ನೋಟಾ ಮತವೂ ಪರಿಣಾಮ ಬೀರುತ್ತೆ

Team Udayavani, Apr 17, 2019, 3:00 AM IST

nota-mata

ಬೆಂಗಳೂರು: ಬೆಂಗಳೂರಿನ ನೂರಾರು ವಿದ್ಯಾರ್ಥಿಗಳು ವಿಭಿನ್ನ ರೀತಿಯಲ್ಲಿ ಮತದಾನ ಜಾಗೃತಿ ಮೂಡಿಸುತ್ತಿದ್ದಾರೆ. ಇದಕ್ಕೆ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯುನ್ಮಾನ ವಿಭಾಗದ ವಿದ್ಯಾರ್ಥಿಗಳೂ ಕೈಜೋಡಿಸಿದ್ದು, ಬೀದಿ ನಾಟಕಗಳನ್ನು ಮಾಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯ, ರಾಜಾಜಿನಗರ, ಜಯನಗರದ ಕಾಲೇಜು ಮತ್ತು ಜನನಿಬಿಡ ಪ್ರದೇಶಗಳಲ್ಲಿ ವಿದ್ಯುನ್ಮಾನ ವಿಭಾಗದ ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ. ವಿದ್ಯಾರ್ಥಿಗಳು ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅದನ್ನು ನಾಟಕದ ವಿಷಯವಸ್ತುವನ್ನಾಗಿಸಿಕೊಂಡಿದ್ದಾರೆ. 40 ವಿದ್ಯಾರ್ಥಿಗಳು 5 ತಂಡಗಳ ಮೂಲಕ ಬೀದಿ ನಾಟಕಗಳನ್ನು ಮಾಡಿದ್ದಾರೆ.

ನೋಟಾ ಕೂಡ ಹಕ್ಕು ಚಲಾವಣೆ: ನೋಟಾ ಚಲಾವಣೆಯೂ ನಿಮ್ಮ ಹಕ್ಕು ಚಲಾವಣೆಯ ಒಂದು ಭಾಗ ಎಂದು ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ನೋಟಾ ಚಲಾವಣೆಯ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. “ನೋಟಾ ಚಲಾವಣೆ ಮಾಡುವುದರಿಂದ ಯಾವುದೇ ಲಾಭ ಇಲ್ಲ ಎಂದು ಬಹಳಷ್ಟು ಜನ ಭಾವಿಸಿದ್ದಾರೆ. ಹೀಗಾಗಿ, ನೋಟಾ ಚಲಾವಣೆಯ ಆಯ್ಕೆಯನ್ನು ಸಾರ್ವಜನಿಕರು ಮಾಡುತ್ತಿಲ್ಲ’ ಎನ್ನುತ್ತಾರೆ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯುನ್ಮಾನ ವಿಭಾಗದ 2ನೇ ಸೆಮಿಸ್ಟರ್‌ ವಿದ್ಯಾರ್ಥಿ ಅರುಣ್‌.

“ಜನರಲ್ಲಿ ನೋಟಾ ಚಲಾವಣೆಯ ಬಗ್ಗೆ ನಿರಾಸಕ್ತಿ ಇದೆ. ನೋಟಾ ಚಲಾವಣೆ ಮಾಡಿದರೂ ತಮಗೆ ಬೇಡವಾದ ಅಭ್ಯರ್ಥಿ ಆಯ್ಕೆಯಾಗುತ್ತಾರೆ ಎಂದು ಮತದಾರರು ಭಾವಿಸುತ್ತಾರೆ. ಆದರೆ, ಅತೀ ಹೆಚ್ಚು ನೋಟಾ ಚಲಾವಣೆಯಾದಾಗಲೂ ಪಕ್ಷಗಳು ತಮ್ಮ ನಿಲುವು ಮತ್ತು ಅಭ್ಯರ್ಥಿಗಳನ್ನು ಬದಲಾಯಿಸಬೇಕಾಗುತ್ತದೆ’ ಎಂದು ಮತದಾರರಲ್ಲಿ ಅರಿವು ಮೂಡಿಸಲಾಗುತ್ತಿದೆ ಎನ್ನುತ್ತಾರೆ ಅರುಣ್‌.

“ಈ ರೀತಿ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿರುವುದರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೊಸ ಚಿಂತನೆ ಅಭಿಪ್ರಾಯಗಳನ್ನು ಸಾರ್ವಜನಿಕರು ಬೆಂಬಲಿಸಿದ್ದಾರೆ’ ಎನ್ನುತ್ತಾರೆ ವಿಭಾಗದ ಪ್ರಾಧ್ಯಾಪಕರು. ಆಮಿಷಗಳಿಗೆ ಬಲಿಯಾಗಬೇಡಿ, ಈ ಹಿಂದೆ ಗೆಲುವು ಸಾಧಿಸಿದ್ದರೂ ಯಾವುದೇ ಕೆಲಸ ಮಾಡದ ನಾಯಕರಿಗೂ ಮತ ನೀಡಬೇಡಿ ಎನ್ನುವ ವಿಷಯಗಳನ್ನು ಇಟ್ಟುಕೊಂಡು ಜಾಗೃತಿ ಮೂಡಿಸಲಾಗಿದೆ.

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.