ಸರಗಳ್ಳರ ವಿರುದ್ಧ ಗೂಂಡಾಕಾಯ್ದೆಗೆ ಸೂಚನೆ
Team Udayavani, Nov 8, 2017, 11:35 AM IST
ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಸರ ಕಳವು ಪ್ರಕರಣಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶಿಸಿರುವ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್, ಸರಗಳ್ಳರ ವಿರುದ್ಧ ಗೂಂಡಾಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಿ ಎಂದು ಖಡಕ್ ಸೂಚನೆ ನೀಡಿದ್ದಾರೆ.
ಆಂಧ್ರಪ್ರದೇಶದ ಓಜಿಕುಪ್ಪಂ, ಮಹಾರಾಷ್ಟ್ರದ ಇರಾನಿ, ಉತ್ತರ ಪ್ರದೇಶದ ಬವೆರಿಯಾ ತಂಡಗಳು ನಗರದಲ್ಲಿ ಹೆಚ್ಚು ಸಕ್ರಿಯವಾಗಿವೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಸರಗಳ್ಳರನ್ನು ಮಟ್ಟಹಾಕಲು ಆಯಾ ವಲಯ ಡಿಸಿಪಿಗಳಿಗೆ ಸೂಚಿಸಿದ್ದು, ಗೂಂಡಾಕಾಯ್ದೆ ಅಡಿ ಪ್ರಕರಣ ದಾಖಲಿಸುವಂತೆ ನಿರ್ದೇಶಿಸಿದ್ದಾರೆ.
ಸರಗಳ್ಳರು, ರೌಡಿಶೀಟರ್, ಗಾಂಜಾ ಮಾರಾಟಗಾರರು, ದೌರ್ಜನ್ಯ, ಲೈಂಗಿಕ ಕಿರುಕುಳ ಪ್ರಕರಣಗಳ ಮೇಲೆ ನಿಗಾವಹಿಸುವಂತೆ ಆದೇಶಿಲಾಗಿದೆ. ನಗರದ ಎಲ್ಲ ಠಾಣೆಗಳ ಪೊಲೀಸ್ ಅಧಿಕಾರಿಗಳು ಜಾಗೃತರಾಗಿರುವಂತೆ ಸೂಚಿಸಲಾಗಿದೆ ಎಂದು ಸುನೀಲ್ ಕುಮಾರ್ ತಿಳಿಸಿದ್ದಾರೆ.
ವೃದ್ಧೆಯ ಸರಗಳವು: ಈ ಮಧ್ಯೆ, ಬೈಕ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ವೃದ್ಧೆಯೊಬ್ಬರ ಸರ ಕಳವು ಮಾಡಿ ಪರಾರಿಯಾಗಿರುವ ಘಟನೆ ಸೋಲದೇವನಹಳ್ಳಿಯ ಕೆರೆಗುಡ್ಡದ ಹಳ್ಳಿಯ ಲೆಕ್‌ವ್ಯೂನಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಸಿದ್ದಲಿಂಗಮ್ಮ(80) ಸರ ಕಳೆದುಕೊಂಡವರು. ಘಟನೆಯಲ್ಲಿ ಸಿದ್ದಲಿಂಗಮ್ಮ ಅವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.
ಮಂಗಳವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಮನೆ ಮಂದೆ ಒಣಗಿಸಲು ಹಾಕಿದ್ದ ಬಟ್ಟೆಗಳನ್ನು ತೆಗೆದುಕೊಂಡು ಹೋಗಲು ಸಿದ್ದಲಿಂಗಮ್ಮ ಹೊರಬಂದಿದ್ದಾರೆ. ಇದೇ ವೇಳೆ ಕೆಂಪು ಬಣ್ಣದ ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿ ಇಬ್ಬರು ದುಷ್ಕರ್ಮಿಗಳು ಎರಗಿದ್ದಾರೆ. ಸಿದ್ದಲಿಂಗಮ್ಮ ಪ್ರತಿರೋಧ ವ್ಯಕ್ತಪಡಿಸಿ ಕೆಲ ಸಮಯ ಸೆಣಸಾಡಿದ್ದಾರೆ. ಆದರೂ ಆರೋಪಿ ಅವರನ್ನು ಕೆಳಗೆ ತಳ್ಳಿ 40 ಗ್ರಾಂ ತೂಕದ ಸರ ಕಸಿದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಯಾವುದೇ ಸಿಸಿಟಿವಿಯಲ್ಲಿ ಇಲ್ಲ. ಮಾರ್ಗದ ಮೂಲೆಯಲ್ಲಿ ಪೆಟ್ರೋಲ್ ಬಂಕ್‌ನಲ್ಲಿರುವ ಸಿಸಿಟಿವಿಯಲ್ಲಿ ಅರೆಬರೆ ದೃಶ್ಯ ಸೆರೆಯಾಗಿವೆ. ಹೀಗಾಗಿ ಇತರೆಡೆ ಇರುವ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.
ನಗರದಲ್ಲಿ ಸರಗಳ್ಳತನ ಹೆಚ್ಚಾಗಿದ್ದು, ಗೂಂಡಾಕಾಯ್ದೆ ಪ್ರಯೋಗಕ್ಕೆ ಮೌಖೀಕ ಆದೇಶದ ಮೂಲಕ ಠಾಣೆಗಳಿಗೆ ಮಾಹಿತಿ ರವಾನಿಸಲಾಗಿದೆ. ಇದರ ಬೆನ್ನಲ್ಲೇ 80 ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ತಬ್ರೇಜ್ ಅನ್ನೋನಿಮು ಎಂಬಾತನನ್ನು ಈಗಾಗಲೇ ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ. ಆರೋಪಿಯು ಸದ್ಯ ಪರಪ್ಪನ ಅಗ್ರಹಾರ ಠಾಣೆಯಲ್ಲಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.