ಇಂದಿರಾ ಕ್ಯಾಂಟೀನ್ಗೆ ಮೊದಲೇ “ನಮ್ಮ ಅಪ್ಪಾಜಿ’ ಕ್ಯಾಂಟೀನ್
Team Udayavani, Jul 18, 2017, 11:55 AM IST
ಬೆಂಗಳೂರು: ಬಿಬಿಎಂಪಿಯ ಇಂದಿರಾ ಕ್ಯಾಂಟೀನ್ ಸ್ಥಳ ಗುರುತಿಸಲು ಪಾಲಿಕೆ ಹರಸಾಹಸ ಪಡುತ್ತಿರುವ ನಡುವೆಯೇ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರ ನೇತೃತ್ವದಲ್ಲಿ “ನಮ್ಮ ಅಪ್ಪಾಜಿ’ ಕ್ಯಾಂಟೀನ್ ಪ್ರಾರಂಭವಾಗಲಿದೆ.
ಆಗಸ್ಟ್ 26 ಅಥವಾ 28ರಂದು ಬಸವನಗುಡಿ ವಿಧಾನಸಭೆ ಕ್ಷೇತ್ರದಲ್ಲಿ ಮೊದಲ “ನಮ್ಮ ಅಪ್ಪಾಜಿ’ ಕ್ಯಾಂಟೀನ್ ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ. ಆ ನಂತರ ನಗರದ ಇತರೆಡೆಯೂ ಕ್ಯಾಂಟೀನ್ಗಳನ್ನು ತೆರೆಯಲಾಗುತ್ತದೆ.
ನಮ್ಮ ಅಪ್ಪಾಜಿ ಕ್ಯಾಂಟೀನ್ನಲ್ಲಿ ಐದು ರೂ.ಗೆ ತಟ್ಟೆ ಇಡ್ಲಿ-ವಡೆ, ಖಾರಾಬಾತ್, ಕೇಸರಿಬಾತ್, ಹತ್ತು ರೂ.ಗೆ ಪೊಂಗಲ್, ಮುದ್ದೆ ಬಸ್ಸಾರು, ಅನ್ನ ಸಾಂಬಾರ್, ರೈಸ್ ಬಾತ್, 3 ರೂ.ಗೆ ಕಾಫಿ-ಟೀ ನೀಡಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಟಿ.ಎ.ಶವರಣ ಹೇಳಿದ್ದಾರೆ.
ಶಿರಡಿ ಸಾಯಿಬಾಬಾ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಚಿತ್ರವುಳ್ಳ ಕ್ಯಾಂಟೀನ್ನ ಲಾಂಛನ ಸಿದ್ಧಗೊಂಡಿದೆ. ಗುಣಮಟ್ಟ ಹಾಗೂ ಸ್ವತ್ಛತೆಗೆ ಹೆಚ್ಚು ಒತ್ತು ನೀಡಲಾಗುವುದು. ಪರಿಣಿತರ ತಂಡವನ್ನು ಇದಕ್ಕಾಗಿ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.