ನಮ್ಮ ಚುನಾವಣಾ ಪದ್ಧತಿ ವಿಶ್ವಕ್ಕೇ ಮಾದರಿ
Team Udayavani, Apr 17, 2019, 3:00 AM IST
ಬೆಂಗಳೂರು: ಭಾರತದ ಚುನಾವಣೆ ಪದ್ಧತಿ ಇಡೀ ವಿಶ್ವಕ್ಕೇ ಮಾದರಿಯಾಗಿದೆ ಎಂದು ಕೃಷಿ ಇಲಾಖೆ ಕಾರ್ಯದರ್ಶಿ ಮನೋಜ್ ರಾಜನ್ ಹೇಳಿದರು.
ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯುನ್ಮಾನ ವಿಭಾಗ ಬೆಂಗಳೂರು ವಿವಿ ಕಾನೂನು ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಮತದಾನ ಜಾಗೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಮುಕ್ತ ಮತ್ತು ಪಾರದರ್ಶಕ ಚುನಾವಣೆ ಮೂಲಕ ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಅಧಿಕಾರ ಹಸ್ತಾಂತರ ಮಾಡುವ ಕೆಲಸವನ್ನು ಭಾರತೀಯ ಚುನಾವಣಾ ಆಯೋಗ ಮಾಡುತ್ತಿದೆ ಎಂದು ತಿಳಿಸಿದರು.
ದೇಶದಲ್ಲಿ 90 ಕೋಟಿ ಮತದಾರರಿದ್ದಾರೆ. ಇಷ್ಟು ದೊಡ್ಡ ಮಟ್ಟದ ಜನರನ್ನು ಮತದಾನ ಪ್ರಕ್ರಿಯೆಯಲ್ಲಿ ತೊಡಿಗಿಸುವುದು ಸವಾಲಿನ ಕೆಲಸ. ಇದೇ ಮೊದಲ ಬಾರಿ ಸಿ-ವಿಜಿಲ್ ಆ್ಯಪ್ ಮೂಲಕ, ನೀತಿ ಸಹಿಂತೆ ಉಲ್ಲಂಘನೆ ಕುರಿತು ಮತದಾರರೆ ದೂರು ನೀಡುತ್ತಿದ್ದಾರೆ. ಇಂತಹ ವ್ಯವಸ್ಥೆ ಬೇರೆಲ್ಲೂ ಇಲ್ಲ ಎಂದರು.
ಬೆಂಗಳೂರು ವಿವಿ ಉಪಕುಲಪತಿ ಪ್ರೊ.ಕೆ.ಆರ್.ವೇಣಲಗೋಪಾಲ್ ಮಾತನಾಡಿ, ಮತದಾರರು ಜಾಗೃತರಾದರೆ ಭ್ರಷ್ಟಾಚಾರ ತಡೆಯಬಹುದು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಮಾದರಿಯಾಗಬೇಕು ಎಂದರು. ಕುಲಸಚಿವ ಪ್ರೊ.ಬಿ.ಕೆ ರವಿ, ಕಾನೂನು ಕಾಲೇಜು ಪ್ರಾಂಶುಪಾಲ ಪ್ರೊ.ವಿ.ಸುದೇಶ್ ಮತ್ತು ವಿದುದ್ಮಾನ ವಿಭಾಗದ ಸಂಯೋಜಕ ಡಾ.ವಾಹಿನಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
MUST WATCH
ಹೊಸ ಸೇರ್ಪಡೆ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.