ಪಾಲಿಕೆಯ 5458 ಬೋರ್‌ವೆಲ್‌ ನೀರು ಕುಡಿಯಲು ಯೋಗ್ಯವಲ್ಲ

Team Udayavani, Mar 28, 2017, 12:33 PM IST

borewe.jpg

ವಿಧಾನಸಭೆ: ಬಿಬಿಎಂಪಿ ವ್ಯಾಪ್ತಿಯ 5,458 ಕೊಳವೆ ಬಾವಿಗಳಲ್ಲಿನ ನೀರು ಕುಡಿಯಲು ಯೋಗ್ಯವಲ್ಲ ಎಂಬುದನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದ ವರದಿಯಲ್ಲಿ ಉಲ್ಲೇಖೀಸಿದೆ. ಏಳು ನಗರಸಭೆ, 1 ಪುರಸಭೆ ಬಿಬಿಎಂಪಿಗೆ ವ್ಯಾಪ್ತಿಗೆ ಸೇರಿದ ನಂತರ ಅಲ್ಲಿದ್ದ 3,454 ಕೊಳವೆ ಬಾವಿಗಳು ಜಲಮಂಡಳಿಗೆ ಹಸ್ತಾಂತರಗೊಂಡವು.

ಒಟ್ಟಾರೆ ಬಿಬಿಎಂಪಿಯ 12,986 ಕೊಳವೆಬಾವಿಗಳನ್ನು ಬಾರ್ಕ್‌ ಸಂಸ್ಥೆಯಿಂದ ಪರಿಶೀಲನೆ ಮಾಡಿಸಿದಾಗ 5,958 ದುಸ್ಥಿತಿಯಲ್ಲಿದ್ದವು. 6308 ಕೊಳವೆ ಬಾವಿಗಳು ಸುಸ್ಥಿತಿಯಲ್ಲಿದ್ದವು. ಸುಸ್ಥಿತಿಯಲ್ಲಿದ್ದ ಕೊಳವೆ ಬಾವಿಗಳ ನೀರನ್ನು ಪರಿಶೀಲಿಸಿದಾಗ ಕೇವಲ 850 ಕೊಳವೆ ಬಾವಿಗಳ ನೀರು ಮಾತ್ರ ಕುಡಿಯಲು ಯೋಗ್ಯ ಎಂದು ಪತ್ತೆಯಾಗಿದೆ.  ಕುಡಿಯಲು ಯೋಗ್ಯವಲ್ಲದ 5,458 ಕೊಳವೆ ಬಾವಿಗಳ ಬಗ್ಗೆ ಜಲಮಂಡಳಿ ಈ ವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಪಾಲಿಕೆಯಿಂದ ಜಲಮಂಡಳಿಗೆ ಹಸ್ತಾಂತರಗೊಂಡ 3,454 ಕೊಳವೆ ಬಾವಿಗಳ ಪೈಕಿ ಎಷ್ಟರಲ್ಲಿ ಕುಡಿಯಲು ಯೋಗ್ಯವಾದ ನೀರು ಇದೆ ಎಂಬುದರ ಮಾಹಿತಿಯೂ ಜಲಮಂಡಳಿಯಲ್ಲಿ ಇಲ್ಲ. ಜಲಮಂಡಳಿಯು ಹೊಸದಾಗಿ 2,100 ಕೊಳವೆ ಬಾವಿ ಕೊರೆಸಲು ಪಟ್ಟಿ ಸಿದ್ಧಪಡಿಸಿದೆ. ಆದರೆ, ಯಾವ ಮಾನದಂಡದಡಿ ಕೊಳವೆ ಬಾವಿ ಕೊರೆಸಲು ಸ್ಥಳ ಆಯ್ಕೆ ಮಾಡಲಾಯಿತು ಎಂಬುದರ ಬಗ್ಗೆಯೂ ಮಾಹಿತಿ ಇಲ್ಲ ಎಂದು ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ. 

ಕೊಳವೆ ಬಾವಿ ಕೊರೆಯುವ ಟೆಂಡರ್‌ ಆವಧಿ ಮುಗಿದ ನಂತರ ಹೊಸ ಟೆಂಡರ್‌ ಕರೆಯದೆ 75 ಕೊಳವೆ ಬಾವಿಗಳಿಗೆ 28.28 ಕೋಟಿ ರೂ.ಗಳ ಪ್ಯಾಕೇಜ್‌ ನೀಡಲಾಗಿದೆ. ಕಾಮಗಾರಿಗಳ ನಿರ್ವಹಣೆಗೆ ಬೇಕಾಗುವ ಸಾಮಗ್ರಿ ಖರೀದಿಯಲ್ಲಿ ನಿಯಮ ಪಾಲಿಸಿಲ್ಲ. ನಕಲಿ ಮಂಜೂರಾತಿ ಆದೇಶದಗಳ ಮೇಲೆ 6.06 ಕೋಟಿ ರೂ. ಮೊತ್ತದ 879 ವಸ್ತು ಖರೀದಿ ಮಾಡಲಾಗಿದೆ.

ಸಾಮಗ್ರಿಗಳ ಸರಬರಾಜು ಕೋರಿಕೆ ಪತ್ರಗಳ ಮೂಲ ಪ್ರತಿಗೂ ನಕಲು ಪ್ರತಿಗೂ ವ್ಯತ್ಯಾಸವಿದ್ದು ಪರಿಮಾಣ ತಿದ್ದಲಾಗಿದೆ. ನಕಲಿ ಆದೇಶ ಗಮನಿಸುವಲ್ಲಿ ಪ್ರಧಾನ ಎಂಜಿನಿಯರ್‌ ವಿಫ‌ಲರಾಗಿದ್ದಾರೆ. 4.36 ಕೋಟಿ ರೂ. ಸಾಮಗ್ರಿ ವೆಚ್ಚ ಹಾಗೂ ಕೊಳವೆ ಬಾವಿ ಸಮಗ್ರ ವಿವರಣೆ ಹೊಂದಿರುವ ದಾಖಲೆ ಇಟ್ಟಿಲ್ಲದಿರುವುದು ಸಮಿತಿಯ ವರದಿಯಲ್ಲಿ ಉಲ್ಲೇಖವಾಗಿದೆ.

ಟಾಪ್ ನ್ಯೂಸ್

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.