ದೊಮ್ಮಲೂರಿನಲ್ಲಿ ಇಂದಿರಾ ಕ್ಯಾಂಟಿನ್ಗೆ ವಿರೋಧ
Team Udayavani, Jul 15, 2017, 10:54 AM IST
ಬೆಂಗಳೂರು: ದೊಮ್ಮಲೂರು ವಾರ್ಡ್ನ ಶಂಕರ್ನಾಗ್ ಉದ್ಯಾನದ ಭಾಗದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಿಸಲು ಮುಂದಾದ ಬಿಬಿಎಂಪಿ ವಿರುದ್ಧ ಸ್ಥಳೀಯರು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.
ಕ್ಯಾಂಟಿನ್ ನಿರ್ಮಾಣಕ್ಕೆ ಪಾಲಿಕೆಯಿಂದ ಗುರುತಿಸಲಾಗಿದ್ದ ಜಾಗದಲ್ಲಿ ಶುಕ್ರವಾರ ಪಾಲಿಕೆ ಸದಸ್ಯ ಲಕ್ಷ್ಮೀನಾರಾಯಣ ಅವರ ನೇತೃತ್ವದಲ್ಲಿ ವಿವಿಧ ನಾಗರಿಕ ಸಂಸ್ಥೆಗಳು ಪ್ರತಿಭಟನೆಗೆ ಮುಂದಾದರು. ಈ ವೇಳೆ ಶಾಸಕ ಎನ್.ಎ.ಹ್ಯಾರೀಶ್ ಮಧ್ಯ ಪ್ರವೇಶಿಸಿದ ವೇಳೆ ಪಾಲಿಕೆ ಸದಸ್ಯರು ಹಾಗೂ ಶಾಸಕ ನಡುವೆ ಮಾತಿನ ಚಕಮಕಿಯೂ ನಡೆಯಿತು.
ವಿವಿಧ ನಾಗರಿಕ ಸಂಸ್ಥೆಗಳು ಉದ್ಯಾನದ ಜಾಗದಲ್ಲಿ ಕ್ಯಾಂಟಿನ್ ನಿರ್ಮಿಸದಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಶಾಸಕರು ಬೇರೊಂದು ಸ್ಥಳವನ್ನು ಗುರುತಿಸುವಂತೆ ಹಾಗೂ ನಾಗರಿಕ ಸಂಸ್ಥೆಗಳ ಅಭಿಪ್ರಾಯದ ಮೇಲೆ ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಮಾಧ್ಯಮಗಳಿಗೆ ಮಾತನಾಡಿರುವ ಶಾಸಕ ಹ್ಯಾರೀಸ್, ಪಾಲಿಕೆ ಸದಸ್ಯರು ಗುರುವಾರ ಸಂಜೆ ಕ್ಯಾಂಟಿನ್ ನಿರ್ಮಿಸುವ ಸ್ಥಳಕ್ಕೆ ಭೇಟಿ ನೀಡಿ ಜಾಗದ ಕುರಿತು ಯಾವುದೇ ತಕರಾರು ಇಲ್ಲವೆಂದು ತಿಳಿಸಿದ್ದರು. ಆದರೆ, ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ. ಯಾಕೆ ಎಂದು ತಿಳಿದಿಲ್ಲ. ಈ ವಿಚಾರದಲ್ಲಿ ಯಾರೇ ಆಗಲಿ ರಾಜಕೀಯ ಮಾಡಬಾರದು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.