ಬೆಂವಿವಿ ತ್ರಿಭಜನೆಗೆ ಸರ್ಕಾರದಿಂದ ಅಧಿಕೃತ ಮುದ್ರೆ
Team Udayavani, Jul 1, 2017, 11:20 AM IST
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯನ್ನು ಪ್ರಸ್ತಕ ಸಾಲಿನಿಂದಲೇ ಮೂರು ಭಾಗವಾಗಿ ವಿಭಜಿಸಿ ಶೈಕ್ಷಣಕ ಚಟುವಟಿಕೆ ನಡೆಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 2017-18ನೇ ಸಾಲಿನಲ್ಲಿ ಬೆಂಗಳೂರು ವಿಶ್ವವಿದ್ಯಾಲದಡಿಯಲ್ಲೇ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ನಡೆಯಲಿದೆ.
ಆದರೆ, ಹೊಸದಾಗಿ ರಚನೆಯಾಗಿರುವ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಆಡಳಿತಾತ್ಮಕ ಕಾರ್ಯಗಳು ಜುಲೈ 1ರಿಂದಲೇ ಆರಂಭಿಸಲು ಸರ್ಕಾರ ನಿರ್ದೇಶಿಸಿದೆ. ಬೆಂಗಳೂರು ವಿಶ್ವವಿದ್ಯಾಲಯದ ಆಡಳಿತ ಕಚೇರಿ ಜ್ಞಾನಭಾರತಿಯಲ್ಲೇ ಇರಲಿದೆ.
ಬೆಂಗಳೂರು ಕೇಂದ್ರ ವಿವಿಯ ಆಡಳಿತ ಕಚೇರಿ ಸೆಂಟ್ರಲ್ ಕಾಲೇಜಿನಲ್ಲಿ ಮತ್ತು ಬೆಂಗಳೂರು ಉತ್ತರ ವಿವಿಯ ಆಡಳಿಯ ಕಚೇರಿ ಕೋಲಾರ ಅಥವಾ ಶಿಡ್ಲಘಟ್ಟದ ಜಂಗಮಕೋಟೆಯಲ್ಲಿ ಇರಲಿದೆ. ವಿಜಯನಗರ, ಪದ್ಮನಾಭನಗರ, ಬೊಮ್ಮನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಯಶವಂತಪುರ, ರಾಜರಾಜೇಶ್ವರಿ ನಗರ, ದಾಸರಹಳ್ಳಿ, ಮಹಾಲಕ್ಷ್ಮೀ ಬಡಾವಣೆ, ಗೋವಿಂದರಾಜು ನಗರ, ನೆಲಮಂಗಲ, ಮಾಗಡಿ, ರಾಮನಗರ, ಕನಕಪುರ ಹಾಗೂ ಚನ್ನಪಟ್ಟಣ ವಿಧಾನಸಭಾ ವ್ಯಾಪ್ತಿಯ ಸುಮಾರು 250ಕ್ಕೂ ಅಧಿಕ ಕಾಲೇಜು ಬೆಂಗಳೂರು ವಿವಿಯ ವ್ಯಾಪ್ತಿಗೆ ಬರಲಿದೆ.
ಶಾಂತಿನಗರ, ಬ್ಯಾಟರಾಯನಪುರ, ಯಲಹಂಕ, ಮಲ್ಲೇಶ್ವರ, ಹೆಬ್ಟಾಳ, ಶಿವಾಜಿನಗರ, ಗಾಂಧಿನಗರ, ಚಾಮರಾಜಪೇಟೆ, ಚಿಕ್ಕಪೇಟೆ, ಬಸವನಗುಡಿ, ಬಿಟಿಎಂ ಲೇಔಟ್, ಜಯನಗರ ಮತ್ತು ರಾಜಾಜಿನಗರ ಮೊದಲಾದ ಭಾಗದ 230ಕ್ಕೂ ಅಧಿಕ ಕಾಲೇಜು ಬೆಂಗಳೂರು ಕೇಂದ್ರ ವಿವಿಗೆ ಸೇರಲಿದೆ.
ಶ್ರೀನಿವಾಸಪುರ, ಮುಳಬಾಗಿಲು, ಕೆಜಿಎಫ್ , ಬಂಗಾರ ಪೇಟೆ, ಮಾಲೂರು, ಕೋಲಾರ ಸ್ನಾತಕೋತ್ತರ ಕೇಂದ್ರ, ಕೆ.ಆರ್.ಪುರ, ಪುಲಕೇಶಿನಗರ, ಸರ್ವಜ್ಞ ನಗರ, ಸಿ.ವಿ.ರಾಮನ್ ನಗರ, ಮಹದೇವಪುರ, ಗೌರಿಬಿದನೂರು, ಬಾಗೇಪಳ್ಳಿ, ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ಚಿಂತಾಮಣಿ, ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ಹೊಸಪೇಟೆ ಭಾಗದ ಸುಮಾರು 200ಕ್ಕೂ ಅಧಿಕ ಕಾಲೇಜುಗಳು ಬೆಂಗಳೂರು ಉತ್ತರ ವಿವಿಯ ವ್ಯಾಪ್ತಿಗೆ ಬರಲಿದೆ.
