ಲಿಂಗಾಯತಕ್ಕೆ ಅಲ್ಪ ಸಂಖ್ಯಾತ ಮಾನ್ಯತೆಗೆ ಆಕ್ಷೇಪ
Team Udayavani, Mar 7, 2018, 12:33 PM IST
ಬೆಂಗಳೂರು: ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಹಾಗೂ ವಿಧಾನಸಭೆ ಚುನಾವಣೆಯ ಮಹತ್ವದ ವಿಷಯವಾಗಿರುವ ಲಿಂಗಾಯತ ಸಮುದಾಯಕ್ಕೆ ಅಲ್ಪ ಸಂಖ್ಯಾತರ ಮಾನ್ಯತೆ ನೀಡಲು ರಾಜ್ಯ ಅಲ್ಪ ಸಂಖ್ಯಾತ ಆಯೋಗ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ ಎಂದು ತಿಳಿದು ಬಂದಿದೆ.
ನ್ಯಾ.ನಾಗಮೋಹನ್ ದಾಸ್ ನೇತೃತ್ವದ ತಜ್ಞರ ಸಮಿತಿ ಸಲ್ಲಿಸಿರುವ ವರದಿ ಕುರಿತು ಆಯೋಗದ ಸಭೆಯಲ್ಲಿ ಚರ್ಚಿಸಲಾಗಿದ್ದು, ಬಹುತೇಕ ಸದಸ್ಯರು ಲಿಂಗಾಯತ ಸಮುದಾಯಕ್ಕೆ ಅಲ್ಪಸಂಖ್ಯಾತ ಮಾನ್ಯತೆ ನೀಡುವ ಕುರಿತು ವಿರೋಧ ವ್ಯಕ್ತಪಡಿಸಿದ್ದಾರೆನ್ನಲಾಗಿದೆ. ಆಕ್ಷೇಪದ ಅಭಿಪ್ರಾಯದೊಂದಿಗೆ ಆಯೋಗವು ಮಂಗಳವಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ ಎಂದು ಹೇಳಲಾಗಿದೆ.
ಈಗಾಗಲೇ ರಾಜ್ಯ ಅಲ್ಪ ಸಂಖ್ಯಾತರ ಪಟ್ಟಿಯಲ್ಲಿ ಮುಸ್ಲಿಂ, ಕ್ರೈಸ್ತ, ಬೌದ್ಧ, ಜೈನ, ಸಿಖ್ ಹಾಗೂ ಪಾರ್ಸಿ ಧರ್ಮಗಳಿದ್ದು, ಎಲ್ಲ ಧರ್ಮಗಳಿಗೂ ಸೇರಿ ಶೇ.4ರಷ್ಟು ಮೀಸಲಾತಿ ನೀಡಲಾಗುತ್ತಿದೆ. ರಾಜ್ಯದಲ್ಲಿ ಪ್ರಬಲವಾಗಿರುವ ಲಿಂಗಾಯತ ಸಮುದಾಯಕ್ಕೆ ಅಲ್ಪ ಸಂಖ್ಯಾತ ಮಾನ್ಯತೆ ನೀಡಿದರೆ, ಉಳಿದ ಅತ್ಯಂತ ಕಡಿಮೆ ಜನಸಂಖ್ಯೆ ಇರುವ ಅಲ್ಪಸಂಖ್ಯಾತ ಸಮುದಾಯಗಳಿಗೆ ಅನ್ಯಾಯ ಮಾಡಿದಂತಾಗಲಿದೆ. ಆ ಧರ್ಮಗಳು ಆರ್ಥಿಕ ಹಾಗೂ ಸಾಮಾಜಿಕ ಪ್ರಾತಿನಿಧ್ಯ ಪಡೆಯಲು ಅಸಾಧ್ಯವಾಗುವ ಆತಂಕ ಇದೆ ಎಂದು ಸಭೆಯಲ್ಲಿ ಸದಸ್ಯರು ಆತಂಕ ವ್ಯಕ್ತಪಡಿಸಿದ್ದಾರೆಂದು ಗೊತ್ತಾಗಿದೆ.
