ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Team Udayavani, May 26, 2018, 11:52 AM IST

bahiranga.jpg

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಬಹಿರಂಗ ಪ್ರಚಾರಕ್ಕೆ ಶನಿವಾರ ಸಂಜೆ ತೆರೆ ಬೀಳಲಿದ್ದು, ಮೂರು ಪಕ್ಷಗಳು ಮತದಾರರನ್ನು ಸೆಳೆಯಲು ಅಂತಿಮ ಹಂತದ ಕಸರತ್ತು ನಡೆಸಿವೆ.

ಸಮ್ಮಿಶ್ರ ಸರ್ಕಾರದ ಮಿತ್ರ ಪಕ್ಷಗಳಾದ ಕಾಂಗ್ರೆಸ್‌, ಜೆಡಿಎಸ್‌ ನಾಯಕರಲ್ಲೇ ಒಮ್ಮತದ ಅಭ್ಯರ್ಥಿ ಸ್ಪರ್ಧೆ ಬಗ್ಗೆ ಸಹಮತ ಮೂಡದ ಕಾರಣ ಕಾಂಗ್ರೆಸ್‌, ಜೆಡಿಎಸ್‌ ಅಭ್ಯರ್ಥಿಗಳು ಪರಸ್ಪರ ಎದುರಾಳಿಗಳಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲೂ ಕಾಂಗ್ರೆಸ್‌ನ ಮುನಿರತ್ನ, ಜೆಡಿಎಸ್‌ನ ರಾಮಚಂದ್ರ ಸ್ಪರ್ಧೆಯಿಂದ ಹಿಂದೆ ಸರಿಯಲು ಒಪ್ಪದ ಕಾರಣ ಒಮ್ಮತದ ಅಭ್ಯರ್ಥಿಯ ಸ್ಪರ್ಧೆ ವಿಚಾರ ಕಗ್ಗಂಟಾಗಿ ಉಳಿದಿತ್ತು. ಶುಕ್ರವಾರವೂ ಈ ಬಗ್ಗೆ ಉಭಯ ಪಕ್ಷಗಳ ನಾಯಕರ ಮಟ್ಟದಲ್ಲಿ ಮ್ಮತ ಮೂಡದ ಕಾರಣ ಮುನಿರತ್ನ, ರಾಮಚಂದ್ರ ಬಿರುಸಿನ ಪ್ರಚಾರ ನಡೆಸಿದರು.

ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರು ಜೆಡಿಎಸ್‌ ಮುಖಂಡ ಹನುಮಂತರಾಯಪ್ಪ ಅವರ ನಿವಾಸದಲ್ಲಿ ಶುಕ್ರವಾರ ಸಂಜೆ ಸಭೆ ನಡೆಸಿದರು. ಶಾಸಕರಾದ ಕೆ.ಗೋಪಾಲಯ್ಯ, ಸುರೇಶ್‌ಗೌಡ, ಟಿ.ಎ.ಶರವಣ ಇತರರು ಪಾಲ್ಗೊಂಡಿದ್ದರು.

ಸಭೆ ಬಳಿಕ ಮಾತನಾಡಿದ ಎಚ್‌.ಡಿ.ದೇವೇಗೌಡ, ಜಯನಗರ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟು ಕೊಟ್ಟು ಆರ್‌.ಆರ್‌.ನಗರದಲ್ಲಿ ಜೆಡಿಎಸ್‌ ಅಭ್ಯರ್ಥಿ ಬೆಂಬಲಿಸುವ ವಿಚಾರಕ್ಕೆ ಸ್ಪಂದನೆ ಸಿಗಲಿಲ್ಲ. ಕ್ಷೇತ್ರದ ಕೆಲ ಕಾಂಗ್ರೆಸ್‌ ಸದಸ್ಯರು ಜೆಡಿಎಸ್‌ ಅಭ್ಯರ್ಥಿಯನ್ನು ಬೆಂಬಲಿಸಿದ್ದಾರೆ. ಪಕ್ಷದ ಅಭ್ಯರ್ಥಿ ರಾಮಚಂದ್ರ ಗೆಲುವಿಗೆ ಶ್ರಮಿಸುತ್ತೇನೆ,’ ಎಂದು ಹೇಳಿದ್ದು, ಶನಿವಾರ ಕ್ಷೇತ್ರದಲ್ಲಿ ದೇವೇಗೌಡರು ಪ್ರಚಾರ ನಡೆಸುವ ಸಾಧ್ಯತೆ ಇದೆ.

ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಸ್ಪರ್ಧೆ ಗೊಂದಲದ ನಡುವೆ ಬಿಜೆಪಿಯ ತುಳಸಿ ಮುನಿರಾಜುಗೌಡ, ಮತದಾರರನ್ನು ಸೆಳೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹಾಗೂ ಬಿಜೆಪಿಯ ಹಲವು ಶಾಸಕರು ಪಕ್ಷದ ಪರ ಪ್ರಚಾರ ನಡೆಸಿದ್ದಾರೆ. ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವುದರಿಂದ ಶನಿವಾರ ಮೂರೂ ಪಕ್ಷಗಳ ನಾಯಕ ದಂಡು ಕ್ಷೇತ್ರದಲ್ಲಿ ಪ್ರಚಾರಕ್ಕಿಳಿಯುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

1-hak

ಕೊಡವ ಕೌಟುಂಬಿಕ ಹಾಕಿಗೆ ಸರಕಾರದಿಂದ 1 ಕೋ. ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.