ಉತ್ತರಿಸಲು ಕಾಲಾವಕಾಶ ಕೇಳಿದ್ದಕ್ಕೆ ಆಕ್ಷೇಪ
Team Udayavani, Jun 14, 2017, 12:43 PM IST
ವಿಧಾನ ಪರಿಷತ್ತು: ಗೋಹತ್ಯೆ ನಿಷೇಧ ಹಾಗೂ ಕಸಾಯಿಖಾನೆ ಬಗ್ಗೆ ಬಿಜೆಪಿ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಲು ಸಚಿವ ಎ.ಮಂಜು ಎರಡು ವಾರ ಸಮಯ ಕೇಳಿದ್ದು, ಸದನದಲ್ಲಿ ಗದ್ದಲಕ್ಕೆ ಕಾರಣವಾಯಿತು. ಬಿಜೆಪಿಯ ತಾರಾ ಅನುರಾಧ ಹಾಗೂ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಲು ಕಾಲಾವಕಾಶ ಕೋರಿದರು.
ಇದಕ್ಕೆ ಅಸಮಾಧಾನಗೊಂಡ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, “ಮಹಾತ್ಮ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಆಶಯದಲ್ಲಿ ಗೋಹತ್ಯೆ ನಿಷೇಧವನ್ನು ಜಾರಿಗೊಳಿಸಬೇಕಿದೆ. ಇಂತಹ ಗಂಭೀರ ವಿಚಾರ ಕುರಿತ ಪ್ರಶ್ನೆಗೆ ಉತ್ತರ ನೀಡದೆ ನುಣುಚಿಕೊಳ್ಳುವುದು ಸರಿಯಲ್ಲ.
ಇದು ಧರ್ಮಕ್ಕೆ ಮಾತ್ರವಲ್ಲ, ದೇಶಕ್ಕೆ ಮಾಡುತ್ತಿರುವ ಅಪಮಾನ ಎಂದು ಕುಟುಕಿದರು. ಇದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಸಚಿವ ಎ.ಮಂಜು, “ಎರಡು ವಾರದಲ್ಲಿ ಉತ್ತರ ಒದಗಿಸಲಾಗುವುದು’ ಎಂದರು. ಆಗ ಪಕ್ಷೇತರ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್, “ಎರಡು ವಾರದಲ್ಲಿ ಅಧಿವೇಶನ ಮುಗಿದಿರುತ್ತದೆ.
ನಂತರ ವಿಧಾನಸೌಧದ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂದೆ ಉತ್ತರ ಕೊಡುತ್ತೀರಾ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೊನೆಗೆ ಸಭಾನಾಯಕ ಡಾ.ಜಿ.ಪರಮೇಶ್ವರ್ ಮಾತನಾಡಿ, “ಸರ್ವಾಧಿಕಾರಿಗಳಂತೆ ವರ್ತಿಸುವುದು ಸರಿಯಲ್ಲ. ಸದನ ಮುಗಿಯುವುದರೊಳದಗೆ ಸಚಿವರು ಉತ್ತರ ಒದಗಿಸಲಿದ್ದಾರೆ’ ಎಂದಾಗ ಚರ್ಚೆಗೆ ತೆರೆಬಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.