ಪಠ್ಯಪುಸ್ತಕ ದರ ಹೆಚ್ಚಳಕ್ಕೆ ವಿರೋಧ
Team Udayavani, May 14, 2019, 3:07 AM IST
ಬೆಂಗಳೂರು: ಕರ್ನಾಟಕ ಪಠ್ಯಪುಸ್ತಕ ಸಂಘವು 2019-20ನೇ ಸಾಲಿನ ಪಠ್ಯಪುಸ್ತಕಗಳಿಗೆ ಶೇ.20ರಷ್ಟು ದರ ಹೆಚ್ಚಳ ಮಾಡಿರುವುದಕ್ಕೆ ಖಾಸಗಿ ಶಾಲಾಡಳಿತ ಮಂಡಳಿ ತೀವ್ರ ವಿರೋಧ ವ್ಯಕ್ತಪಡಿಸಿವೆ.
ಪಠ್ಯಪುಸ್ತಕದ ದರದಲ್ಲಿ ಶೇ.20 ಹೆಚ್ಚಳವಾಗಿರುವುದರಿಂದ ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸಿರುವ ಪಾಲಕ, ಪೋಷಕರಿಗೆ ಇನ್ನಷ್ಟು ಹೊರೆಯಾಗುವ ಸಾಧ್ಯತೆ ಇದೆ. ಪಠ್ಯಪುಸ್ತಕದ ಬೆಲೆಯಲ್ಲಿ ಹೆಚ್ಚಳವಾಗಿರುವುದನ್ನು ಆಡಳಿತ ಮಂಡಳಿಗಳು ಭರಿಸಲು ಸಾಧ್ಯವಿಲ್ಲ. ನೇರವಾಗಿ ಪಾಲಕ, ಪೋಷಕರ ಜೇಬಿಗೆ ಕತ್ತರಿ ಬೀಳಲಿದೆ.
ರಾಜ್ಯ ಪಠ್ಯಕ್ರಮದ ಖಾಸಗಿ ಶಾಲೆಗಳಿಗೆ ಪಠ್ಯಪುಸ್ತಕ ಸಂಘದಿಂದಲೇ ಪುಸ್ತಕಗಳನ್ನು ವಿತರಣೆ ಮಾಡಲಾಗುತ್ತದೆ. ಪಠ್ಯಪುಸ್ತಕ ಸಂಘವು ಸೂಚಿಸಿರುವ ನಿರ್ದಿಷ್ಟ ಬೆಲೆ ನೀಡಿ ಖಾಸಗಿ ಶಾಲೆಗಳು ಪುಸ್ತಕ ಖರೀದಿಸಿ ಮಕ್ಕಳಿಗೆ ನೀಡಬೇಕಾಗುತ್ತದೆ.
ಸರ್ಕಾರ ಏಕಾಏಕಿ ಬೆಲೆ ಹೆಚ್ಚಳ ಮಾಡಿದರೆ, ಪೋಷಕರಿಗೆ ಹೊರೆಯಾಗಲಿದೆ. ಅಲ್ಲದೆ, ಶಾಲೆಗಳ ಗಮನಕ್ಕೆ ತಾರದೇ ದಿಢೀರ್ ಬೆಲೆ ಏರಿಕೆ ಮಾಡಿರುವುದರಿಂದ ಶಾಲೆಗಳಿಗೂ ತೊಂದರೆಯಾಗಲಿದೆ. ರಾಜ್ಯ ಸರ್ಕಾರ ಇದಕ್ಕೆ ಸ್ಪಷ್ಟೀಕರಣ ನೀಡಲೇ ಬೇಕು ಎಂದು ಖಾಸಗಿ ಶಾಲೆಗಳ ಆಡಳಿತ ಮಂಡಳಿ ಆಗ್ರಹಿಸಿವೆ.
ವಿದ್ಯಾರ್ಥಿಗಳ ಸಾಧನಾ ಟ್ರ್ಯಾಕಿಂಗ್ ವ್ಯವಸ್ಥೆ (ಎಸ್‌ಎಟಿಎಸ್) ಆಧಾರದ ಮೇಲೆ ಫೆಬ್ರವರಿಯಲ್ಲಿ ಖಾಸಗಿ ಶಾಲೆಗಳು ತಮಗೆ ಅವಶ್ಯವಿರುವ ಪುಸ್ತಕಗಳ ಪಟ್ಟಿ (ಇನ್‌ಡೆಂಟ್) ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸಿವೆ. ಆ ವೇಳೆ ಬೆಲೆ ನಿಗದಿ ಮಾಡಲಾಗಿತ್ತು. ಈಗ ಪುಸ್ತಕಗಳನ್ನು ಖರೀದಿ ಮಾಡುವ ಸಂದರ್ಭದಲ್ಲಿ ದರ ಹೆಚ್ಚಳ ಮಾಡಿ, ಹೊಸ ಬೆಲೆ ನಿಗದಿ ಮಾಡಿದ್ದಾರೆ.
