ರಾಜ್ಯ ಸರ್ಕಾರಿ ನೌಕರರಿಗೆ ನಾಲ್ಕನೇ ಶನಿವಾರವೂ ರಜೆ 


Team Udayavani, May 1, 2018, 11:49 AM IST

sarkari-nowka.jpg

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಆರನೇ ರಾಜ್ಯ ವೇತನ ಆಯೋಗ ತನ್ನ ಅಂತಿಮ ವರದಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ತಿಂಗಳ ನಾಲ್ಕನೇ ಶನಿವಾರವೂ ರಜೆ ನೀಡುವಂತೆ ಶಿಫಾರಸು ಮಾಡಿದೆ.

ವೇತನ ಆಯೋಗದ ಅಧ್ಯಕ್ಷ ಎಂ.ಆರ್‌.ಶ್ರೀನಿವಾಸಮೂರ್ತಿ ಮತ್ತು ಸದಸ್ಯರು ಸೋಮವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರಿಗೆ ಸುಮಾರು 500 ಪುಟಗಳ ಅಂತಿಮ ವರದಿ ಸಲ್ಲಿಸಿದೆ. ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವರದಿಯ ಅಂಶಗಳನ್ನು ಬಹಿರಂಗಪಡಿಸಲು ಆಯೋಗ ಮತ್ತು ಸರ್ಕಾರ ನಿರಾಕರಿಸಿದೆ.

ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ವೇತನ ಮತ್ತು ಪಿಂಚಣಿಗಳನ್ನು ಪರಿಷ್ಕರಿಸುವ ಕುರಿತು ಆಯೋಗ ಜ.31ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಶೇ. 30ರಷ್ಟು ವೇತನ ಪರಿಷ್ಕರಣೆಗೆ ಸೂಚಿಸಿತ್ತು. ಅದರಂತೆ ಸರ್ಕಾರ ಕ್ರಮ ಕೈಗೊಂಡಿದೆ.

ಇದೀಗ ಆಯೋಗದ ಅವಧಿ ಸೋಮವಾರಕ್ಕೆ ಕೊನೆಗೊಳ್ಳುತ್ತಿರುವುದರಿಂದ ತನ್ನ ಅಂತಿಮ ವರದಿ ಸಲ್ಲಿಸಿದ್ದು, ಕೆಲವು ಇಲಾಖೆಗಳಲ್ಲಿ ವೇತನ ನಿಗದಿ ಕುರಿತಂತೆ ಇರುವ ವ್ಯತ್ಯಾಸ, ಒಂದೇ ಹುದ್ದೆಯಲ್ಲಿರುವ ನೌಕರರ ಮಧ್ಯೆ ಇರುವ ವೇತನ ಅಸಮಾನತೆ ನಿವಾರಣೆ, ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಹಲವು ಶಿಫಾರಸುಗಳನ್ನು ಮಾಡಿದೆ.

ಹಿರಿಯ ನೌಕರರಿಗೆ ವೇತನ ಬಡ್ತಿ ಮತ್ತು ಫಿಟ್‌ಮೆಂಟ್‌ ಕಡ್ಡಾಯವಾಗಿ ನೀಡಬೇಕು. ರಾಜ್ಯ ಸರಕಾರಿ ನೌಕರರಿಗೆ ಉಚಿತ ಆರೋಗ್ಯ ಭದ್ರತೆ ಒದಗಿಸುವ ‘ಜ್ಯೋತಿ ಸಂಜೀವಿನಿ’ (ನಗದು ರಹಿತ ಚಿಕಿತ್ಸಾ ಸೌಲಭ್ಯ) ಅನುದಾನಿತ ಸಂಸ್ಥೆಗಳ ನೌಕರರಿಗೂ ನೀಡಬೇಕು ಮತ್ತು ಎಲ್ಲಾ ಕಾಯಿಲೆಗಳಿಗೂ ಅನ್ವಯ ಮಾಡಬೇಕು. ಸ್ವಯಂ ನಿವೃತ್ತಿ ಪಡೆಯಲು ಇರುವ ಗರಿಷ್ಠ ಸೇವಾವಧಿಯನ್ನು 33 ವರ್ಷದಿಂದ 30 ವರ್ಷಕ್ಕೆ ಇಳಿಸಬೇಕು ಎಂದು ಆಯೋಗ ತನ್ನ ಶಿಫಾರಸಿನಲ್ಲಿ ಹೇಳಿದೆ ಎಂದು ತಿಳಿದುಬಂದಿದೆ.

