ಸಾಮಾನ್ಯ ರೋಗಿಗಳಿಗಾಗಿ ಓಲಾ, ಊಬರ್ ಸೇವೆ
Team Udayavani, Apr 8, 2020, 12:23 PM IST
ಬೆಂಗಳೂರು: ಕೋವಿಡ್ 19 ವೈರಸ್ ನಿಯಂತ್ರಣಕ್ಕೆ ತುರ್ತು ವೈದ್ಯಕೀಯ ಸೇವೆಗಾಗಿ ಓಲಾ, ಉಬರ್ ಸಂಸ್ಥೆಗಳ 200 ವಾಹನಗಳಿಗೆ ಆರೋಗ್ಯ ಸಚಿವ ಶ್ರೀರಾಮುಲು ಚಾಲನೆ ನೀಡಿದರು.
ಬೆಂಗಳೂರಿನ ಸೆವೆನ್ ಮಿನಿಸ್ಟರ್ ಕ್ವಾಟ್ರರ್ಸ್‌ನಲ್ಲಿ ಚಾಲನೆ ನೀಡಿದ ಅವರು, ಸಾಮಾನ್ಯ ರೋಗಿಗಳ ತುರ್ತು ಸೇವೆಗಾಗಿ ಓಲಾ ಹಾಗೂ ಊಬರ್ ಕ್ಯಾಬ್‌ಗಳು ಮಂಗಳವಾರದಿಂದ 100 ಓಲಾ, 100 ಉಬರ್ ಕ್ಯಾಬ್‌ಗಳು ಓಡಾಟ ನಡೆಸಲಿವೆ. 108 ಆ್ಯಂಬುಲೆನ್ಸ್‌ಗಳು ಕೋವಿಡ್ 19 ವೈರಸ್ ರೋಗಿಗಳಿಗೆ ಬಳಕೆಯಾಗುತ್ತಿವೆ ಹೀಗಾಗಿ ಸಾಮಾನ್ಯ ರೋಗಿಗಳಿಗೆ ತೊಂದರೆ ಯಾಗಬಾರದು ಎನ್ನುವ ಕಾರಣಕ್ಕೆ ಓಲಾ, ಊಬರ್ ಕ್ಯಾಬ್‌ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಮುಲು ಹೇಳಿದರು. ಕೋವಿಡ್ 19 ಹೊರತುಪಡಿಸಿ ಸಾಮಾನ್ಯ, ಶೀತ, ಜ್ವರ, ಕೆಮ್ಮು ಹಾಗೂ ಇತರೆ ತೊಂದರೆಗಳಿಂದ ಚಿಕಿತ್ಸೆ ಪಡೆಯಲು ಸರ್ಕಾರಿ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಬರುತ್ತಿರುವ ರೋಗಿಗಳಿಗೆ ಚಿಕಿತ್ಸೆ ನೀಡದೇ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಿಗೆ ಕಳುಹಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.
ಹೀಗಾಗಿ ಸಾಮಾನ್ಯ ರೋಗಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೇ ಚಿಕಿತ್ಸೆ ನೀಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.