ನೂರಾರು ಅನಿವಾಸಿಗಳ ವಿಳಾಸವೇ ನಾಪತ್ತೆ

Team Udayavani, Apr 9, 2020, 11:38 AM IST

bng-tdy-1

ಸಾಂದರ್ಭಿಕ ಚಿತ್ರ

ಬೆಂಗಳೂರು: ವಿದೇಶದಿಂದ ರಾಜ್ಯಕ್ಕೆ ಹಾರಿಬಂದ ಸಾವಿರಾರು ಅನಿವಾಸಿ ಭಾರತೀಯರ ಪೈಕಿ ಇನ್ನೂ ನೂರಾರು ಜನ ಪತ್ತೆಯೇ ಆಗಿಲ್ಲ! ಮಾರ್ಚ್‌ 7ರಿಂದ 22ರವರೆಗೆ 40 ಸಾವಿರಕ್ಕೂ ಅಧಿಕ ಜನ ರಾಜ್ಯಕ್ಕೆ ಬಂದಿಳಿದಿದ್ದಾರೆ. ಆ ಪೈಕಿ ಬಹುತೇಕ ಎಲ್ಲರನ್ನೂ ಪತ್ತೆ ಮಾಡಿ, ಕ್ವಾರಂಟೈನ್‌ ಮಾಡುವಲ್ಲಿ ಆರೋಗ್ಯ ಇಲಾಖೆ ಯಶಸ್ವಿಯಾಗಿದೆ.

ಇದಲ್ಲದೆ, ಇನ್ನೂ ನೂರಾರು ಸಂಖ್ಯೆಯಲ್ಲಿ ಈ “ವಿದೇಶಿ ವರ್ಗ’ ಹರಿದುಹಂಚಿ ಹೋಗಿದ್ದು, ಇದುವರೆಗೆ ಅಂತಹವರ ಸುಳಿವು ಸಿಕ್ಕಿಲ್ಲ. ಚೆಕ್‌ಔಟ್‌ ಆಗುವಾಗ ನೀಡಿದ ಮಾಹಿತಿ ಹಾಗೂ ಪಾಸ್‌ಪೋರ್ಟ್‌ ವಿಳಾಸದ ಜಾಡುಹಿಡಿದು ಆರೋಗ್ಯ ಇಲಾಖೆ, ಪೊಲೀಸರು ಮತ್ತು ಗುಪ್ತಚರ ಇಲಾಖೆ ಈಗ ಈ ನಾಪತ್ತೆಯಾದವರ ಹಿಂದೆಬಿದ್ದಿದೆ.

ಉದ್ದೇಶಪೂರ್ವಕ ಹಳೆಯ ವಿಳಾಸ?: ಬೆಂಗಳೂರಿನಂತಹ ಮಹಾನಗರಗಳಲ್ಲಿ ಮನೆಗಳನ್ನು ಆಗಾಗ್ಗೆ ಬದಲಾಯಿಸುವುದು ಮಾಮೂಲು. ಆದರೆ, ಪಾಸ್‌ಪೋರ್ಟ್‌ನಲ್ಲಿರುವ ವಿಳಾಸ ಹಲವು ವರ್ಷಗಳ ಹಿಂದಿನದ್ದಾಗಿರುತ್ತದೆ. ತಮ್ಮನ್ನೂ ಕ್ವಾರಂಟೈನ್‌ ಮಾಡಬಹುದು ಎಂಬ ಆತಂಕದಲ್ಲಿ ಪ್ರಸ್ತುತ ವಿಳಾಸವನ್ನೂ ಕೆಲವರು ಪಾಸ್‌ಪೋರ್ಟ್‌ನಲ್ಲಿದ್ದ ಮಾಹಿತಿಯನ್ನೇ ದಾಖಲಿಸಿದ್ದಾರೆ. ಹೀಗಾಗಿ, ಪತ್ತೆಹಚ್ಚುವುದು ಕಷ್ಟವಾಗುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲೇ ಎಂಟು ವಲಯಗಳಿದ್ದು, ತಲಾ ಒಂದರಲ್ಲಿ ಇಂತಹ ಸರಾಸರಿ 50 ಪ್ರಕರಣಗಳನ್ನು ಕಾಣಬಹುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದರು.

ಹಾಗಂತ, ಇವರಿಂದ ಅಪಾಯ ಕಾದಿದೆ ಎಂದಲ್ಲ; ಆದರೆ, ಸರ್ಕಾರಕ್ಕೆ ಅವರೆಲ್ಲಿದ್ದಾರೆ ಎಂಬುದಾದರೂ ಗೊತ್ತಾಗಲೇಬೇಕು. ಜತೆಗೆ ಎಲ್ಲೆಲ್ಲಿ ಓಡಾಡಿದ್ದಾರೆ ಎನ್ನುವುದೂ ತಿಳಿಯಬೇಕು. ಮಾ. 7ರಿಂದ ಲೆಕ್ಕಹಾಕಿದರೆ, ಕೆಲವರು ಈಗಾಗಲೇ 14 ದಿನಗಳ ಅವಧಿ ಪೂರೈಸಿಬಿಟ್ಟಿದ್ದಾರೆ. ಅದರಲ್ಲಿ ತಿಂಗಳ ಕೊನೆಗೆ ಬಂದವರೂ ಇದ್ದಾರೆ. ಹಾಗಾಗಿ, ನಿರ್ಲಕ್ಷಿಸುವಂತೆಯೂ ಇಲ್ಲ ಎಂದು ಅಧಿಕಾರಿಗಳು ಹೇಳಿದರು.

