ರಾಜೀನಾಮೆ ನೀಡಿದ ಶಾಸಕರಿಗೆ ವಿಧಾನಸಭಾ ಕಾರ್ಯದರ್ಶಿ ನೋಟಿಸ್
Team Udayavani, Jan 21, 2018, 6:45 AM IST
ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅದು ಅಂಗೀಕಾರವಾಗುವ ಮುನ್ನವೇ ಬಿಜೆಪಿ ಸೇರಿದ್ದ ಲಿಂಗಸಗೂರಿನ ಮಾನಪ್ಪ ವಜ್ಜಲ್ ಹಾಗೂ ರಾಯಚೂರಿನ ಡಾ. ಶಿವರಾಜ್ ಪಾಟೀಲ್ಗೆ ಸೋಮವಾರ ಸ್ಪೀಕರ್ ಕೆ.ಬಿ. ಕೋಳಿವಾಡ ಮುಂದೆ ಹಾಜರಾಗುವಂತೆ ವಿಧಾನಸಭಾ ಕಾರ್ಯದರ್ಶಿ ಎಸ್. ಮೂರ್ತಿ ನೋಟಿಸ್ ನೀಡಿದ್ದಾರೆ.
ರಾಜೀನಾಮೆಯನ್ನು ಖುದ್ದಾಗಿ ವಿಧಾನಸಭಾಧ್ಯಕ್ಷರಿಗೆ ನೀಡದಿರುವ ಹಿನ್ನೆಲೆಯಲ್ಲಿ ಹಾಜರಾತಿಗೆ ಸೂಚನೆ ನೀಡಲಾಗಿದೆ. ರಾಜೀನಾಮೆಯನ್ನು ಸ್ಪೀಕರ್ಗೆ ನೀಡುವ ಬದಲು ವಿಧಾನಸಭಾ ಕಾರ್ಯದರ್ಶಿಗೆ ನೀಡಿ ವಿಧಾನ ಮಂಡಲದ ನಿಯಮ ಉಲ್ಲಂಘಿಸಿದ್ದರು. ಅಲ್ಲದೆ, ರಾಜೀನಾಮೆ ಅಂಗೀಕಾರವಾಗುವ ಮುನ್ನವೇ ಬಿಜೆಪಿ ಸೇರ್ಪಡೆಯಾಗಿದ್ದರಿಂದ ಜೆಡಿಎಸ್ನ ಉಪಾಧ್ಯಕ್ಷ ಶರವಣ ಅವರು ಇಬ್ಬರು ಶಾಸಕರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಸ್ಪೀಕರ್ಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಜೀನಾಮೆಗೆ ಕಾರಣ ನೀಡುವಂತೆ ಹಾಗೂ ಸ್ಪೀಕರ್ ಮುಂದೆ ಹಾಜರಾಗಲು ಸೂಚನೆ ನೀಡಲಾಗಿದೆ. ಸಕಾರಣ ನೀಡಿದರೆ, ರಾಜೀನಾಮೆ ಅಂಗೀಕರಿಸುವ ಬಗ್ಗೆ ಸ್ಪೀಕರ್ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.