ಅಜಿತಾಬ್ ಪ್ರಕರಣದ ತನಿಖಾ ವರದಿ ಸಲ್ಲಿಸಲು ಸೂಚನೆ
Team Udayavani, Jun 5, 2018, 11:51 AM IST
ಬೆಂಗಳೂರು: ಟೆಕ್ಕಿ ಅಜಿತಾಬ್ ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿ ಮುಂದಿನ ಹತ್ತು ದಿನಗಳಲ್ಲಿ ವರದಿ ಸಲ್ಲಿಸುವಂತೆ ಸಿಐಡಿಗೆ ಹೈಕೋರ್ಟ್ ಸೂಚಿಸಿದೆ.
ಪುತ್ರನ ನಾಪತ್ತೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದ ಅಜಿತಾಬ್ ತಂದೆ ಅಶೋಕ್ ಕುಮಾರ್ ಸಿನ್ಹಾ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿತು.
ವಿಚಾರಣೆ ವೇಳೆ ಸಿಐಡಿ ಪರ ಸರ್ಕಾರಿ ವಕೀಲರು ವಾದಿಸಿ, ಅಜೀತಾಬ್ ಪತ್ತೆ ಪ್ರಕರಣವನ್ನು ಹಲವು ಆಯಾಮಗಳಲ್ಲಿ ಹಾಗೂ ನೂತನ ತಂತ್ರಜ್ಞಾನ ಮಾದರಿ ಅಳವಡಿಸಿ ತನಿಖೆ ನಡೆಸಲಾಗುತ್ತಿದೆ. ಅಜಿತಾಬ್ ಕೊನೆಯ ಬಾರಿ ಮಾಡಿದ ದೂರವಾಣಿ ಕರೆಯ ಬಗ್ಗೆ ಸುಳಿವು ದೊರೆತಿದ್ದು, ತನಿಖೆ ಮಾಡಲಾಗುತ್ತಿದೆ. ಮತ್ತಷ್ಟು ಕಾಲಾವಕಾಶ ನೀಡುವಂತೆ ಕೋರಿದರು.
ಆದರೆ, ಹೆಚ್ಚಿನ ಕಾಲಾವಕಾಶ ನೀಡಲು ನಿರಾಕರಿಸಿದ ನ್ಯಾಯಪೀಠ, ಪ್ರಕರಣದಲ್ಲಿ ಇದುವರೆಗೂ ಏನಾದರೂ ಮಹತ್ವದ ಸುಳಿವು ದೊರೆತಿದ್ದರೆ ತಿಳಿಸಿ. ಒಂದು ವೇಳೆ ಕೋರ್ಟ್ ಹಾಲ್ನಲ್ಲಿ ತಿಳಿಸಲು ಸಾಧ್ಯವಾಗದಿದ್ದರೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿ ಎಂದು ಹೇಳಿತಲ್ಲದೆ, ಮುಂದಿನ ಹತ್ತು ದಿನಗಳಲ್ಲಿ ತನಿಖೆಯ ಕನಿಷ್ಟ ಫಲಿತಾಂಶವನ್ನಾದರೂ ಕೊಡಲು ಪ್ರಯತ್ನಿಸಿ ವರದಿ ಸಲ್ಲಿಸಿ ಎಂದು ಸೂಚನೆ ನೀಡಿ ವಿಚಾರಣೆಯನ್ನು ಜೂನ್ 14ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.