ಅಧಿಕಾರ ದುರ್ಬಳಕೆ ಆರೋಪ ಲಕ್ಷ್ಮೀನಾರಾಯಣಗೆ ನೋಟಿಸ್
Team Udayavani, Jun 3, 2017, 12:48 PM IST
ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಸಂಧರ್ಭದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಂ. ಲಕ್ಷ್ಮೀನಾರಾಯಣ್‌ಗೆ ಹೈಕೋರ್ಟ್ ಶುಕ್ರವಾರ ನೋಟೀಸ್ ಜಾರಿಗೊಳಿಸಿದೆ.
ಲಕ್ಷ್ಮೀನಾರಾಯಣ್ ವಿರುದ್ಧದ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡುವುದು ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ನಗರಾಭಿವೃದ್ಧಿ ಇಲಾಖೆಯ ಮುಖ್ಯ ಕಾರ್ಯದರ್ಶಿಯ ನಿಲುವು ಪ್ರಶ್ನಿಸಿ “ನಮ್ಮ ಬೆಂಗಳೂರು ಫೌಂಡೇಶನ್’ ಸಂಸ್ಥೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎಸ್.ಕೆ ಮುಖರ್ಜಿ ಹಾಗೂ ಪಿ.ಎಸ್ ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ಪೀಠ ನೋಟೀಸ್ ಜಾರಿಮಾಡಿದೆ.
ಜೊತೆಗೆ ಲಕ್ಷ್ಮೀನಾರಾಯಣ್ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ವರದಿ ನೀಡುವಂತೆ ನಗರಾಭಿವೃದ್ಧಿ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೂ ನೋಟೀಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಲಾಗಿದೆ.
ಏನಿದು ಪ್ರಕರಣ?: ಕೋರಮಂಗಲದ ಮೂರನೇ ಬ್ಲಾಕ್‌ನಲ್ಲಿ ಬ್ರೇಕ್ ಫಾಸ್ಟ್ ಕ್ಲಬ್ ಹೋಟೆಲ್‌ಗೆ ಅಗತ್ಯವಿದ್ದ ಆರೋಗ್ಯಾಧಿಕಾರಿಗಳ ಶಿಫಾರಸು ಪತ್ರ ಕೊಡಿಸುವಲ್ಲಿ ಬಿಬಿಎಂಪಿ ಆಯುಕ್ತ ಲಕ್ಷ್ಮೀ ನಾರಾಯಣ್ ಅಧಿಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಪ್ರಾಸಿಕ್ಯೂಶನ್‌ಗೆ ನಡೆಸಲು ಅನುಮತಿ ನೀಡುವಂತೆ 2015ರ ಫೆಬ್ರವರಿಯಲ್ಲಿ ನಮ್ಮ ಬೆಂಗಳೂರು ಫೌಂಡೇಶನ್, ನಗರಾಭಿವೃದ್ಧಿ ಇಲಾಖೆ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿತ್ತು. ಆದರೆ ನಗರಾಭಿವೃದ್ಧಿ ಇಲಾಖೆ ಮುಖ್ಯಕಾರ್ಯದರ್ಶಿ, ಪ್ರಾಸಿಕ್ಯೂಶನ್ ಅನುಮತಿ ನನ್ನ ಅಧಿಕಾರ ವ್ಯಾಪ್ತಿಗೆ ಬರುವುದಿಲ್ಲ ಎಂದು ಉತ್ತರ ನೀಡಿದ್ದರು. ಇದನ್ನು ಪ್ರಶ್ನಿಸಿ (ಎನ್‌ಬಿಎಫ್ )ಹೈಕೋರ್ಟ್ ಮೆಟ್ಟಿಲೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.