ಸಿಕ್ಕ ಮಾಹಿತಿ ಪೊಲೀಸರಿಗೆ ರವಾನೆ: ಉಳಿದಂತೆ ಎಲ್ಲರನ್ನೂ ಪತ್ತೆಹಚ್ಚಿ, ಜಿಪಿಎಸ್‌ ಆಧಾರಿತ ಮನೆ ವಿಳಾಸ ಸಹಿತ ಎಲ್ಲ ಮಾಹಿತಿಯನ್ನು ಆಯಾ ವ್ಯಾಪ್ತಿಗೆ ಬರುವ ಠಾಣೆಗೆ ಹಸ್ತಾಂತರಿಸಲಾಗಿದೆ. ಕ್ವಾರಂಟೈನ್‌ ಮಾಡಿ, ಕಾವಲು ಕಾಯಲಾಗುತ್ತಿದೆ. ಆದ್ದರಿಂದ ಸಮಸ್ಯೆ ಇಲ್ಲ ಎನ್ನಲಾಗಿದೆ. ಈ ಪತ್ತೆಯಾಗದ ಪ್ರಕರಣಗಳ ಸಂಬಂಧ ಹಲವು ಬಾರಿ ಆರೋಗ್ಯ ಇಲಾಖೆ ಅಧಿಕಾರಿಗಳ ಭೇಟಿಗೆ ಪ್ರಯತ್ನಿಸಿದರೂ, ಪ್ರತಿಕ್ರಿಯೆ ಸಿಗಲಿಲ್ಲ.

ಈ ಮಧ್ಯೆ ಮಹದೇವಪುರ ಸೇರಿದಂತೆ ಕೆಲವು ಕಡೆಗಳಲ್ಲಿ ಸ್ಥಳೀಯ ನಿವಾಸಿಗಳ ಸಂಘಗಳ ನೆರವಿನಿಂದ ಮನೆ-ಮನೆ ಸಮೀಕ್ಷೆ ನಡೆಸಿ, ವಿದೇಶದಿಂದ ಬಂದರೂ ಮುದ್ರೆ ಹಾಕಿರದ ನೂರಾರು ಜನರ ಮಾಹಿತಿ ಕಲೆಹಾಕಲಾಗಿದೆ. ಹಲವರು ಸ್ವಯಂಪ್ರೇರಿತವಾಗಿಯೂ ಹೆಸರು ನೋಂದಾಯಿಸಿದ್ದಾರೆ. ಕೇವಲ ಫೋರ್ಸ್‌ ಗ್ರೇಟರ್‌ ವೈಟ್‌ ಫೀಲ್ಡ್‌ ಇಂತಹ 250ಕ್ಕೂ ಅಧಿಕ ಜನರನ್ನು ಪತ್ತೆ ಮಾಡಿ, ಆರೋಗ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಸೀಗೇಹಳ್ಳಿಯ ಲಿಂಗರಾಜ ಅರಸ್‌ ತಿಳಿಸಿದರು.

ವಿಳಾಸ ಅದೇ; ವ್ಯಕ್ತಿ ಬೇರೆ! :  ದುಬೈ, ಜರ್ಮನಿ, ಅಮೆರಿಕ ಸೇರಿದಂತೆ ವಿವಿಧ ದೇಶಗಳಿಂದ ಬಂದ ಜನ ಬೆಂಗಳೂರು, ಮಂಗಳೂರು, ಮೈಸೂರು ಮತ್ತಿತರ ಮಹಾನಗರಗಳಲ್ಲಿ ಹರಿದುಹಂಚಿ ಹೋಗಿದ್ದಾರೆ. ಈ ಪೈಕಿ ಅರ್ಧಕ್ಕರ್ಧ ಅಂದರೆ ಸುಮಾರು 20 ಸಾವಿರಕ್ಕೂ ಅಧಿಕ ಜನ ಬೆಂಗಳೂರಿನಲ್ಲೇ ಇದ್ದಾರೆ. ಅದರಲ್ಲಿ ಅಂದಾಜು 800ಕ್ಕೂ ಹೆಚ್ಚು ಜನ ನೀಡಿರುವ ವಿಳಾಸಕ್ಕೆ ಭೇಟಿ ನೀಡಿದರೆ, ಆ ವ್ಯಕ್ತಿಯೇ ಇರುವುದಿಲ್ಲ. ನಂತರ ಫೋನಾಯಿಸಿದರೆ, ಸ್ವಿಚ್ಡ್ ಆಫ್ ಅಥವಾ ನಂಬರ್‌ ಅಸ್ತಿತ್ವದಲ್ಲೇ ಇರುವುದಿಲ್ಲ. ಹಾಗಾಗಿ, ಗುಪ್ತಚರ ಸಿಬ್ಬಂದಿ ನೆರವೂ ಪಡೆಯಲಾಗಿದೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದರು.

-ವಿಜಯಕುಮಾರ್‌ ಚಂದರಗಿ 

ಟಾಪ್ ನ್ಯೂಸ್

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.