ನೌಕರರ ವೇತನದಲ್ಲಿ ಅಸಮಾನತೆ ಹೋಗಲಾಡಿಸಲು ಕೆಲ ಭತ್ಯೆಗಳನ್ನು ನೀಡುವಂತೆ ಮತ್ತು ತರ್ಕಬದ್ಧವಾಗಿ ವೇತನ ನಿಗದಿಪಡಿಸಬೇಕು ಎಂದು ಹೇಳಿದೆ. ಅಲ್ಲದೆ, ವೇತನ ಬಡ್ತಿ ನೀಡುವ ಸಂದರ್ಭದಲ್ಲಿ ನೌಕರರ ಕಾರ್ಯಕ್ಷಮತೆ ಪರಿಗಣಿಸಬೇಕು. ಈ ಮೂಲಕ ಸರ್ಕಾರಿ ನೌಕರರಲ್ಲೇ ಸ್ಪರ್ಧಾತ್ಮಕ ಮನೋಭಾವ ಬೆಳೆಯಲು ಅವಕಾಶ ಕಲ್ಪಿಸಬೇಕು. ಇದರಿಂದ ಅವರ ಕಾರ್ಯಕ್ಷಮತೆ ಸುಧಾರಣೆಯಾಗಿ ಕೆಲಸಗಳು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಯಲು ಸಾಧ್ಯವಾಗುತ್ತದೆ ಎಂದು ಆಯೋಗ ಶಿಫಾರಸು ಮಾಡಿದೆ.

ಇದಲ್ಲದೆ, ರಾಜ್ಯ ಸರ್ಕಾರ ಅಳವಡಿಸಿಕೊಂಡಿರುವ ತುಟ್ಟಿ ಭತ್ಯೆ ಸೂತ್ರದಲ್ಲಿ ಕೆಲವೊಂದು ಮಾರ್ಪಾಟುಗಳನ್ನು ಮಾಡಿಕೊಳ್ಳಬೇಕು. ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ, ವಿಶೇಷ ಭತ್ಯೆ, ರಜೆ ಪ್ರಯಾಯಿತಿ, ವೈದ್ಯಕೀಯ ಮರುಪಾವತಿ ಪ್ರಮಾಣವನ್ನು ಪ್ರಸ್ತುತ ಹಣದುಬ್ಬರ ಪ್ರಮಾಣಕ್ಕೆ ತಕ್ಕಂತೆ ಹೆಚ್ಚಿಸಬೇಕು ಎಂದೂ ಆಯೋಗವು ತನ್ನ ಶಿಫಾರಸಿನಲ್ಲಿ ತಿಳಿಸಿರುವುದಾಗಿ ಮೂಲಗಳು ಹೇಳಿವೆ.

ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆಯೂ ಆಯೋಗ ಕೆಲವು ಶಿಫಾರಸುಗಳನ್ನು ಮಾಡಿದ್ದು, ಪ್ರಸ್ತುತ ಇರುವ ಖಾಲಿ ಹುದ್ದೆಗಳ ಪೈಕಿ ಅಗತ್ಯವಿರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು. ನೌಕರರಿಗೆ ಆಗಾಗೆ ತರಬೇತಿ ನೀಡಬೇಕು ಎಂದು ಹೇಳಿದೆ. ಅಲ್ಲದೆ, ಉತ್ತಮವಾಗಿ ಕಾರ್ಯನಿರ್ವಹಿಸುವ ನೌಕರರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದರೊಂದಿಗೆ ಅವರಿಗೆ ನೀಡುವ ನಗದು ಪುರಸ್ಕಾರದ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದೂ ಹೇಳಿರುವುದಾಗಿ ತಿಳಿದುಬಂದಿದೆ.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.