ದೆಹಲಿಯಿಂದ ಬಂದವರ ಮೇಲೀಗ ಪಾಲಿಕೆ ಕಣ್ಣು 


Team Udayavani, Dec 18, 2021, 12:45 PM IST

ದೆಹಲಿಯಿಂದ ಬಂದವರ ಮೇಲೀಗ ಪಾಲಿಕೆ ಕಣ್ಣು 

ಬೆಂಗಳೂರು: ಹೈರಿಸ್ಕ್ ರಾಷ್ಟ್ರಗಳಾಯ್ತು; ಈಗ ದೆಹಲಿ ಸರದಿ!

ರಾಜ್ಯದಲ್ಲಿ ಈಚೆಗೆ ಹೊಸದಾಗಿ ಪತ್ತೆಯಾದ ಐದು ರೂಪಾಂತರಿ ತಳಿ ಒಮಿಕ್ರಾನ್‌ ಸೋಂಕು ಪ್ರಕರಣಗಳಲ್ಲಿ ಮೂವರ ಟ್ರಾವೆಲ್‌ ಹಿಸ್ಟರಿಯಲ್ಲಿ ದೆಹಲಿ ಉಲ್ಲೇಖವಾಗಿದೆ. ಈ ಮಧ್ಯೆ ದೆಹಲಿಯಲ್ಲಿಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈಹಿನ್ನೆಲೆಯಲ್ಲಿ ದೆಹಲಿಯಿಂದ ನಗರಕ್ಕೆ ಬಂದವರ ಮೇಲೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶೇಷಕಣ್ಣು ಇಡಲು ಮುಂದಾಗಿದೆ. ಈಗಾಗಲೇಬಂದಿಳಿದವರಿಗಾಗಿಯೂ ಹುಡುಕಾಟ ನಡೆಸಿದೆ.

ಮುಖ್ಯವಾಗಿ ದೆಹಲಿಯಿಂದ ಬಂದವರನ್ನು ವಿಶೇಷ ಪ್ರಯಾಣಿಕರು ಎಂದು ಪರಿಗಣಿಸಿ, ಪ್ರತ್ಯೇಕವಾಗಿ ಸ್ಕ್ರೀನಿಂಗ್‌ ಮಾಡುವುದರ ಜತೆಗೆ ಅವರವಾಸ ಮತ್ತು ಚಟುವಟಿಕೆಗಳ ಮೇಲೆ ನಿಗಾ ಇಡಲಾಗುವುದು. ಇದಲ್ಲದೆ, ಹೈರಿಸ್ಕ್ ರಾಷ್ಟ್ರಗಳಿಂದ ದೆಹಲಿಗೆ ಬಂದು ನಂತರ ಬೆಂಗಳೂರಿಗೆ ಈಗಾಗಲೇಆಗಮಿಸಿದ ಪ್ರಯಾಣಿಕರನ್ನು ಪತ್ತೆಹಚ್ಚಿ, ಪರೀಕ್ಷೆಗೊಳಪಡಿಸುವುದು ಹಾಗೂ ಅಗತ್ಯಬಿದ್ದರೆಕ್ವಾರಂಟೈನ್‌ ಮಾಡಲು ಸಿದ್ಧತೆ ನಡೆದಿದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.

ವಿಶೇಷ ನಿಗಾ: “ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚುತ್ತಿರುವ ಪ್ರಕರಣಗಳು ಮತ್ತು ಈಗಾಗಲೇ ನಗರದಲ್ಲಿದೃಢಪಟ್ಟ ಒಮಿಕ್ರಾನ್‌ ಪ್ರಕರಣಗಳ ಹಿನ್ನೆಲೆಯಲ್ಲಿ ದೆಹಲಿಯಿಂದ ಬಂದ ಪ್ರಯಾಣಿಕರ ಮೇಲೆ ವಿಶೇಷ ನಿಗಾ ಇಡಲು ಉದ್ದೇಶಿಸಲಾಗಿದೆ. ಇನ್ನು ಈಗಾಗಲೇ ಅಂದರೆ ಕಳೆದ ಒಂದು ವಾರದ ಈಚೆಗೆ ಹೈರಿಸ್ಕ್ ದೇಶಗಳಿಂದ ದೆಹಲಿ ಮಾರ್ಗವಾಗಿ ಬೆಂಗಳೂರಿಗೆ ಬಂದಿಳಿದವರ ಹುಡುಕಾಟ ನಡೆಸಲಾಗುತ್ತಿದೆ. ಅಂತಹವರ ಆರೋಗ್ಯದ ಮೇಲೆ ಗಮನಹರಿಸುವುದು, ಪರೀಕ್ಷೆ ಗೊಳಪಡಿಸುವುದು ಹಾಗೂ ಕ್ವಾರಂಟೈನ್‌ ಮತ್ತಿತರ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ’ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ ಮತ್ತು ಐಟಿ) ಡಾ.ತ್ರಿಲೋಕ್‌ಚಂದ್ರ “ಉದಯವಾಣಿ’ಗೆ ತಿಳಿಸಿದ್ದಾರೆ.

