![Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್ ಮೇಲೇ ಕಣ್ಣು!](https://www.udayavani.com/wp-content/uploads/2024/12/puttige-shree-1-415x253.jpg)
ನಟ ದುನಿಯಾ ವಿಜಯ್‌ಗೆ ನೋಟಿಸ್
Team Udayavani, Jan 21, 2020, 3:06 AM IST
![salaga](https://www.udayavani.com/wp-content/uploads/2020/01/salaga-1-620x402.jpg)
ಬೆಂಗಳೂರು: ನಟ ದುನಿಯಾ ವಿಜಯ್ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ನಡುರಸ್ತೆಯಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಣೆ ಹಾಗೂ “ಸಲಗ’ ಚಿತ್ರದ ಟೀಸರ್ ಬಿಡುಗಡೆ ವೇಳೆ ನಟ ದುನಿಯಾ ವಿಜಯ್ ಉದ್ದದ ಕತ್ತಿಯಿಂದ ಕೇಕ್ ಕತ್ತರಿಸುವ ಮೂಲಕ ವಿವಾದಕ್ಕೀಡಾಗಿದ್ದಾರೆ.
ಈ ಸಂಬಂಧ ಗಿರಿನಗರ ಠಾಣೆ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆ ಮತ್ತು ಸಂಚಾರ ನಿಯಮ ಉಲ್ಲಂಘನೆ ಆರೋಪದಡಿ ನೋಟಿಸ್ ಜಾರಿ ಮಾಡಲಾಗಿದೆ. ಜ.20ರಂದು ದುನಿಯಾ ವಿಜಯ್ ಅವರು 46ನೇ ಹುಟ್ಟುಹಬ್ಬವಿತ್ತು. ಈ ವೇಳೆ ಅಭಿಮಾನಿಗಳು ಗಿರಿನಗರದ ಅವರ ನಿವಾಸದ ಬಳಿ ಭಾನುವಾರ ರಾತ್ರಿ ಸೇರಿದ್ದರು.
ವಿಜಯ್, ತಮ್ಮ ಪತ್ನಿ ಹಾಗೂ ಪೋಷಕರ ಸಮ್ಮುಖದಲ್ಲಿ ಬೃಹತ್ ಗಾತ್ರದ ಕೇಕ್ ಅನ್ನು ಉದ್ದದ ಕತ್ತಿ ಮೂಲಕ ಕತ್ತರಿಸಿ, “ಸಲಗ’ ಸಿನಿಮಾದ ಒಂದೂವರೆ ನಿಮಿಷದ ಟೀಸರ್‌ನ್ನು ಬಿಡುಗಡೆಗೊಳಿಸಿದ್ದರು. ಈ ಸಂಬಂಧ ನೋಟಿಸ್ ನೀಡಲಾಗಿದೆ ಎಂದು ಪೊಲೀಸರು ಹೇಳಿದರು.
ನೋಟಿಸ್‌ನಲ್ಲಿ ಏನಿದೆ?: ಹುಟ್ಟುಹಬ್ಬವನ್ನು ರಸ್ತೆಯಲ್ಲಿ ಆಚರಿಸಿದರಿಂದ ವಾಹನಗಳು ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗಿದೆ. ಸಾರ್ವಜನಿಕರ ಎದುರು ಅಪಾಯಕಾರಿ ಆಯುಧ ತಲ್ವಾರ್‌ನಿಂದ ಕೇಕ್ ಕತ್ತರಿಸಿದ್ದೀರಾ.
ಇದು ಶಸ್ತ್ರಾಸ್ತ್ರಗಳ ಕಾಯ್ದೆ ಉಲ್ಲಂಘನೆಯಾಗಿದೆ. ಅಲ್ಲದೆ ಅನುಮತಿ ಪಡೆಯದೇ ಡಿಜೆ ಸೌಂಡ್ ಸಿಸ್ಟಂ ಬಳಸಿ ಸಾರ್ವಜನಿಕರಿಗೆ ತೊಂದರೆ ನೀಡಲಾಗಿದೆ. ಈ ಸಂಬಂಧ ನೋಟಿಸ್ ತಲುಪಿದ ಮೂರು ದಿನದೊಳಗೆ ವಿಚಾರಣೆಗೆ ಹಾಜರಾಗಬೇಕು ಎಂದು ಪೊಲೀಸರು ವಿವರಿಸಿದ್ದಾರೆ.
ಟಾಪ್ ನ್ಯೂಸ್
![Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್ ಮೇಲೇ ಕಣ್ಣು!](https://www.udayavani.com/wp-content/uploads/2024/12/puttige-shree-1-415x253.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು](https://www.udayavani.com/wp-content/uploads/2024/12/bigg-2-150x96.jpg)
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
![BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು](https://www.udayavani.com/wp-content/uploads/2024/12/gold-1-150x97.jpg)
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
![Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ](https://www.udayavani.com/wp-content/uploads/2024/12/17-1-150x90.jpg)
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
![Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ](https://www.udayavani.com/wp-content/uploads/2024/12/16-2-150x90.jpg)
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
![ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ](https://www.udayavani.com/wp-content/uploads/2024/12/11-20-150x90.jpg)
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.