ಬಿಜೆಪಿಗೆ ಆಪರೇಷನ್ ಹೊಸತಲ್ಲ
Team Udayavani, Sep 30, 2018, 12:28 PM IST
ಬೆಂಗಳೂರು: ಬಿಜೆಪಿಯವರಿಗೆ ಆಪರೇಷನ್ ಕಮಲ ಹೊಸತಲ್ಲ. 2008ರಿಂದಲೂ ಮಾಡಿಕೊಂಡು ಬಂದಿದ್ದಾರೆ. ಅದರಿಂದ ಎಷ್ಟು ಯಶಸ್ವಿಯಾಗಿದ್ದಾರೆ ಎಂಬುದೂ ಗೊತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಭಾರತೀಯ ವಿದ್ಯಾಭವನದಲ್ಲಿ ನಡೆದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರ “ಅಥೆನ್ಸ್‌ನ ರಾಜ್ಯಾಡಳಿತ’ ಕೃತಿ ಬಿಡುಗಡೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಮಾಡುತ್ತಿರುವ ಆಪರೇಷನ್ ಕಮಲ ಎಷ್ಟರ ಮಟ್ಟಿಗೆ ಫಲ ಕೊಡುತ್ತದೆ ಎಂಬುದನ್ನು ಕಾದು ನೋಡೋಣ ಎಂದು ವ್ಯಂಗ್ಯವಾಡಿದರು.
ಬಿಬಿಎಂಪಿ ಮೇಯರ್-ಉಪಮೇಯರ್ ಚುನಾವಣೆ ಸಂದರ್ಭದಲ್ಲೂ ಪ್ರಯತ್ನ ಪಟ್ಟಿದ್ದಾರೆ. ನಾವು ಆ ಬಗ್ಗೆ ಹೆಚ್ಚು ಗಮನ ನೀಡಿರಲಿಲ್ಲ. ಆದರೂ ಪಕ್ಷ ವಿರೋಧ ಚುಟುವಟಿಕೆ ನಡೆಸಿದ ಬಿಬಿಎಂಪಿ ಸದಸ್ಯರ ವಿರುದ್ಧ ಪಕ್ಷವು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ನಂಬಿಕೆ ಇದ್ದವರು ಹೋಗ್ತಾರೆ, ಇಲ್ಲದವರು ಹೋಗಲ್ಲ: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಸಂಬಂಧ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಎಚ್.ಡಿ.ದೇವೇಗೌಡ ಅವರು, ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೂ ಅವಕಾಶ ನೀಡಬೇಕು ಎಂದು ಹಲವು ಹೋರಾಟಗಳು ನಡೆದಿವೆ. ಸರ್ವೋತ್ಛ ನ್ಯಾಯಾಲಯದ ತೀರ್ಪಿಗೆ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ದೇವರನ್ನು ನೋಡಬೇಕು ಎಂದು ಇಷ್ಟ ಪಡುವವರು ದರ್ಶನಕ್ಕೆ ಹೋಗುತ್ತಾರೆ. ನಂಬಿಕೆ ಇಲ್ಲದವರು ಹೋಗುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.