ದೇಹ ದಹನ ಮಾಡುವ ಮುನ್ನ ಅಂಗಾಂಗ ದಾನ ಮಾಡಿ
Team Udayavani, Sep 20, 2017, 11:42 AM IST
ಕೆ.ಆರ್.ಪುರ: ದೇಹದ ಅಂಗಾಂಗಳನ್ನು ದಾನ ಮಾಡುವ ಸೇವಾಮನೋಭಾವವನ್ನು ಪ್ರತಿಯೊಬ್ಬರೂ ಬೆಳಸಿಕೊಳ್ಳಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಸಂಯೋಜನಾಧಿಕಾರಿ ಡಾ.ಆರ್.ಶ್ರೀನಿವಾಸ್ ಹೇಳಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನೆ ಹಾಗೂ ಪುನಶ್ಚೇತನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಂಗಾಂಗಗಳನ್ನು ದಾನ ಮಾಡುವ ಬಗ್ಗೆ ಪ್ರತಿಯೊಬ್ಬರೂ ಗಂಭೀರವಾಗಿ ಚಿಂತಿಸಬೇಕಿದೆ. ವ್ಯಕ್ತಿ ಮೃತಪಟ್ಟ ನಂತರ ದೇಹ ದಹನ ಮಾಡಿ ವ್ಯರ್ಥ ಮಾಡುವ ಬದಲು ಅಂಗಾಂಗಳನ್ನು ದಾನ ಮಾಡಿ ಜೀವಗಳನ್ನು ಉಳಿಸಬೇಕಿದೆ. ಆರೋಗ್ಯ ಹದಗೆಟ್ಟ ನಂತರ ಎಚ್ಚರಿಕೆ ವಹಿಸುವ ಬದಲು ಸಣ್ಣ ವಯಸ್ಸಿನಲ್ಲೇ ಆರೋಗ್ಯದ ಸುಧಾರಣೆ ಬಗ್ಗೆ ಚಿಂತಿಸಿ ನಿಯಮಿತ ಆಹಾರ, ವ್ಯಾಯಾಮ ರೂಢಿಸಿಕೊಳ್ಳಬೇಕು,’ ಎಂದು ತಿಳಿಸಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಅಶ್ವಥ್ ಕುಮಾರ್ ಶೆಟ್ಟಿ ಮಾತನಾಡಿ, “ಅಪಘಾತಕ್ಕೆ ತುತ್ತಾಗಿ ಅಸಹಾಯಕತೆಯಿಂದ ನರಳುತ್ತಿರುವವರಿಗೆ ಸಹಾಯ ಹಸ್ತ ಚಾಚುವ ಬದಲು ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಾ ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದರಲ್ಲಿ ನಿರತರಾಗುವವರೇ ಹೆಚ್ಚಿರುವುದು ವಿಷಾಧನೀಯ. ಸಂಕಷ್ಟದಲ್ಲಿರುವವರನ್ನು ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ಸೇರಿಸುವ ಮೂಲಕ ಜೀವ ಉಳಿಸಬಹುದು,’ ಎಂದು ತಿಳಿಸಿದರು.
ಕರ್ನಾಟಕ ಸರ್ವೋದಯ ಮಂಡಲ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಂಟಿ ಕಾರ್ಯದರ್ಶಿ ಡಾ.ಹೆಚ್.ಎಸ್.ಸುರೇಶ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಸಿ.ರಾಮಣ್ಣ, ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿ ಡಾ.ಕೆ.ನಾರಾಯಣ್ ಸೇರಿದಂತೆ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
ಕಾಂಗ್ರೆಸ್ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.