ಮಕ್ಕಳಿಗೆ ಹೊರೆಯಾಗಬಾರದೆಂದು ವೃದ್ಧ ಆತ್ಮಹತ್ಯೆ


Team Udayavani, Jun 10, 2018, 12:00 PM IST

hanging-2.jpg

ಬೆಂಗಳೂರು: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವೃದ್ಧರೊಬ್ಬರು, ತನ್ನಿಂದ ಯಾರಿಗೂ ತೊಂದರೆಯಾಗಬಾರದು ಎಂಬ ಕಾರಣಕ್ಕೆ ರಸ್ತೆ ಬದಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಣನಕುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಆರ್‌.ಬಿ.ಲೇಔಟ್‌ನ ಗೋವಿಂದರಾಜು (60) ಮೃತರು. ಶುಕ್ರವಾರ ರಾತ್ರಿ ವಾಯುವಿಹಾರಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟ ಅವರು 2 ಕಿ.ಮೀ ದೂರದ ಕೆಂಬತ್ತಹಳ್ಳಿ ಮುಖ್ಯರಸ್ತೆಯ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗೋವಿಂದರಾಜು, ಇಬ್ಬರು ಮಕ್ಕಳೊಂದಿಗೆ ಆರ್‌.ಬಿ.ಲೇಔಟ್‌ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಕಳೆದ ಕೆಲ ತಿಂಗಳುಗಳಿಂದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಮಕ್ಕಳಿಬ್ಬರೂ ತಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರಾದರೂ ತನಗೆ ಬಂದಿರುವ ಕಾಯಿಲೆಯಿಂದ ಅವರಿಗೆ ಆರ್ಥಿಕ ಹೊರೆ ಆಗಬಾರದು ಎಂಬ ಕಾರಣಕ್ಕೆ ಗೋವಿಂದರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಶುಕ್ರವಾರ ರಾತ್ರಿ ಮಕ್ಕಳ ಜತೆ ಊಟ ಮಾಡಿದ ಗೋವಿಂದರಾಜು ಅವರು ಬಳಿಕ ವಾಯುವಿಹಾರಕ್ಕೆ ಹೋಗಿ ಬರುವುದಾಗಿ ಮಕ್ಕಳಿಗೆ ಹೇಳಿ ಮನೆಯಿಂದ ಹೊರಟಿದ್ದಾರೆ. ಬಳಿಕ ಮನೆಯಿಂದ ಸುಮಾರು ಎರಡು ಕಿ.ಮೀ. ದೂರ ಬಂದು ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ಬೆಳಗ್ಗೆ ಈ ಮಾರ್ಗದಲ್ಲಿ ನಡೆದು ಹೋಗುತ್ತಿದ್ದ ಸಾರ್ವಜನಿಕರು ಮಾಹಿತಿ ನೀಡಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಮನೆ ಮಾಲೀಕರಿಗೆ ತೊಂದರೆ ಬೇಡ: ಗೋವಿಂದರಾಜು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಹೀಗಾಗಿ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡರೆ, ಮನೆಯಲ್ಲಿರುವ ಮಕ್ಕಳು ಮತ್ತು ಮನೆ ಮಾಲೀಕರಿಗೆ ಅನಗತ್ಯ ತೊಂದರೆ ಉಂಟಾಗಬಹುದು ಎಂದು ಭಾವಿಸಿ ಮನೆಯಿಂದ ಹೊರಗೆ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೋಣನಕುಂಟೆ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

14-bng

Namma Metro ಬಗ್ಗೆ ಸಿಎಜಿ ಆಡಿಟ್‌ ನಡೆಸಿ: ಸಂಸದ ತೇಜಸ್ವಿ

13-bng

Bengaluru: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದು ಸಹೋದರರ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

accident

Shirva: ಬೈಕ್‌ ಢಿಕ್ಕಿ; ಮಹಿಳೆಗೆ ಗಂಭೀರ ಗಾಯ

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

byndoor

Kundapura: ಕಾರು ಢಿಕ್ಕಿಯಾಗಿ ದನ ಸಾವು; ಕಾರು ಜಖಂ

1

Fire Accident: ಕುಂಬ್ರದಲ್ಲಿ ಗುಡಿಸಲು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.