Puneeth Kerehalli: ಆತ್ಮಹತ್ಯೆಗೆ ಪ್ರಯತ್ನ ಪ್ರಕರಣ; ಪುನೀತ್ ಕೆರೆಹಳ್ಳಿಗೆ ನೋಟಿಸ್
Team Udayavani, Jan 9, 2024, 12:06 PM IST
ಬೆಂಗಳೂರು: ರಾಜ್ಯ ಸರ್ಕಾರ ಈ ಹಿಂದೆ ತಮ್ಮ ವಿರುದ್ಧ ದಾಖಲಿಸಿದ್ದ ವಿವಿಧ ಪ್ರಕರಣಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣ ಸಂಬಂಧ ಉಪ್ಪಾರಪೇಟೆ ಠಾಣೆ ಪೊಲೀಸರು ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಕಳೆದ ವರ್ಷದ ಅ.2ರಂದು ಪುನೀತ್ ಕೆರೆಹಳ್ಳಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ರಾಜ್ಯ ಸರ್ಕಾರ ನನ್ನ ಪ್ರಶ್ನೆಗಳಿಗೆ ಸ್ಪಷ್ಟೀಕರಣ ನೀಡುವವರೆಗೂ ಆಹಾರ ಸೇವಿಸುವುದಿಲ್ಲ ಎಂದು ಪುನೀತ್ ಕೆರೆಹಳ್ಳಿ ಚಿಕಿತ್ಸೆ ನಿರಾಕರಿಸಿದ್ದರು. ಈ ಸಂಬಂಧ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ನೀಡಿದ ವರದಿ ಮೇರೆಗೆ ಉಪ್ಪಾರಪೇಟೆ ಠಾಣೆ ಪೊಲೀಸರು, ಪುನೀತ್ ವಿರುದ್ಧ ಆತ್ಮಹತ್ಯೆಗೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.