ಈ ಸಂಬಂಧ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ನಿರ್ದೇಶಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇವೆ. ದರ ಹೆಚ್ಚಳ ಮಾಡಿ ಟೆಂಡರ್ ನೀಡಿರುವುದರಿಂದ ಅನಿವಾರ್ಯವಾಗಿ ಹೊಸ ಬೆಲೆಗೆ ಖರೀದಿ ಮಾಡಬೇಕಾಗುತ್ತದೆ ಎಂದು ಹೇಳುತ್ತಿದ್ದಾರೆ.
ದರ ಹೆಚ್ಚಳ ಮಾಡುವುದರಿಂದ ಪಾಲಕ, ಪೋಷಕರ ಮೇಲೆ ಹೊರೆಯಾಗಲಿದೆ. ಎಂದು ರಾಜ್ಯ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್) ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಒತ್ತಾಯಿಸಿದ್ದಾರೆ. ಮಾರುಕಟ್ಟೆಯಲ್ಲಿ ಕಾಗದ ಬೆಲೆ ಹೆಚ್ಚಳವಾಗಿಲ್ಲ.
ಖಾಸಗಿ ಶಾಲೆಗಳಿಗೆ ನೇರವಾಗಿ ಪುಸ್ತಕಗಳನ್ನು ಸರಬರಾಜು ಮಾಡುವುದರಲ್ಲೂ ಪಠ್ಯಪುಸ್ತಕ ಸಂಘ ವಿಫಲವಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಮತ್ತು ಶಿಕ್ಷಣ ಇಲಾಖೆ ಆಯುಕ್ತರಿಗೂ ಮನವಿ ಮಾಡಲಾಗಿದೆ. ಜನವರಿಯಲ್ಲಿ ಆನ್‌ಲೈನ್ ನೀಡಿದ್ದ ದರದ ಮಾಹಿತಿಗೂ ಈಗ ಕೇಳುತ್ತಿರುವ ದರಕ್ಕೂ ವ್ಯತ್ಯಾಸವಿದೆ. ದರ ಹೆಚ್ಚಳವನ್ನು ತಕ್ಷಣವೇ ವಾಪಾಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಶಿಕ್ಷಣ ಇಲಾಖೆ ಸಮರ್ಥನೆ: ಪುಸ್ತಕಗಳ ಮುದ್ರಣದ ಬಳಿಕ ತಗಲುವ ವೆಚ್ಚದ ಆಧಾರದಲ್ಲಿ ಬೆಲೆ ನಿಗದಿ ಮಾಡಲಾಗುತ್ತದೆ. ಕಾಗದ, ಉತ್ಪಾದನಾ ವೆಚ್ಚ, ಆಡಳಿತಾತ್ಮಕ ವೆಚ್ಚ ಹೆಚ್ಚಳವಾಗಿದ್ದರಿಂದ ಅನಿವಾರ್ಯವಾಗಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳ ಪುಸ್ತಕಗಳ ಬೆಲೆ ಕೂಡ ಹೆಚ್ಚಿಸಬೇಕಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಪಪಡಿಸಿದೆ.
ಕಳೆದ ವರ್ಷದ ದರಪಟ್ಟಿ: 2018-19ರಲ್ಲಿ 1ರಿಂದ 10ನೇ ತರಗತಿಯ ಪುಸ್ತಕದ ಬೆಲೆ ಎಷ್ಟು ಎಂಬುದನ್ನು ಕರ್ನಾಟಕ ಪಠ್ಯಪುಸ್ತಕ ಸಂಘ ವೆಬ್‌ಸೈಟ್‌ನಲ್ಲಿ ಪ್ರಕಟಿಸಿತ್ತು. ನಲಿಕಲಿ ಪುಸ್ತಕ ಹೊರತುಪಡಿಸಿ ಬೇರೆಲ್ಲ ಪುಸ್ತಕಗಳಿಗೂ ನಿರ್ದಿಷ್ಟ ದರ ನಿಗದಿ ಮಾಡಿತ್ತು. ಪ್ರತಿ ಪುಸ್ತಕಕ್ಕೂ ವಿಭಿನ್ನ ಬೆಲೆ ನಿರ್ಧರಿಸಲಾಗಿತ್ತು. 17 ರೂ.ಗಳಿಂದ ಆರಂಭವಾಗಿ 65 ರೂ.ವರೆಗೂ ವಿವಿಧ ಪುಸ್ತಕದ ಬೆಲೆ ನಿಗದಿಯಾಗಿತ್ತು. ಅದರಂತೆ ಖಾಸಗಿ ಶಾಲೆಗಳಿಗೆ ವಿತರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.