ನೀರಿಗಾಗಿ ಈಗ ಗ್ರಾಮಗಳ ಮಧ್ಯೆ ವಾರ್ ಶುರು!
Team Udayavani, Feb 10, 2018, 6:00 AM IST
ಚಿಕ್ಕಮಗಳೂರು: ರಾಜ್ಯ ರಾಜ್ಯಗಳ ನಡುವಿನ “ನೀರಿನ ವಾರ್’ ಇದೀಗ ಗ್ರಾಮಾಂತರ ಪ್ರದೇಶಗಳತ್ತಲೂ ಕಾಲಿಟ್ಟಿದೆ!
ಕೆರೆ ನೀಡುವ ಬಿಡುವ ವಿಚಾರವಾಗಿ ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣ ಮತ್ತು ಸುತ್ತಲಿನ ಜಗಳ ತೀವ್ರ ಸ್ವರೂಪ ಪಡೆದುಕೊಂಡಿದೆ. ಅಲ್ಲದೆ ಇದೇ ವಿಚಾರವಾಗಿ ನಾಲ್ಕೈದುಗ್ರಾಮಗಳ ನಡುವಿನ ಸಂಘರ್ಷ ಹೆಚ್ಚಾಗಿದ್ದು ಜನರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರವನ್ನೂ ನಡೆಸಿದ್ದಾರೆ.
ಅಲ್ಲದೆ, ಇದೀಗ ಸ್ಥಳದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಕಡೂರು ತಾಲೂಕು ಸಖರಾಯಪಟ್ಟಣದ ಅಯ್ಯನಕೆರೆಯಿಂದ ಬ್ರಹ್ಮಸಮುದ್ರ ಕೆರೆಗೆ ನೀರು ಬಿಡುವ ವಿಚಾರವಾಗಿ ಹಲವು ದಿನಗಳಿಂದ ಚರ್ಚೆ ನಡೆಯುತ್ತಿತ್ತು. ಸುತ್ತಲಿನ ಗ್ರಾಮಗಳಾದ ಚಟ್ಟನಹಳ್ಳಿ, ಬಾಣೂರು, ಬಿಸಲೆಹಳ್ಳಿ, ಬ್ರಹ್ಮಸಮುದ್ರ ಗ್ರಾಮಸ್ಥರು ಗುರುವಾರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನೀರು ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಆದರೆ, ಅದೇ ದಿನ ಸಂಜೆಯೇ ಸಖರಾಯಪಟ್ಟಣ ಗ್ರಾಮಸ್ಥರು, ಅಯ್ಯನಕೆರೆಯಲ್ಲಿ ಕೇವಲ 4 ಅಡಿಗಳಷ್ಟೇ ನೀರಿದೆ. ಹೀಗಾಗಿ ಬಿಡಲು ಸಾಧ್ಯವಿಲ್ಲ ಎಂದು ಹೇಳಿ, ನೀರು ಹೋಗುವುದು ತಪ್ಪಿಸಿದ್ದರು.
ಪರ-ವಿರೋಧಿ ಪ್ರತಿಭಟನೆ
ಶುಕ್ರವಾರ ಬೆಳಗ್ಗೆ ಚಟ್ಟನಹಳ್ಳಿ, ಬಾಣೂರು, ಬ್ರಹ್ಮಸಮುದ್ರ, ಬಿಸಲೆಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಗ್ರಾಮಸ್ಥರು ಸಖರಾಯಪಟ್ಟಣಕ್ಕೆ ಆಗಮಿಸಿ ಬ್ರಹ್ಮಸಮುದ್ರ ಕೆರೆಗೆ ನೀರು ಬಿಡುವಂತೆ ಒತ್ತಾಯಿಸಿ ರಸ್ತೆತಡೆದು ಪ್ರತಿಭಟನೆ ನಡೆಸಲಾರಂಭಿಸಿದರು. ಈ ವಿಷಯ ತಿಳಿದ ಸಖರಾಯಪಟ್ಟಣದ ಗ್ರಾಮಸ್ಥರು ಮಹಿಳೆಯರೊಂದಿಗೆ ಸೇರಿ ಮತ್ತೂಂದೆಡೆ ಪ್ರತಿಭಟನೆ ಆರಂಭಿಸಿದರು.
ಎರಡೂ ಕಡೆಯವರು ಪ್ರತಿಭಟನೆ ನಡೆಸುತ್ತಿರುವ ವಿಷಯ ತಿಳಿದು ಉಪವಿಭಾಗಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಎರಡೂ ಕಡೆಯವರನ್ನು ಕರೆಸಿ ಚರ್ಚೆ ನಡೆಸಿದರು. ಸಭೆಯಲ್ಲಿ ಒಮ್ಮತಕ್ಕೆ ಬರಲು ಸಾಧ್ಯವಾಗದೆ ವಾಪಸ್ ಬರುತ್ತಿರುವ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರು. ತಕ್ಷಣ ಎರಡೂ ಗ್ರಾಮಸ್ಥರ ಮಧ್ಯೆ ಗಲಾಟೆ ಆರಂಭವಾಯಿತು. ಕೆಲವರು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಗಲಭೆ ಮಾಡುತ್ತಿದ್ದುದೂ ಕಂಡು ಬಂತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರುವುದನ್ನು ಮನಗಂಡ ಪೊಲೀಸರು ಕೂಡಲೆ ಲಾಠಿ ಪ್ರಹಾರ ಮಾಡಿ ಜನರನ್ನು ಚದುರಿಸಿದರು. ಗಲಭೆಯಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
144 ಸೆಕ್ಷನ್: ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಕಡೂರು ತಹಶೀಲ್ದಾರ್ ಭಾಗ್ಯ ಅವರು, ಸಖರಾಯಪಟ್ಟಣ ಗ್ರಾಮದಲ್ಲಿ ಫೆ. 12ರವರೆಗೆ144 ನೇ ಸೆಕ್ಷನ್‌ಅಡಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ. ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಈ ಮಧ್ಯೆ ಸಣ್ಣ ನೀರಾವರಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಶನಿವಾರ ಗ್ರಾಮಕ್ಕೆ ಭೇಟಿ ನೀಡಿ ಕೆರೆಯಲ್ಲಿ ಈಗ ಇರುವ ನೀರಿನ ಪ್ರಮಾಣ ಪರಿಗಣಿಸಿ ಬ್ರಹ್ಮಸಮುದ್ರ ಕೆರೆಗೆ ನೀರು ಬಿಡಬೇಕೆ ಬೇಡವೆ ಎಂಬ ಬಗ್ಗೆ ತೀರ್ಮಾನಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.