Nursing student: ಹಾಸ್ಟೆಲ್‌ನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು
Team Udayavani, Jul 9, 2024, 10:49 AM IST
ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಮಾನಸಿಕ ಖನ್ನತೆಗೊಳಗಾಗಿದ್ದ ನರ್ಸಿಂಗ್ ಕಾಲೇಜಿನ ವಿದ್ಯಾ ರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ದಿಯಾ ಮಂಡೋಲಿ (21) ಮೃತ ನರ್ಸಿಂಗ್ ವಿದ್ಯಾರ್ಥಿನಿ. ಜಾಲಹಳ್ಳಿಯಲ್ಲಿರುವ ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ 2ನೇ ವರ್ಷದ ನರ್ಸಿಂಗ್ ಓದುತ್ತಿದ್ದಳು. ಎಂಇಎಸ್ ರಸ್ತೆಯಲ್ಲಿರುವ ನರ್ಸಿಂಗ್ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಳು. ಈ ಮಧ್ಯೆ ಕೆಲ ದಿನಗಳಿಂದ ಕೌಟುಂಬಿಕ ವಿಚಾರವಾಗಿ ಮಾನಸಿಕ ಖನ್ನತೆಗೊಳಗಾಗಿದ್ದಳು. ಶನಿವಾರ ರಾತ್ರಿ 7.30 ರ ವೇಳೆ ಸ್ನೇಹಿತರು ಮಲಗಿದ ವೇಳೆ ರೂಮ್ ಬಾಗಿಲು ಹಾಕಿಕೊಂಡು ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಳಿಕ ಅದನ್ನು ಗಮನಿಸಿದ ಸ್ನೇಹಿತರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತರ ಮಾಡಿದ್ದಾರೆ.
ಕೌಟುಂಬಿಕ ಕಾರಣ ಆತ್ಮಹತ್ಯೆ: ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ. ಆದರೆ ದಿಯಾ ಮಂಡೋಲಿ ಕೌಟುಂಬಿಕ ಕಾರಣಕ್ಕೆ ಕುಟುಂಬ ಸದಸ್ಯರೊಂದಿಗೆ ಜಗಳ ಮಾಡಿಕೊಂಡು ಮಾನಸಿಕ ಖನ್ನತೆಗೆ ಒಳಗಾಗಿದ್ದಳು. ಹೀಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಜಾಲಹಳ್ಳಿ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.