ನಾಮನಿರ್ದೇಶಕ್ಕೆ ಇನ್ನೂ ಬೀಳದ ರಾಜ್ಯಪಾಲರ ಅಂಕಿತ
Team Udayavani, May 11, 2017, 10:05 AM IST
ಬೆಂಗಳೂರು:ರಾಜ್ಯ ವಿಧಾನ ಪರಿಷತ್‌ಗೆ ಮೂವರ ಹೆಸರನ್ನು ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿ ರಾಜ್ಯಪಾಲರಿಗೆ ಕಳುಹಿಸಿ ಕೊಟ್ಟು ವಾರ ಕಳೆದರೂ ಇನ್ನೂ ಅಂಕಿತ ದೊರೆತಿಲ್ಲ.ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಮಂಗಳವಾರ ರಾಜ್ಯಪಾಲರನ್ನು ಭೇಟಿ ಮಾಡಿ ಮೂವರ ಹೆಸರುಗಳನ್ನು ಶಿಫಾರಸ್ಸು ಮಾಡಿರುವುದಕ್ಕೆ ಸೂಕ್ತ ವಿವರಣೆ ನೀಡಿದ್ದರು.ಆದರೂ, ರಾಜ್ಯಪಾಲರು ಕೆಲವು ಸ್ಪಷ್ಟನೆ ಕೇಳಿದ್ದಾರೆ. ಹೀಗಾಗಿ, ವಿಳಂಬವಾಗುತ್ತಿದೆ ಎಂದು ಹೇಳಲಾಗಿದೆ.
ಪಿ.ಆರ್. ರಮೇಶ್, ಲಿಂಗಪ್ಪ ಹಾಗೂ ಮೋಹನ್ ಕೊಂಡಜ್ಜಿ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿರುವುದರಿಂದ ರಾಜ್ಯಪಾಲರು ಅವರ ಹೆಸರುಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸ್ಪಷ್ಟನೆ ಕೋರಿದ್ದಾರೆ ಎನ್ನಲಾಗಿದೆ.
ಮೂವರು ನಾಮಕರಣ ಶಿಫಾರಸು ರಾಜ್ಯಪಾಲರು ವಾಪಸ್ ಕಳುಹಿಸುತ್ತಾರಾ ಎಂಬ ಆತಂಕವೂ ರಾಜ್ಯ ಸರ್ಕಾರಕ್ಕೆ ಇದೆ. ಯಾಕೆಂದರೆ ಹಿಂದೊಮ್ಮೆ ಬಿಜೆಪಿಯಿಂದ ಸೋಮಣ್ಣ ಅವರನ್ನು ನಾಮಕರಣ ಮಾಡಲು ಶಿಫಾರಸು ಮಾಡಿದ್ದಾಗ ಆಗಿನ ರಾಜ್ಯಪಾಲರು ವಾಪಸ್ ಕಳುಹಿಸಿದ್ದರು.
ಆದರೆ, ಮುಖ್ಯಮಂತ್ರಿಯವರು ಭೇಟಿ ಮಾಡಿ ಸೂಕ್ತ ವಿವರಣೆ ನೀಡಿರುವುದರಿಂದ ಮೂವರ ನಾಮನಿರ್ದೇಶಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
ಕಾಂಗ್ರೆಸ್ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್ ವಿಕ್ರಂ ಗೌಡ ಆಡಿಯೋ!
MUST WATCH
ಹೊಸ ಸೇರ್ಪಡೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.