ಒನಕೆ ಹಿಡಿದು ಬೀದಿಗಿಳಿದ ವೀರವನಿತೆಯರು

Team Udayavani, Nov 7, 2017, 1:27 PM IST

onake-tippu.jpg

ಬೆಂಗಳೂರು: ಬಹು ಜನರ ವಿರೋಧದ ನಡುವೆಯೂ ಟಿಪ್ಪು ಜಯಂತಿ ಆಚರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಸೋಮವಾರ ಒನಕೆ ಚಳವಳಿ ನಡೆಸಿದ ವೀರವನಿತೆ ಒನಕೆ ಓಬವ್ವ ಹೋರಾಟ ವೇದಿಕೆ ಕಾರ್ಯಕರ್ತರು, ನ.10ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ್ದಾರೆ.

ನಗರದ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಒನಕೆ ಓಬವ್ವನ ವೇಶ ಧರಿಸಿ, ಕೈಯ್ಯಲ್ಲಿ ಒನಕೆ ಹಿಡಿದಿದ್ದ ಮಹಿಳೆಯರೊಂದಿಗೆ ಪ್ರತಿಭಟನೆ ನಡೆಸಿದ ವೇದಿಕೆ ಕಾರ್ಯಕರ್ತರು, ಟಿಪ್ಪು ಜಯಂತಿ ಓಬವ್ವನ ಶೌರ್ಯದ ಇತಿಹಾಸಕ್ಕೆ ಮಾಡುವ ಅವಮಾನ. ಆದ್ದರಿಂದ ಟಿಪ್ಪು ಜಯಂತಿ ವಿರೋಧಿಸಿ ನ.10ರಂದು ದೊಡ್ಡ ಮಟ್ಟದಲ್ಲಿ ಜನರನ್ನು ಸೇರಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.

ವೇದಿಕೆ ಅಧ್ಯಕ್ಷ ಡಾ.ಜೀವರಾಜ್‌ ಮಾತನಾಡಿ, ಒನಕೆ ಓಬವ್ವ, ವೈರಿಗಳ ವಿರುದ್ಧ ಹೋರಾಡಿದ ವೀರ ಮಹಿಳೆ. ಟಿಪ್ಪು ತಂದೆ ಹೈದರಾಲಿಯ ವಿರುದ್ಧ ಹೋರಾಡುವಾಗ ಓಬವ್ವ ವೀರಮರಣವಪ್ಪಿದ್ದಳು. ಆದರೆ, ರಾಜ್ಯ ಸರ್ಕಾರ ಕಳೆದ ಎರಡು ವರ್ಷಗಳಿಂದ ಟಿಪ್ಪು ಜಯಂತಿ ಆಚರಿಸುವ ಮೂಲಕ ಒನಕೆ ಓಬವ್ವಳಿಗೆ ಅವಮಾನ ಮಾಡುತ್ತಿದೆ ಎಂದು ಆರೋಪಿಸಿದರು.

ಪ್ರಸ್ತುತ ಸಮಾಜದಲ್ಲಿ ಮಹಿಳೆಯ ಮೇಲಿನ ದೌರ್ಜನ್ಯ ಹಾಗೂ ಆತ್ಯಚಾರ ಪ್ರಕರಣಗಳು ಹೆಚ್ಚುತ್ತಿವೆ. ಇಂತಹ ಸಂದರ್ಭದಲ್ಲಿ ಮಹಿಳೆಯರಿಗೆ ಒನಕೆ ಓಬವ್ವಳಂತಹ ಶೂರ ಮಹಿಳೆಯ ಆದರ್ಶ ತಿಳಿಸಿ ಮಹಿಳೆಯರ ಆತ್ಮಸ್ಥೈರ್ಯ ಹೆಚ್ಚಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಅದರ ಬದಲಾಗಿ ಓಬವ್ವಳ ಶೌರ್ಯವನ್ನೇ ಅವಮಾನಿಸುವ ರೀತಿಯಲ್ಲಿ ಟಿಪ್ಪು ಜಯಂತಿ ಆಚರಿಸಿ ವೀರವನಿತೆಯ ಇತಿಹಾಸಕ್ಕೆ ಮಸಿ ಬಳಿಯುವ ಕೆಲಸಕ್ಕೆ ಮುಂದಾಗಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟಿಪ್ಪು ಒಬ್ಬ ಮತಾಂಧ. ಸಾವಿರಾರು ಹುಂದೂ ದೇವಾಲಯಗಳನ್ನು ಧ್ವಂಸಗೊಳಿಸಿದ್ದ. ಲಕ್ಷಾಂತರ ಮಂದಿಯನ್ನು ಮತಾಂತರ ಮಾಡಿದ್ದ. ತನ್ನ ಅರಸುತನ ಉಳಿಸಿಕೊಳ್ಳಲು ಬ್ರಿಟೀಷರ ವಿರುದ್ಧ ಹೋರಾಡಿದ ಮಾತ್ರಕ್ಕೆ ಆತ ಸ್ವಾತಂತ್ರ ಹೋರಾಟಗಾರನಾಗುವುದಿಲ್ಲ. ಆದರೆ, ಆತನೊಬ್ಬ ಸ್ವಾತಂತ್ರÂ  ಹೋರಾಟಗಾರ ಎಂದು ಸುಳ್ಳು ಹೇಳಿ ಜಯಂತಿಗೆ ಮುಂದಾಗಿರುವುದು ಅಕ್ಷಮ್ಯ. ಇದನ್ನು ವಿರೋಧಿಸಿ ನ.10ರಂದು ದೊಡ್ಡಮಟ್ಟದಲ್ಲಿ ಜನಾಂದೋಲನ ರೂಪಿಸಿ ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಚಿ.ನಾ.ರಾಮು ಮಾತನಾಡಿ, ಹಿಂದೂಗಳ ಮಾರಣಹೋಮ ಮಾಡಿದ ಟಿಪ್ಪು ಹೆಸರಿನಲ್ಲಿ ಸರ್ಕಾರ ಜಯಂತಿ ಮಾಡುತ್ತಿರುವುದು ದೇಶಕ್ಕೆ ಮಾಡಿದ ಅವಮಾನ. ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಹೇಳಿದರು. ಪ್ರತಿಭಟನೆಯಲ್ಲಿ ವೇದಿಕೆಯ ಸಂಚಾಲಕ ಆರ್‌.ಓ.ವೇಣುಗೋಪಾಲ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.