ಬೆಂಗಳೂರು ಒನ್ ಕೇಂದ್ರಗಳಲ್ಲಿ ನೋಟು ಬದಲಾವಣೆ ಅಕ್ರಮ
Team Udayavani, Jul 1, 2018, 3:41 PM IST
ಬೆಂಗಳೂರು: ನೋಟು ಅಮಾನ್ಯಗೊಂಡ ಸಂದರ್ಭದಲ್ಲಿ ಪಾಲಿಕೆ ವ್ಯಾಪ್ತಿಯ “ಬೆಂಗಳೂರು ಒನ್’ ಕೇಂದ್ರಗಳ ಮೂಲಕ ಪ್ರಭಾವಿ ರಾಜಕಾರಣಿಗಳು ಸುಮಾರು 410 ಕೋಟಿ ರೂ. ಗಿಂತ ಅಧಿಕ ಮೌಲ್ಯದ ಹಳೆಯ ನೋಟುಗಳನ್ನು ಬದಲಾಯಿಸಿಕೊಂಡಿದ್ದಾರೆ ಎಂದು ಬಿಜೆಪಿ ನಗರ ವಕ್ತಾರ ಎನ್.ಆರ್.ರಮೇಶ್ ಆರೋಪಿಸಿದ್ದಾರೆ.
ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರಮೇಶ್, 2016ರ ನ.8ರಂದು ಪ್ರಧಾನಿ ನರೇಂದ್ರ ಮೋದಿಯವರು ಹಳೆಯ 500 ಹಾಗೂ 1000 ರೂ. ಮುಖ ಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಿದ್ದರು. ಈ ವೇಳೆ ಕೆಲ ಪ್ರಭಾವಿ ರಾಜಕಾರಣಿಗಳು, ತಮ್ಮ ಬಳಿ ಇದ್ದ 500 ಹಾಗೂ 1000 ರೂ. ನೋಟುಗಳನ್ನು ಕೊಟ್ಟು, ಬೆಂಗಳೂರು ಒನ್ ಕೇಂದ್ರಗಳಲ್ಲಿ ಸಂಗ್ರಹವಾಗುವ 50 ಹಾಗೂ 100 ರೂ. ಮುಖ ಬೆಲೆ ನೋಟು ಪಡೆಯುವ ಮೂಲಕ ಅಕ್ರಮವೆಸಗಿದ್ದಾರೆ ಎಂದು ದೂರಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 93 ಬೆಂಗಳೂರು ಒನ್ ಕೇಂದ್ರಗಳಿದ್ದು, ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸುಮಾರು 96 ಇಲಾಖೆಗಳಿಗೆ ಸೇರಿದ ಸೇವೆಗಳನ್ನು ನೀಡಲಾಗುತ್ತಿದೆ. ಅದರಂತೆ 2016ರ ನ.9ರಿಂದ ಮಾರ್ಚ್ 2017ರ 31ರವರೆಗೆ, 141 ದಿನಗಳ ಕಾಲ ಕೇಂದ್ರಗಳಲ್ಲಿ ಸಂಗ್ರಹವಾದ ಹಣವನ್ನು ಬ್ಯಾಂಕ್‌ಗಳಿಗೆ ಸಮರ್ಪಕವಾಗಿ
ಪಾವತಿಸದಿರುವುದು ಕಂಡುಬಂದಿದೆ. ಇದೇ ಅವಧಿಯಲ್ಲಿ ಸುಮಾರು 410 ಕೋಟಿ ರೂ. ಹಣ ಅಕ್ರಮವಾಗಿ ಬದಲಾವಣೆಯಾಗಿದೆ ಎಂದು ದೂರಿದರು.
ಬೆಂಗಳೂರು ಒನ್ ಕೇಂದ್ರಗಳನ್ನು ನಿರ್ವಹಿಸುತ್ತಿರುವ ಸಿಎಂಎಸ್ ಕಂಪ್ಯೂಟರ್ ಲಿಮಿಟೆಡ್ ಸಂಸ್ಥೆ ಮುಖ್ಯಸ್ಥರು ಸಹ ಅಕ್ರಮದಲ್ಲಿ ಶಾಮೀಲಾಗಿದ್ದು, ನೋಟು ಬದಲಾವಣೆಗೆ ಸಹಕರಿಸಿದ್ದಾರೆ. ಅದು ಸಹ ಕಮೀಷನ್ ಆಧಾರದ ಮೇಲೆ ಅಕ್ರಮ ನಡೆದಿರುವ ಅಕ್ರಮದ ಹಿಂದೆ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಜೆ.ಜಾರ್ಜ್, ಶಾಸಕ ಬೈರತಿ ಬಸವರಾಜ್ ಕೈವಾಡ ಇದ್ದು ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ, ಜಾರಿ ನಿರ್ದೇಶನಾಲಯ, ಎಸಿಬಿ ಹಾಗೂ ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಹೇಳಿದರು.
ಕೋಟ್ಯಂತರ ರೂ. ಅಕ್ರಮವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೂಡಲೇ ಸಿಬಿಐ, ಸಿಐಡಿ ಅಥವಾ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ವಹಿಸುವ ಮೂಲಕ ಭ್ರಷ್ಟಾಚಾರದ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿ ಸಿದರು.
ಯಾರಾದರೂ ನಿಮ್ಹಾನ್ಸ್‌ಗೆ ಸೇರಿಸಿ ಬನ್ನಿ! ಎನ್.ಆರ್.ರಮೇಶ್ ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸಿರುವ
ಶಾಸಕ ಭೈರತಿ ಬಸವರಾಜ, “ಆತನಿಗೆ ಬೇರೆ ಕೆಲಸವಿಲ್ಲದ ಕಾರಣ ಇಂತಹ ಆರೋಪಗಳನ್ನು ಮಾಡಿ ಕೊಂಡು ತಿರುಗುತ್ತಾನೆ.ಅವನೊಬ್ಬ ಮಾನಸಿಕ ಅಸ್ವಸ್ಥ ಯಾರಾದರೂ ಕರೆದುಕೊಂಡು ಹೋಗಿ ನಿಮ್ಹಾನ್ಸ್‌ಗೆ ಸೇರಿಸಬೇಕು. ಈ ಹಿಂದೆಯೂ ಕೆ.ಆರ್.ಪುರಕ್ಕೆ ಬಂದು 1500 ಕೋಟಿ ರೂ. ಅನುದಾನ ತಿಂದಿದ್ದಾರೆ ಎಂದು ಆರೋಪ ಮಾಡಿದ್ದ. ಅದು ಸುಳ್ಳಾಗಿದೆ. ಬೆಂಗಳೂರು ಒನ್ ಕೇಂದ್ರದಲ್ಲಿ ಈ ರೀತಿ ನೋಟುಗಳ ಬದಲಾವಣೆ ಮಾಡಲು ಸಾಧ್ಯವೇ? ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.