ಬಿಬಿಎಂಪಿ ಚುನಾವಣೆಗೆ ಸಜ್ಜಾಗಲು ಸೂಚನೆ

ನಗರದ ಸಚಿವರು, ಶಾಸಕರಿಗೆ ಸೂಚನೆ | ವಾರ್ಡ್‌ನಲ್ಲಿ ಕೇಂದ್ರ-ರಾಜ್ಯ ಸರ್ಕಾರ ಸಾಧನೆ ಜಾಗೃತಿ ಒತ್ತು

Team Udayavani, Nov 10, 2021, 10:18 AM IST

ಬಿಬಿಎಂಪಿ ಚುನಾವಣೆಗೆ ಸಜ್ಜಾಗಲು ಸೂಚನೆ

ಬೆಂಗಳೂರು: ಬಿಬಿಎಂಪಿ ಚುನಾವಣೆ ಎದುರಿಸಲು ಈಗಿನಿಂದಲೇ ಸಜ್ಜಾಗುವಂತೆ ಬಿಜೆಪಿ ನಗರದ ಸಚಿವರು ಶಾಸಕರಿಗೆ ಸೂಚನೆ ನೀಡಿದೆ. ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಬಿಬಿಎಂಪಿ ಚುನಾವಣೆ ಸಿದ್ಧತೆ ಕುರಿತು ನಗರದ ಸಚಿವರು, ಶಾಸಕರು ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರ ಜತೆ ನಡೆದ ಸಭೆಯಲ್ಲಿ, ಚುನಾವಣೆ ಮುಂದೂಡಿಕೆಯಾಗು ತ್ತದೆ ಎಂಬ ಮನಸ್ಸಿನಿಂದ ಹೊರಬನ್ನಿ ಎಂದು ನಾಯಕರು ಸೂಕ್ಷ್ಮವಾಗಿ ಹೇಳಿದರು ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಮಾತ ನಾಡಿ, ಚುನಾವಣೆ ಎದುರಿಸಲು ಅಗತ್ಯವಾದ ತಯಾರಿ ಮಾಡಿಕೊಳ್ಳಿ. ನ್ಯಾಯಾಲಯದ ತೀರ್ಪು ಏನೇ ಬರಲಿ. 198 ವಾರ್ಡ್‌ ಅಥವಾ 243 ವಾರ್ಡ್‌ಗೆ ಚುನಾವಣೆ ಘೋಷಣೆ ಯಾದರೂ ನಾವಂತೂ ಚುನಾವಣೆಗೆ ಸಜ್ಜಾಗಿರಬೇಕು ಎಂದು ತಿಳಿಸಿದರು ಎಂದು ಹೇಳಲಾಗಿದೆ. ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ ವಾರ್ಡ್‌ವಾರು ಸಂಘಟನಾ ಸಭೆ ನಡೆಸಿ ಎಂದು ತಿಳಿಸಿದರು ಎಂದು ಹೇಳಲಾಗಿದೆ.

ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಸಚಿವರಾದ ಆರ್‌.ಅಶೋಕ್‌, ಅಶ್ವತ್ಥನಾರಾ ಯಣ, ಎಸ್‌.ಟಿ.ಸೋಮ ಶೇಖರ್‌, ಮುನಿರತ್ನ, ಬೈರತಿ ಬಸವರಾಜ್‌, ಗೋಪಾಲಯ್ಯ, ಶಾಸಕರಾದ ಕೃಷ್ಣಪ್ಪ, ರವಿ ಸುಬ್ರಹ್ಮಣ್ಯ, ಉದಯ ಗರುಡಾಚಾರ್‌, ಎಸ್‌.ಆರ್‌.ವಿಶ್ವನಾಥ್‌, ಸತೀಶ್‌ ರೆಡ್ಡಿ, ಅರವಿಂದ ಲಿಂಬಾವಳಿ, ಸಂಸದ ಪಿ.ಸಿ.ಮೋಹನ್‌ ಸೇರಿ ಶಾಸಕರು, ಪರಿಷತ್‌ ಸದಸ್ಯರು ಸಭೆಯಲ್ಲಿ ಭಾಗವಹಿ ಸಿದ್ದರು. ವಿ.ಸೋಮಣ್ಣ ಅವರು ಅನಾ ರೋಗ್ಯ ಕಾರಣ ಗೈರು ಹಾಜರಾಗಿದ್ದರು. ಉಳಿ ಞದಂತೆ ಮಾಜಿ ಸಚಿವ ಸುರೇಶ್‌ ಕುಮಾರ್‌ ಹಾಗೂ ಶಾಸಕರ ರಘು ಅನು ಮತಿ ಪಡೆದು ಗೈರಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ:-ಕ್ಲೋರಿನ್ ಅನಿಲ ಸೋರಿಕೆಯಿಂದ ಅಗ್ನಿಶಾಮಕ ದಳ‌ದ 6 ಮಂದಿ ಅಸ್ವಸ್ಥ