ಸಿಬ್ಬಂದಿ ನಿಯೋಜನೆಯಾಗಿಲ್ಲ
ಸದ್ಯ ಬೆಂಗಳೂರು ವಿವಿ ವ್ಯಾಪ್ತಿಯಲ್ಲಿ 684 ಕಾಲೇಜು ಇದ್ದು, ಪ್ರಸಕ್ತ ಸಾಲಿನಲ್ಲಿ ಸುಮಾರು 50 ಹೊಸ ಕಾಲೇಜು ಆರಂಭವಾಗುವ ಸಾಧ್ಯತೆ ಇದೆ. ಬೆಂಗಳೂರು ಉತ್ತರ ವಿವಿ ಹಾಗೂ ಕೇಂದ್ರ ವಿಶ್ವವಿದ್ಯಾಯದ ಆಡಳಿತ ಇತ್ಯಾದಿ ಗಮನಿಸಲು ಇಬ್ಬರು ಆಡಳಿತಾಧಿಕಾರಿಗಳನ್ನು ಸರ್ಕಾರ ಈಗಾಗಲೇ ನೇಮಿಸಿದೆ. ಹೊಸ ವಿಶ್ವವಿದ್ಯಾಲಯದ ಆಡಳಿತ ಕಚೇರಿಯ ಕಟ್ಟಡ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದ ನಿಯೋಜನೆ ಇನ್ನೂ ಆಗಿಲ್ಲ.
ಉನ್ನತ ಶಿಕ್ಷಣ ಪರಿಷತ್ತು ಸದಸ್ಯರ ಸಭೆ
ಈ ಶೈಕ್ಷಣಿಕ ವರ್ಷದಿಂದಲೇ ಬೆಂಗಳೂರು ವಿಶ್ವವಿದ್ಯಾಯದ ವಿಭಜನೆಯಾಗಿ ಎರಡು ಹೊಸ ವಿಶ್ವವಿದ್ಯಾಲಯ ಹುಟ್ಟಿಕೊಂಡರೂ, ಶೈಕ್ಷಣಿಕ ಚಟುವಟಿಕೆ, ಪ್ರವೇಶಾತಿ ಹಾಗೂ ಪರೀಕ್ಷೆ ಇತ್ಯಾದಿ ಬೆಂವಿವಿ ಮೂಲಕವೇ ನಡೆಯಲಿ. ಆ ಎರಡು ಹೊಸ ವಿಶ್ವವಿದ್ಯಾಲಯದಲ್ಲಿ ಎಲ್ಲಾ ರೀತಿಯ ಸೌಕರ್ಯ ಹಾಗೂ ಪರೀಕ್ಷಾ ಕೇಂದ್ರ ವ್ಯವಸ್ಥೆಯ ನಂತರ ವರ್ಗಾವಣೆ ಮಾಡುವ ಬಗ್ಗೆ ಶನಿವಾರ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗಿದೆ.
ವಿವಿ ಅಕ್ರಮದ ತನಿಖೆಗೆ ಸಚಿವರಿಂದ ಆದೇಶ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರ, ಗಂಭೀರ ಸ್ವರೂಪದ ಭ್ರಷ್ಟಾಚಾರ ಹಾಗೂ ಕಾನೂನು ಬಾಹಿರ ಕೃತ್ಯದ ಬಗ್ಗೆ ರಾಜ್ಯ ಶಿಕ್ಷಣ ವೇದಿಕೆ ಅಧ್ಯಕ್ಷ ಕೆ.ಗಂಗಾಧರ ಮೂರ್ತಿಯವರು ನೀಡಿರುವ ದೂರಿನಂತೆ ತನಿಖೆ ನಡೆಸಿ ವರದಿ ಒಪ್ಪಿಸುವಂತೆ ಉನ್ನತ ಶಿಕ್ಷಣ ಸಚಿವರು ಆದೇಶಿಸಿದ್ದಾರೆ.
ಆರೋಪದ ಹಿನ್ನೆಲೆಯಲ್ಲಿ ಹಿಂದಿನ ಕುಲಪತಿ ಡಾ. ಬಿ. ತಿಮ್ಮೇಗೌಡ ವಿರುದ್ಧ ತನಿಖೆ ನಡೆಸಬೇಕು. ನಿಯಮ ಬಾಹಿರವಾಗಿ ಡಾ.ಎಂ.ನಾರಾಯಣಸ್ವಾಮಿಯವರಿಗೆ ಪ್ರಾಧ್ಯಾಪಕ ಹುದ್ದೆಗೆ ಮುಂಬಡ್ತಿ ನೀಡಿರುವುದು ಸೇರಿದಂತೆ ಕರ್ತವ್ಯ ಲೋಪ ಎಸಗಿರುವ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಗಿತ್ತು. ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ, ನಿಯಮಾನುಸಾರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಬೆಂವಿವಿ ಕುಲಸಚಿವರಿಗೆ ಪತ್ರದಲ್ಲಿ ನಿರ್ದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.