ಒಂದೆಡೆ ಬಜೆಟ್‌ ಸಿರಿ, ಮತ್ತೂಂದೆಡೆ ಕಾಂಗ್ರೆಸ್‌ಗೆ ಉರಿ


Team Udayavani, Feb 3, 2019, 6:31 AM IST

ondede.jpg

ಬೆಂಗಳೂರು: ದೇಶದಲ್ಲಿ ಒಂದು ಕಡೆ ಬಜೆಟ್‌ನ ಸಿರಿ ಕಂಡರೆ, ಮತ್ತೂಂದೆಡೆ ಕಾಂಗ್ರೆಸ್‌ಗೆ ಉರಿ ಕಾಣಿಸುತ್ತಿದೆ. ಈ ಬಾರಿಯ ಕೇಂದ್ರ ಬಜೆಟ್‌ ಇಡೀ ದೇಶದಲ್ಲಿ ಸಂಚಲನ ಉಂಟುಮಾಡಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ತಿಳಿಸಿದರು.

ರಾಜ್ಯ ಬಿಜೆಪಿ ವತಿಯಿಂದ ನಗರದ ಪುರಭವನ ಬಳಿ ಶನಿವಾರ ನಡೆದ “ಕೇಂದ್ರ ಬಜೆಟ್‌ ಅಭಿನಂದನಾ ಸಮಾರಂಭ’ದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಈವರೆಗೂ ಹಲವಾರು ಬಜೆಟ್‌ಗಳು ಬಂದಿದೆ, ಆದರೆ, ಪ್ರಧಾನಿ ಮೋದಿ ಹಾಗೂ ಸಚಿವ ಪಿಯೂಷ್‌ ಗೋಯಲ್‌ ಅವರು ಈ ಬಾರಿ ನಮಗೆ ಕೊಟ್ಟಿರುವ ಬಜೆಟ್‌ನಲ್ಲಿ ಸಿರಿ ಕಾಣಿಸುತ್ತಿದ್ದು, ಅದರಲ್ಲಿರುವ ಅಭಿವೃದ್ಧಿ ಹಾಗೂ  ಜನಪರ ಯೋಜನೆಗಳನ್ನು ಕಂಡು,

ಕೇಳಿ ಕಾಂಗ್ರೆಸ್‌ಗೆ ಉರಿ ಕಾಣಿಸಿಕೊಳ್ಳುತ್ತಿದೆ ಎಂದ ಅವರು “ಮೋದಿಯ ಬಜೆಟ್‌, ವಿರೋಧಿಗಳಿಗೆ ಟಿಕೆಟ್‌’ ಎಂದು ಘೋಷಣೆ ಕೂಗಿದರು. ಇನ್ನು ಬಜೆಟ್‌ ಮೂಲಕ ಪ್ರಧಾನಿ ಮೋದಿ ದೇಶದ ಜನಗಳಿಗೆ ಲಾಲಿಪಪ್‌ ಕೋಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಟೀಕೆ ಮಾಡುತ್ತಿದ್ದು, 60ಕ್ಕೂ ಹೆಚ್ಚು ವರ್ಷ ದೇಶದ ಆಡಳಿತ ಮಾಡಿದ ಕಾಂಗ್ರೆಸ್‌ ಜನರಿಗೆ ಒಂದು ಕಾಳು ಕಡೆಲೆ ಕೊಡಲಿಲ್ಲ ಎಂದು ವ್ಯಂಗ್ಯವಾಡಿರು. 