 ಬಿಬಿಎಂಪಿ ಚುನಾವಣೆ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಇಂಗಿತ

ನವದೆಹಲಿ: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸಬೇಕು ಎಂಬ ಕರ್ನಾಟಕ ಸರ್ಕಾರದ ಮನವಿಯನ್ನು ಪರಿಣಿಗಸಲು ಸುಪ್ರೀಂಕೋರ್ಟ್‌ ನಿರ್ಧರಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ, ನ್ಯಾ. ಸೂರ್ಯಕಾಂತ್‌, ನ್ಯಾ.ಹಿಮಾ ಕೊಹ್ಲಿ ಅವರನ್ನೊಳಗೊಂಡ ನ್ಯಾಯಪೀಠಕ್ಕೆ 2020ರ ಡಿ.4ರಂದು ಕರ್ನಾಟಕ ಹೈಕೋರ್ಟ್‌ ನೀಡಿದ್ದ ತಡೆಯಾಜ್ಞೆ ಮತ್ತು ಬಿಬಿಎಂಪಿಯ ಐದು ವರ್ಷದ ಆಡಳಿತದ ಅವಧಿ 2020ರ ಸೆಪ್ಟೆಂಬರ್‌ನಲ್ಲಿಯೇ ಮುಕ್ತಾಯವಾಗಿದೆ.

ಹೀಗಾಗಿ, ಕೂಡಲೇ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ವಕೀಲ ನಝೀಮ್‌ ಪಾಶಾ ನ್ಯಾಯಪೀಠಕ್ಕೆ ಅರಿಕೆ ಮಾಡಿಕೊಂಡರು. ಕರ್ನಾಟಕ ಸರ್ಕಾರ ಚುನಾವಣೆ ನಡೆಸುವುದರ ಬದಲಾಗಿ, 2020 ಸೆ.23ರಂದು ಕ್ಷೇತ್ರಗಳ ಪುನರ್‌ ವಿಂಗಡಣೆ ನಡೆಸುವಂತೆ ಆದೇಶ ನೀಡಿತ್ತು. ಕರ್ನಾಟಕ ಹೈಕೋರ್ಟ್‌ ಸರ್ಕಾರದ ನಿರ್ಧಾರಕ್ಕೆ ತಡೆಯಾಜ್ಞೆ ನೀಡಿ, ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಆದೇಶ ನೀಡಿತ್ತು.

ಆದರೆ, ಸದ್ಯ ನಿವೃತ್ತರಾಗಿರುವ ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೋಬೆx ನೇತೃತ್ವದ ನ್ಯಾಯಪೀಠ 2020 ಡಿ.4ರಂದು ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು ಎಂದರು. ಅದಕ್ಕೆ ತಕ್ಷಣವೇ ಪ್ರತಿಕ್ರಿಯೆ ನೀಡಿದ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ “ಅದಕ್ಕೆ ಸಂಬಂಧಿಸಿದ ಕಡತವನ್ನು ನನ್ನ ಕೊಠಡಿಗೆ ಕಳುಹಿಸಿ ಕೊಡಿ. ಅದನ್ನು ಪರಿಶೀಲಿಸುತ್ತೇನೆ’ ಎಂದರು.

ಟಾಪ್ ನ್ಯೂಸ್

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

7

Udupi ನಗರಸಭೆಗೆ ಸರಕಾರದಿಂದ 5 ಸದಸ್ಯರ ನಾಮ ನಿರ್ದೇಶನ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

19-

EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್‌ 1 ಸ್ಥಾನ ಪಡೆದ ಕರ್ನಾಟಕ

18-

US visa: ಬೆಂಗಳೂರಿನಲ್ಲೇ ಅಮೆರಿಕ ವೀಸಾ: ಕನಸು ಸನ್ನಿಹಿತ

17-BNG

Bengaluru: ಕೆಂಪೇಗೌಡ ಲೇಔಟ್‌ನಲ್ಲಿ ಅನಧಿಕೃತ ನಿವೇಶನ ತೆರವು

16-bng

Bengaluru: ವಿವಾಹ ತಿರಸ್ಕರಿಸಿದ ನರ್ಸ್‌ಗೆ ಚೂರಿ ಇರಿದ ಪಾಗಲ್‌ ಪ್ರೇಮಿ!

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.