ಜನತೆಗೆ ಸಂತಸ ತಂದ ನಮ್ಮ ಮೆಟ್ರೋ


Team Udayavani, Jun 27, 2017, 3:47 PM IST

kemp10.jpg

ದಶಕದ ಹಿಂದೆ ಆರಂಭವಾಗಿದ್ದ ಮೆಟ್ರೋ ಮೊದಲ ಹಂತದ ಯೋಜನೆ ಕಾಮಗಾರಿ ಪೂರ್ಣಗೊಂಡಿದ್ದು, ನಗರದ ಜನತೆಯ ಬಹುಕಾಲದ ನಿರೀಕ್ಷೆ ಸಾಕಾರಗೊಂಡಂತಾಗಿದೆ. ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು ಇತ್ತೀಚೆಗೆ ವಿಧಾನಸೌಧದಲ್ಲಿ ಮೆಟ್ರೋ ಮೊದಲ ಹಂತದ ಯೋಜನೆಯಡಿ ಪೂರ್ಣ ಪ್ರಮಾಣದಲ್ಲಿ ಮೆಟ್ರೋ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿದರು. ಇದರಿಂದ ಬೈಯ್ಯಪ್ಪನಹಳ್ಳಿ ಹಾಗೂ ನಾಯಂಡನಹಳ್ಳಿ ನಡುವೆ ಹಾಗೂ ನಾಗಸಂದ್ರದಿಂದ ಯಲಚೇನಹಳ್ಳಿವರೆಗೆ ಒಟ್ಟು 42.3 ಕಿ.ಮೀ. ಉದ್ದದ ಮಾರ್ಗದಲ್ಲಿ ಮೆಟ್ರೋ ರೈಲು ಸಾರ್ವಜನಿಕರ ಬಳಕೆಗೆ ಮುಕ್ತವಾಗಿದೆ.

ನಗರದ ಕೇಂದ್ರ ಭಾಗದಲ್ಲಿರುವ ಮೆಜೆಸ್ಟಿಕ್‌ ನಿಲ್ದಾಣದಲ್ಲಿ ನಿರ್ಮಾಣವಾಗಿರುವ ಇಂಟರ್‌ಚೇಂಜ್‌ ನಿಲ್ದಾಣವು ದೇಶದಲ್ಲೇ ಅತಿ ದೊಡ್ಡ ಹಾಗೂ ಏಷ್ಯಾಖಂಡದಲ್ಲೇ ಎರಡನೇ ಅತಿದೊಡ್ಡ ಇಂಟರ್‌ಚೇಂಜ್‌ ನಿಲ್ದಾಣವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಹಿಂದೆ ಆಯ್ದ ಮಾರ್ಗದಲ್ಲಿ ಸಂಚರಿಸುತ್ತಿದ್ದ ಮೆಟ್ರೋ ರೈಲಿನಲ್ಲಿ ನಿತ್ಯ ಎರಡು ಲಕ್ಷಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಇದೀಗ ಮೊದಲ ಹಂತ ಸಂಪೂರ್ಣ ಸಂಚಾರಕ್ಕೆ ಮುಕ್ತವಾಗಿರುವುದರಿಂದ ಪ್ರಯಾಣಿಕರ ಸಂಖ್ಯೆ ಐದು ಲಕ್ಷ ಮೀರುವ ಸಾಧ್ಯತೆ ಇದೆ.

ಇನ್ನು ಮೆಟ್ರೋ ರೀಚ್‌-4ರ ವಿಸ್ತರಣೆ ಕಾರ್ಯ ಅಂದರೆ ಪುಟ್ಟೇನಹಳ್ಳಿಯಿಂದ ಅಂಜನಾಪುರದವರೆಗೆ ಹಾಗೂ ರೀಚ್‌- 2ರ ವಿಸ್ತರಣೆ ಕಾಮಗಾರಿಯಡಿ ನಾಯಂಡನಹಳ್ಳಿಯಿಂದ ಕೆಂಗೇರಿವರೆಗೆ ಮೆಟ್ರೋ ಮಾರ್ಗ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ. ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ- 2ಎ ಅಡಿ ಸಿಲ್ಕ್ ಬೋರ್ಡ್‌ ಜಂಕ್ಷನ್‌ನಿಂದ ಕೆ.ಆರ್‌.ಪುರ ಜಂಕ್ಷನ್‌ವರೆಗೆ 17 ಕಿ.ಮೀ. ಉದ್ದದ ಹೆಚ್ಚುವರಿ ಮಾರ್ಗ ನಿರ್ಮಿಸಲು ಸರ್ಕಾರ ನಿರ್ಧರಿಸಿದ್ದು, ಅದಕ್ಕೆ ಪೂರವಾಗಿ ವಿನೂತನ ವಿಧಾನದಡಿ ಒಟ್ಟು 4,200 ಕೋಟಿ ರೂ. ಘಟಕ ವೆಚ್ಚದ ಯೋಜನೆಗೆ ಚಾಲನೆ ನೀಡಿದೆ.

