ತೈಲ ಬೆಲೆ ಕಡಿಮೆ ಮಾಡಿದ್ದು 46 ಪೈಸೆ ಮಾತ್ರ: ಯಡಿಯೂರಪ್ಪ
Team Udayavani, Sep 18, 2018, 6:25 AM IST
ಬೆಂಗಳೂರು:ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಬಜೆಟ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 1.58 ರೂ. ಹೆಚ್ಚಳ ಮಾಡಿದ್ದರು. ಇದೀಗ ಎರಡೂ ರೂ. ಕಡಿಮೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಆದರೆ, ನಿಜಕ್ಕೂ ಕಡಿಮೆ ಆಗಿದ್ದು ಕೇವಲ 46 ಪೈಸೆ ಅಷ್ಟೇ ಎಂದು ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, 46 ಪೈಸೆ ಕಡಿಮೆ ಮಾಡಿ ದೊಡ್ಡ ಸಾಧನೆ ಎಂದು ಹೇಳಿಕೊಂಡು ಓಡಾಡುವ ಪ್ರಯತ್ನವನ್ನು ಮುಖ್ಯಮಂತ್ರಿ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಬಿಜೆಪಿ ವಿರುದ್ಧ ರೇವಣ್ಣ ಹಾಗೂ ಇತರರು ಹತಾಶರಾಗಿ ಏನೇನೋ ಹೇಳಿಕೆ ಕೊಡುತ್ತಿದ್ದಾರೆ. ನಾವಂತೂ ಒಂದು ಶಬ್ಧ ಮಾತಾಡುತ್ತಿಲ್ಲ. ಮುಖ್ಯಮಂತ್ರಿಯವರು ಅಭಿವೃದ್ಧಿ ಕೆಲಸ ಮರೆತು ದೇವಾಸ್ಥಾನಗಳಿಗೆ ಓಡಾಡುತ್ತಿದ್ದಾರೆ ಎಂದು ಹೇಳಿದರು.
ವಿಧಾನಸೌಧದಲ್ಲಿ ಯಾವ ಸಚಿವರೂ ಕೂಡ ಸಿಗುತ್ತಿಲ್ಲ. ಮುಖ್ಯಮಂತ್ರಿಯವರಿಗೆ ಸರ್ಕಾರ ಅಸ್ತಿತ್ವದಲ್ಲಿರುವ ನಂಬಿಕೆಯಿಲ್ಲ. ಇಂತಹ ವಾತಾವರಣದಲ್ಲಿ ಸರ್ಕಾರ ಮುಂದುವರಿದಿರುವುದು ನೋವಿನ ಸಂಗತಿ ಎಂದರು.
ಇನ್ನಾದರೂ ಸರ್ಕಾರದ ಕೆಲಸದತ್ತ ಗಮನಹರಿಸಲಿ. ಅವರ ಶಾಸಕರನ್ನು ಹಿಡಿತದಲ್ಲಿ ಇಟ್ಟುಕೊಂಡು ಬಿಜೆಪಿ ಮೇಲೆ ಆರೋಪ ಮಾಡದೆ ಅಭಿವೃದ್ಧಿ ಕೆಲಸದತ್ತ ಗಮನಹರಿಸಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.