ಈ ಬಾರಿ ಬಜೆಟ್‌ನಲ್ಲಿ ಶ್ರೀಸಾಮಾನ್ಯನಿಗೆ ತೆರಿಗೆ ಹೊರೆಯನ್ನು ಇಳಿಸಿ ಬಂಪರ್‌ ಕೊಡುಗೆ ನೀಡಲಾಗಿದೆ. ವೃದ್ದಾಪ್ಯದಲ್ಲಿರುವವರಿಗೆ ಐತಿಹಾಸಿಕ ಯೋಜನೆಯೊಂದನ್ನು ತರುವ ಮೂಲಕ ಪ್ರತಿ ತಿಂಗಳು 3,000 ರೂ. ನೀಡುತ್ತಿದ್ದಾರೆ. ಒಟ್ಟಾರೆ ಈ ಬಾರಿ ವಿವಿಧ ಯೋಜನೆ ಮೂಲಕ 12 ಕೋಟಿ ರೈತ ಕುಟುಂಬ, 62 ಕೊಟಿ ಜನ ಕಾರ್ಮಿಕರಿಗೆ ಸೇರಿದಂತೆ ರಕ್ಷಣಾ ವಲಯಕ್ಕೆ ದಾಖಲೆಯ ಮೂರು ಲಕ್ಷ ಕೋಟಿ ರೂ. ಕೊಟ್ಟಿದ್ದು, ಒಟ್ಟಾರೆ ಈ ಬಜೆಟ್‌ “ಜೈ ಜವಾನ್‌ ಜೈ ಕಿಸಾನ್‌ ಜೈ ಕಾರ್ಮಿಕ್‌’ ಎಂಬ ತ್ರಿವಿಧ ಸೂತ್ರವನ್ನು ಪಾಲಿಸಿದ್ದಾರೆ ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ ಮಾತನಾಡಿ, ಕೇಂದ್ರ ಬಜೆಟ್‌ನಲ್ಲಿ ರೈತರಿಗೆ, ಕಾರ್ಮಿಕರಿಗೆ, ಮಧ್ಯಮವರ್ಗದವರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚಿನ ನೆರವು ನೀಡಲಾಗಿದೆ. ಈ ಮೂಲಕ ಈ ಬಜೆಟ್‌ ಎಲ್ಲರನ್ನು ಒಳಗೊಂಡಿದ್ದು, ಈ ಬಜೆಟ್‌ನಿಂದ ಕಾಂಗ್ರೆಸ್‌ ಸೇರಿದಂತೆ ಎಲ್ಲ ವಿರೋಧ ಪಕ್ಷಗಳು ದಿಕ್ಕಾಪಾಲಾಗಿವೆ. ಇಷ್ಟು ದಿನ ಮೋದಿ ಜೀ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದ ವಿರೋಧಿಗಳ ಬಾಯಿಗೆ ಬೀಗ ಬಿದ್ದಿದೆ.

ಮುಖ್ಯವಾಗಿ ಮಾಜಿ ಪ್ರಧಾನಿ ದೇವೇಗೌಡ, ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲರೂ ಚಿಂತೆಗೀಡಾಗಿದ್ದಾರೆ. ಇನ್ನು ಈ ಬಜೆಟ್‌ ಜಾರಿಗೆ ಬರಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ, ಕಳೆದ ಬಾರಿ ಅವರು ಮಂಡಿಸಿದ ಬಜೆಟ್‌ ಜಾರಿಗೆ ಬಂತೇ ಅವರು ಎಂದು ಪ್ರಶ್ನಿಸಿದ ಅವರು ಕೇಂದ್ರ ಸರ್ಕಾರ ರೈತ ವಿರೋಧಿ ಎಂದು ಹೇಳುತ್ತಿದ್ದವರಿಗೂ ಬಜೆಟ್‌ ಮೂಲಕ ಪ್ರಧಾನಿ ನರೇಂದ್ರಮೋದಿ ಉತ್ತರ ನೀಡಿದ್ದಾರೆ ಎಂದು ಹೇಳಿದರು.

ಬಿಜೆಪಿ ರಾಜ್ಯ ಪ್ರದಾನ ಕಾರ್ಯದರ್ಶಿ ರವಿಕುಮಾರ್‌, ರಾಜ್ಯ ಕಾರ್ಯದರ್ಶಿ ಜಯದೇವ್‌, ತೇಜಸ್ವಿನಿ ಗೌಡ,  ಬೆಂಗಳೂರು ಮಹಾನಗರ ಬಿಜೆಪಿ ಅಧ್ಯಕ್ಷ ಪಿ.ಎನ್‌.ಸದಾಶಿವ ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.