ತಿಂಗಳಿಗೊಂದು ಸಸಿ ನೆಟ್ಟು ಪೋಷಿಸಿ
Team Udayavani, Jan 1, 2018, 12:20 PM IST
ಬೆಂಗಳೂರು: ಪ್ರತಿಯೊಬ್ಬರು ತಿಂಗಳಿಗೆ ಕನಿಷ್ಠ ಒಂದು ಗಿಡ ನೆಟ್ಟು, ಅದನ್ನು ಪೋಷಿಸುವ ಸಂಕಲ್ಪ ಮಾಡಬೇಕು ಎಂದು ಕೇಂದ್ರ ಸಚಿವ ಅನಂತಕುಮಾರ್ ಹೇಳಿದ್ದಾರೆ. ಕಿಮ್ಸ್ ಕಾಲೇಜಿನ ಆವರಣದಲ್ಲಿ “ಹಸಿರು ಬೆಂಗಳೂರು’ ಧ್ಯೇಯದ ಅಡಿಯಲ್ಲಿ ಅದಮ್ಯ ಚೇತನ ಸಂಸ್ಥೆ ನಡೆಸಿದ 105ನೇ ಹಸಿರು ಭಾನುವಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸುಸ್ಥಿರ ಅಭಿವೃದ್ಧಿಗಾಗಿ ಪ್ರತಿಯೊಬ್ಬರು ಪರಿಸರ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ತಿಂಗಳಿಗೊಂದು ಗಿಡ ನೆಟ್ಟು ಅದನ್ನು ಸಮೃದ್ಧವಾಗಿ ಪೋಷಿಸಲು ಸಂಕಲ್ಪ ತೊಡಬೇಕು. ಜತೆಗೆ ಸಸ್ಯ ಸತ್ಯಾಗ್ರಹ ರೂಪದಲ್ಲಿ ಹಸಿರೀಕರಣ ನಡೆಯಬೇಕು. ಇದಕ್ಕಾಗಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ, ಅದರ ಬದಲು ಸ್ಟೀಲ್, ಬಟ್ಟೆ ಬ್ಯಾಗ್ಗಳು ಸೇರಿದಂತೆ ಮರುಬಳಕೆ ಮಾಡಬಹುದಾದ ವಸ್ತುಗಳನ್ನು ಹೆಚ್ಚು ಬಳಸುವ ಅಗತ್ಯವಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅದಮ್ಯ ಚೇತನ ಟ್ರಸ್ಟ್ನ ಡಾ. ತೇಜಸ್ವಿನಿ ಅನಂತಕುಮಾರ್, ಚಿತ್ರನಿರ್ದೇಶಕ ಟಿ.ಎಸ್ನಾಗಾಭರಣ, ಮಾಜಿ ಶಾಸಕ ರಾಜಶೇಖರ್ ಶೀಲವಂತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಪರಿಸರ ಸ್ನೇಹಿ ಸೈಕಲ್ ಕುರಿತು ಜಾಗೃತಿ ಮೂಡಿಸಲು ಸಚಿವ ಅನಂತಕುಮಾರ್ ಸೇರಿದಂತೆ ಪ್ರಮುಖರು ಸೈಕಲ್ ಜಾಥಾ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.