ರಾಜ್ಯ ಸರ್ಕಾರಕ್ಕೆ ನೋಟಿಸ್
Team Udayavani, Jan 25, 2019, 6:07 AM IST
ಬೆಂಗಳೂರು: ಮಂಚನಬೆಲೆ ಜಲಾಶಯದ ಸುತ್ತಮುತ್ತಲ ಪ್ರದೇಶದಲ್ಲಿ ವ್ಯಾಪಕ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿರುವುದರಿಂದ ಸಾರ್ವಜನಕರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದೆ ಎಂದು ದೂರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ತಾವರೆಕೆರೆ ಹೋಬಳಿ ನಾಗರಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ರೇವಣಸಿದ್ದಯ್ಯ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಹಾಗೂ ನ್ಯಾ.ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ, ಸರ್ಕಾರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನೋಟಿಸ್ ಜಾರಿಗೊಳಿಸಿ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಮಂಚನಬೆಲೆ ಡ್ಯಾಂ ಸುತ್ತಮುತ್ತಲ ಗ್ರಾಮಗಳಾದ ಸುಲಿವಾರ, ಹುಲುವೇಹಳ್ಳಿ, ಮಾದಾಪಟ್ನ, ಚಿಕ್ಕನಹಳ್ಳಿ, ಅಜ್ಜನಹಳ್ಳಿ, ಚುಂಚನಕುಪ್ಪೆ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಇದು ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಬಂಡೆಗಳನ್ನು ಸಿಡಿಸಲು ರಾಸಾಯನಿಕ ಬಳಕೆ ಮಾಡಲಾಗುತ್ತಿದೆ. ಇದು ಜನ-ಜಾನುವಾರುಗಳ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಮನವಿ ಕೊಟ್ಟರೂ ಪ್ರಯೋಜವಾಗಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಈ ಭಾಗದಲ್ಲಿ ಕಲ್ಲುಗಳನ್ನು ಪುಡಿ ಮಾಡಲು ಭಾರಿ ಪ್ರಮಾಣದ ಕ್ರಷರ್‌ಗಳನ್ನು ಹಗಲೂ ರಾತ್ರಿ ಬಳಕೆ ಮಾಡಲಾಗುತ್ತಿದೆ. ಇದರಿಂದ ವ್ಯಾಪಕ ಧೂಳು ಉಂಟಾಗಿ ಅದು ನೀರು ಮತ್ತು ಆಹಾರದಲ್ಲಿ ಬೆರೆಯುತ್ತಿದೆ. ಇದರಿಂದ ಜನ-ಜಾನುವಾರುಗಳು ಹಲವು ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ಕಲ್ಲು ಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
Pro Kabaddi: ಯೋಧಾಸ್‌ಗೆ ತಲೈವಾಸ್ ಆಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.