ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ವಿಫಲ
Team Udayavani, Sep 13, 2018, 12:51 PM IST
ಮಹದೇವಪುರ: ಅಧಿಕಾರಿಗಳ ಬೇಜವಾಬ್ದಾರಿ ಕಾರ್ಯನಿರ್ವಹಣೆಯಿಂದಾಗಿ ಸರ್ಕಾರದ ಸೌಲಭ್ಯಗಳು ಅರ್ಹ ಪಲಾನುಭವಿಗಳನ್ನು ತಲುಪುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.
ಕ್ಷೇತ್ರದ ಕನ್ನಮಂಗಲ ಗ್ರಾ.ಪಂನಲ್ಲಿ ನಡೆದ ಗ್ರಾಮ ಸಭೆಯಲ್ಲಿ ವಿವಿಧ ಫಲಾನುಭವಿಗಳಿಗೆ ವಿವಿಧ ಸೌಲಭ್ಯ ವಿತರಿಸಿ ಮಾತನಾಡಿ, ಸಾರ್ವಜನಿಕರ ಕುಂದು ಕೊರತೆ ನಿವಾರಿಸುವ ಉದ್ದೇಶದಿಂದ ಆಯೋಜಿಸುವ ಗ್ರಾಮ ಸಭೆಯಲ್ಲಿ 29 ಇಲಾಖೆಗಳ ಅಧಿಕಾರಿಗಳು ಹಾಜರಿದ್ದು ತಮ್ಮ ಇಲಾಖೆಯಿಂದ ನೀಡುವ ಸೌಲಭ್ಯಗಳ ಕುರಿತು ಜನತೆಗೆ ಮಾಹಿತಿ ನೀಡಬೇಕು. ಆದರೆ, ಬೆರಳೆಣಿಕೆ ಅಧಿಕಾರಿಗಳು ಮಾತ್ರ ಗ್ರಾಮ ಸಭೆಗೆ ಹಾಜರಾಗುತ್ತಿದ್ದಾರೆ.
ಇದರಿಂದ ಪಲಾನುಭವಿಗಳು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಹಾಗೇ ಸಭೆಗೆ ಗೈರಾಗಿರುವ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಸಂಬಂಧಪಟ್ಟವರಿಗೆ ಸೂಚಿಸಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿನ ಕಸದ ಸಮಸ್ಯೆ, ಪಡಿತರದಲ್ಲಿ ಕಲ್ಲು ಸೇರಿ ಹಲವು ವಿಷಯಗಳ ಕುರಿತು ಸಾರ್ವಜನಿಕರು
ಆಯಾ ಇಲಾಖೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಜಿಪಂ ಸದಸ್ಯೆ ವೇದಶ್ರೀ ಲಕ್ಷ್ಮೀನಾರಾಯಣ್, ಪಂಚಾಯಿತಿ ಅಧ್ಯಕ್ಷೆ ಪದ್ಮಾವತಿ, ಉಪಾಧ್ಯಕ್ಷೆ ಲೀಲಾವತಿ, ಸದಸ್ಯರಾದ ಸನಾವುಲ್ಲಾ, ಲೋಕೆಶ್, ಯಲ್ಲಪ್ಪ, ರವಿ ಲಿಂಗರಾಜ ಅರಸು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.