಿ ನೂರಕ್ಕೂ ಹೆಚ್ಚು ಶಿಬಿರಾರ್ಥಿಗಳು ಹಾಗೂ ಪ್ರಾಧ್ಯಾಪಕರು ಭಾಗವಹಿಸಿದ್ದರು. ಸಮಾರಂಭದಲ್ಲಿ ವಿದ್ಯಾರ್ಥಿಗಳು ಕಂಸಾಳೆ, ಪೂಜಾ ಕುಣಿತ, ಮೂಕಾಭಿನಯ ಸೇರಿದಂತೆ ತಮ್ಮಲ್ಲಿನ ವಿವಿಧ ಪ್ರತಿಭೆಗಳನ್ನು ಪ್ರದರ್ಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.