ರೆಡ್ಡಿ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಸೂಚನೆ
Team Udayavani, Dec 5, 2018, 6:00 AM IST
ಬೆಂಗಳೂರು: ಆ್ಯಂಬಿಡೆಂಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಯಾವುದೇ ಕ್ರಮ ಜರುಗಿಸದಂತೆ ಸಿಸಿಬಿ ಪೊಲೀಸರಿಗೆ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ಮಂಗಳವಾರ ಪುನಃ ವಿಸ್ತರಿಸಿದೆ. ತಮ್ಮ ವಿರುದ್ಧ ಸಿಸಿಬಿ ಪೊಲೀಸರು ದಾಖಲಿಸಿರುವ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಜನಾರ್ದನ ರೆಡ್ಡಿ ಹಾಗೂ ಅವರ ಆಪ್ತ ಅಲಿ ಖಾನ್ ಸಲ್ಲಿಸಿರುವ ಅರ್ಜಿಯನ್ನು ನ್ಯಾ.ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯ ಪೀಠ ವಿಚಾರಣೆ ನಡೆಸಿತು. ಪ್ರಕರಣದ ದೂರುದಾರರಿಗೆ ನೋಟಿಸ್ ಜಾರಿ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅರ್ಜಿದಾರರಾದ ಜನಾರ್ದನ ರೆಡ್ಡಿ ವಿರುದಟಛಿ ಬಲವಂತದ ಕ್ರಮ ಜರುಗಿಸದಂತೆ ನಿರ್ದೇಶನ ನೀಡಿ ನ್ಯಾಯಪೀಠ ವಿಚಾರಣೆ ಮುಂದೂಡಿತು.
ಆ್ಯಂಬಿಡೆಂಟ್ ವಂಚನೆ ಪ್ರಕರಣಕ್ಕೂ, ಜನಾರ್ದನ ರೆಡ್ಡಿ ಹಾಗೂ ಅಲಿ ಖಾನ್ಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಅರ್ಜಿದಾರರು ನೇರವಾಗಿ ಭಾಗಿಯಾಗಿಲ್ಲ. ಆ್ಯಂಬಿಡೆಂಟ್ ಕಂಪನಿಯಲ್ಲಿ ಹೂಡಿಕೆ ಮಾಡುವಂತೆ ಜನಾರ್ದನ ರೆಡ್ಡಿ ಯಾರಿಗೂ ಹೇಳಿಲ್ಲ ಮತ್ತು ಸ್ವತಃ ಹೂಡಿಕೆ ಮಾಡಿಲ್ಲ. ಹೂಡಿಕೆ ದಾರರ ರಕ್ಷಣಾ ಕಾಯ್ದೆ ಅರ್ಜಿದಾರರಿಗೆ ಅನ್ವಯವಾಗುವುದಿಲ್ಲ. ಆದ್ದರಿಂದ ಎಫ್ ಐಆರ್ ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಜನಾರ್ದನ ರೆಡ್ಡಿ ಪರ ಆರ್.ಪಿ.ಚಂದ್ರ ಶೇಖರ್ ಹಾಗೂ ಸಿಸಿಬಿ ಪರ ಬಿ.ಎನ್.ಜಗದೀಶ್ ವಾದ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.