ತೈಲ ಬೆಲೆ ಇಳಿಕೆ ಕೇಂದ್ರದ ಜವಾಬ್ದಾರಿ: ಸಿಎಂ
Team Udayavani, Oct 6, 2017, 10:40 AM IST
ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡುವುದು ಕೇಂದ್ರ ಸರಕಾರದ ಜವಾಬ್ದಾರಿ. ಆದರೆ ಕೇಂದ್ರ ಸರಕಾರವು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ರಾಜ್ಯ ಸರಕಾರಗಳತ್ತ ಬೆರಳು ತೋರಿಸುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ಸರಕಾರ ಈಗಾಗಲೇ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಪ್ರಮಾಣ ಇಳಿಕೆ ಮಾಡಿದೆ. ದೇಶದ ಇತರ ರಾಜ್ಯಗಳಿಗೆ ಹೋಲಿಸಿ ದರೆ ಕರ್ನಾಟಕದಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇದೆ ಎಂದು ಹೇಳಿದ್ದಾರೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ಹಿಂದೆ ಪ್ರತಿ ಬ್ಯಾರೆಲ್ ಕಚ್ಚಾತೈಲ ಬೆಲೆ 120 ಡಾಲರ್ ಇದ್ದಾಗ ಪೆಟ್ರೋಲ್, ಡೀಸೆಲ್ ದರ ಎಷ್ಟಿತ್ತು, ಸದ್ಯ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್ಗೆ 42 ಡಾಲರ್ಗೆ ಇಳಿದಿರುವಾಗ ತೈಲ ಬೆಲೆ ಎಷ್ಟಿದೆ ಎಂಬುದನ್ನು ಗಮನಿಸಿದರೆ ಸ್ಪಷ್ಟವಾಗಲಿದೆ. ಹಾಗಿದ್ದರೂ ತೆರಿಗೆ ಇಳಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರತಿ ಲೀಟರ್ ತೈಲದ ಮೂಲ ಬೆಲೆಯೊಂದಿಗೆ ಕೇಂದ್ರ ವಿಧಿಸುವ ಅಬಕಾರಿ ಸುಂಕ, ಮಾರುಕಟ್ಟೆ ಕಮಿಷನ್, ಸಾಗಣೆ ವೆಚ್ಚ, ಡೀಲರ್ ಕಮೀಷನ್ನ ಒಟ್ಟು ಮೊತ್ತದ ಮೇಲೆ ರಾಜ್ಯ ಸರಕಾರವು ಪೆಟ್ರೋಲ್ ಮೇಲೆ ಶೇ. 30 ಹಾಗೂ ಡೀಸೆಲ್ ಮೇಲೆ ಶೇ. 19ರಷ್ಟು ತೆರಿಗೆ ವಿಧಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.