“ಹೀಗೆ ಕಳೆದ ಒಂದು ವಾರದಲ್ಲಿ ದೆಹಲಿಯಿಂದ ಬಂದ ಪ್ರಯಾಣಿಕರು ಎಷ್ಟು ಎಂಬುದರ ನಿಖರ ಮಾಹಿತಿ ಸದ್ಯಕ್ಕೆ ಲಭ್ಯವಿಲ್ಲ. ಆದರೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣದಿಂದ ಪ್ರಯಾಣಿಕರ ಮಾಹಿತಿ ಪಡೆದು ಪತ್ತೆಹಚ್ಚಲಾಗುವುದು. ಇದೆಲ್ಲದರ ಉದ್ದೇಶ ಆರಂಭದಲ್ಲೇ ಸೋಂಕಿಗೆ ಸಾಧ್ಯವಾದಷ್ಟು ಬ್ರೇಕ್‌ ಹಾಕುವುದಾಗಿದೆ’ ಎಂದು ಸ್ಪಷ್ಟಪಡಿಸಿದರು.

ಸಾಂಸ್ಥಿಕ ಕ್ವಾರಂಟೈನ್‌ಗೆ ಇಂದು ಪ್ರಸ್ತಾವನೆ: ಇದಲ್ಲದೆ, ಹೈರಿಸ್ಕ್ ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್‌ ಗೂ ಚಿಂತನೆ ನಡೆದಿದ್ದು, ಈ ಸಂಬಂಧ ಸರ್ಕಾರಕ್ಕೆ ಶನಿವಾರ ಪ್ರಸ್ತಾವನೆ ಸಲ್ಲಿಸಲು ಬಿಬಿಎಂಪಿಉದ್ದೇಶಿಸಿದೆ. ಇದಕ್ಕೆ ಅನುಮತಿ ದೊರೆತರೆ, ವಿದೇಶಿಪ್ರಯಾಣಿಕರು ನಿಲ್ದಾಣಕ್ಕೆ ಹತ್ತಿರದ ಹೋಟೆಲ್‌ಗ‌ಳಲ್ಲೇ ವಾರಗಟ್ಟಲೆ “ಲಾಕ್‌’ ಆಗಲಿದ್ದಾರೆ.

ಪ್ರಸ್ತುತ ವ್ಯವಸ್ಥೆಯಲ್ಲಿ ಹೈರಿಸ್ಕ್ ರಾಷ್ಟ್ರಗಳಿಂದ ನಗರಕ್ಕೆ ಬಂದಿಳಿದವರನ್ನು ಕೊರೊನಾ ಪರೀಕ್ಷೆಗೊಳಪಡಿಸಲಾ ಗುತ್ತಿದೆ. ವರದಿ ಬಂದ ನಂತರ ಮನೆಗೆ ಕಳುಹಿಸಲಾಗುತ್ತಿದೆ. ಅಲ್ಲಿ ಅವರೆಲ್ಲರಿಗೆ ಹೋಂ ಕ್ವಾರಂಟೈನ್‌ಆಗುತ್ತಾರೆ. ಆದರೆ, ಇದರಲ್ಲಿ ಬಹುತೇಕರು ನಿಯಮ ಪಾಲಿಸುತ್ತಿಲ್ಲ. ಈ ಮಧ್ಯೆ ರೂಪಾಂತರಿ ತಳಿ ಪತ್ತೆಯಾಗುತ್ತಿದೆ. ಅಷ್ಟರಲ್ಲಿ ಹತ್ತಾರು ಕಡೆ ಓಡಾಡಿಕೊಂಡು ಬಂದಿರುತ್ತಾರೆ. ಇದು ಬಿಬಿಎಂಪಿ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಆದ್ದರಿಂದ ಸಾಂಸ್ಥಿಕ ಕ್ವಾರಂಟೈನ್‌ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು, ಇದಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ರಿಸ್‌ಮಸ್‌, ಹೊಸ ವರ್ಷಾಚರಣೆಗೆ ಬ್ರೇಕ್‌? :

ಕ್ರಿಸ್‌ಮಸ್‌ ಮತ್ತು ಹೊಸ ವರ್ಷಾಚರಣೆ ಹೊಸ್ತಿಲಲ್ಲೇ ರೂಪಾಂತರಿ ತಳಿಯ ಸೋಂಕು ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಈ ಎರಡೂ ಆಚರಣೆಗೆ ಬ್ರೇಕ್‌ ಬೀಳುವ ಸಾಧ್ಯತೆದಟ್ಟವಾಗಿದೆ. ಕೋವಿಡ್‌ ತಾಂತ್ರಿಕ ಸಲಹಾಸಮಿತಿ ಶಿಫಾರಸು ಆಧರಿಸಿ ಬಿಬಿಎಂಪಿಯು ಈ ಎರಡೂ ಹಬ್ಬಗಳ ಆಚರಣೆಗೆ ಕೆಲವು ನಿರ್ಬಂಧಗಳನ್ನು ವಿಧಿಸುವ ಅಗತ್ಯವಿದೆ ಎಂದುಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ. ಅದರಂತೆ ಸರ್ಕಾರದ ಗ್ರೀನ್‌ ಸಿಗ್ನಲ್‌ ದೊರಕಿದರೆ, ಸಂಭ್ರಮಕ್ಕೆ ತಡೆ ಉಂಟಾಗಲಿದೆ.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.