ರಾಜ್ಯ ಸರ್ಕಾರ ಲಿಂಗಾಯತ ಸಮುದಾಯಕ್ಕೆ ಅಲ್ಪ ಸಂಖ್ಯಾತ ಮಾನ್ಯತೆ ನೀಡಬೇಕು. ಇಲ್ಲದಿದ್ದರೆ, ಅಲ್ಪಸಂಖ್ಯಾತ ಸಮುದಾಯ ಪ್ರಮುಖವಾಗಿ ಮುಸ್ಲಿಂ ಸಮುದಾಯದ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ ಎಂಬ ಅಂಶವನ್ನೂ ಸದಸ್ಯರು ಆಯೋಗದ ಅಧ್ಯಕ್ಷರ ಎದುರು ಹೇಳಿದ್ದಾರೆ.
ಶೇ. 75 ರ ಪ್ರಯತ್ನ:ಸಿಎಂ ಸಿದ್ದರಾಮಯ್ಯ ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲೂ ಮೀಸಲಾತಿ ಪ್ರಮಾಣವನ್ನು ಶೇ.50 ರಿಂದ 75 ಕ್ಕೆ ಹೆಚ್ಚಳ ಮಾಡುವ ಬಗ್ಗೆ ಈ ಹಿಂದೆ ಪ್ರಸ್ತಾಪ ಮಾಡಿದ್ದು, ಅದರಂತೆ ಅಲ್ಪ ಸಂಖ್ಯಾತರಿಗೆ ಹೆಚ್ಚಿನ ಮೀಸಲಾತಿ ಒದಗಿಸಬೇಕೆಂಬ ಒತ್ತಡವೂ ಕೇಳಿ ಬಂದಿದೆ.
ದಲಿತರಿಗೆ ಜನ ಸಂಖ್ಯೆ ಆಧಾರದಲ್ಲಿ ನೀಡುತ್ತಿರುವ ಮೀಸಲಾತಿಯಂತೆ ಅಲ್ಪ ಸಂಖ್ಯಾತರಿಗೂ ಜನ ಸಂಖ್ಯೆ ಆಧಾರದಲ್ಲಿ ಮೀಸಲಾತಿ ನೀಡಬೇಕು. ವಿಶೇಷವಾಗಿ ಮುಸ್ಲಿಂ ಸಮುದಾಯಕ್ಕೆ ಕನಿಷ್ಠ ಶೇ.10ರಷ್ಟು ಮೀಸಲಾತಿ ನೀಡಬೇಕೆಂಬ ಬೇಡಿಕೆ ಕೇಳಿ ಬಂದಿದೆಯಂತೆ.
ಮೂಲಗಳ ಪ್ರಕಾರ ಸಿಎಂ ಸಿದ್ದರಾಮಯ್ಯ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವ ಪ್ರಸ್ತಾಪವನ್ನು ಈ ಬಾರಿ ಕೈ ಬಿಟ್ಟಿದ್ದು, ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ, ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಬುಧವಾರ ನಡೆಯುವ ಸಂಪುಟ ಸಭೆಯಲ್ಲಿ ಆಯೋಗದ ವರದಿ ಕುರಿತು ಪ್ರಮುಖವಾಗಿ ಚರ್ಚೆ ನಡೆಯಲಿದ್ದು, ಬಹುತೇಕ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಆಯೋಗಕ್ಕೆ ಕಳುಹಿಸಲು ಶಿಫಾರಸು: ತಜ್ಞರ ಸಮಿತಿ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವ ಕುರಿತು ಕೇಂದ್ರ ಅಲ್ಪ ಸಂಖ್ಯಾತ ಆಯೋಗಕ್ಕೆ ಕಳುಹಿಸಿ ಒಪ್ಪಿಗೆ ಪಡೆಯಬೇಕೆಂದು ವರದಿಯಲ್ಲಿ ತಿಳಿಸಿದೆ. ಆದರೆ, ಕೇಂದ್ರ ಅಲ್ಪ ಸಂಖ್ಯಾತ ಆಯೋಗದ ಒಪ್ಪಿಗೆ ಪಡೆಯಬೇಕೆಂದು ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂದು ತಿಳಿದು ಬಂದಿದೆ.
* ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.