ರೀಚ್‌-3ರ ಕಾರ್ಯಸಾಧ್ಯತೆ ಬಗ್ಗೆ ಅಧ್ಯಯನ ಪೂರ್ಣಗೊಂಡಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಸೂಕ್ತ ಸಂಪರ್ಕ ಕಲ್ಪಿಸುವ ಮಾರ್ಗವನ್ನು ಸದ್ಯದಲ್ಲೇ ಅಂತಿಮಗೊಳಿಸಲು ಸಿದ್ಧತೆ ನಡೆದಿದೆ. ಇನ್ನು ಉಪನಗರ ರೈಲು ಯೋಜನೆಯನ್ನೂ ಸರ್ಕಾರ ಹಂತ ಹಂತವಾಗಿ ಜಾರಿಗೊಳಿಸಲು ನಿರ್ಧರಿಸಿದೆ. ಅದರಂತೆ ರೈಲ್ವೆ ಇಲಾಖೆ ಸಹಯೋಗದಲ್ಲಿ ಮೊದಲ ಹಂತದ ಉಪನಗರ ರೈಲು ಯೋಜನೆಯನ್ನು ಸುಮಾರು 345 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ರಾಜ್ಯ ಸರ್ಕಾರ ಒಡಂಬಡಿಕೆ ಮಾಡಿಕೊಂಡಿದೆ.

ಬೃಹತ್‌ ಸಮೂಹ ಸಾರಿಗೆ ಸೇವೆ ಜತೆಗೆ ಜನರಿಗೆ ಆರೋಗ್ಯಕರ ಹಾಗೂ ಪರಿಸರಸ್ನೇಹಿ ಮೋಟಾರುರಹಿತ ಸಾರಿಗೆ ವ್ಯವಸ್ಥೆಯನ್ನು ಒದಗಿಸಲು ನಗರ ಭೂಸಾರಿಗೆ ನಿರ್ದೇಶನಾಲಯವು ನಾನಾ ಪ್ರಯೋಗಗಳನ್ನು ಕೈಗೊಳ್ಳುತ್ತಿದೆ. ಪರಿಸರಸ್ನೇಹಿ ಸೈಕಲ್‌ಗ‌ಳನ್ನು ಬಾಡಿಗೆಗೆ ನೀಡುವ ಯೋಜನೆ ಮೈಸೂರಿನಲ್ಲಿ ಯಶಸ್ವಿಯಾಗಿ ಜಾರಿಯಾಗಿದೆ. ಇದೇ ಯೋಜನೆಯನ್ನು ಬೆಂಗಳೂರಿನ ನಾನಾ ಕ್ಲಸ್ಟರ್‌ಗಳಲ್ಲಿ ಪ್ರಾರಂಭಿಸಲು ಚಿಂತನೆ ನಡೆದಿದೆ.

ನಿವೇಶನ- ಫ್ಲ್ಯಾಟ್‌ ಹಂಚಿಕೆಗೆ ಆದ್ಯತೆ: ಅಂತಾರಾಷ್ಟ್ರೀಯ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗುತ್ತಿರುವ ಬೆಂಗಳೂರಿನಲ್ಲಿ ನಿವೇಶನ, ಸೂರು ಪಡೆಯಬೇಕೆಂದು ಬಯಸುವ ದೊಡ್ಡ ಸಮೂಹವೇ ಇದೆ. ಆದರೆ ಭೂಮಿಯ ಬೆಲೆ ಗಗನಮುಖೀಯಾಗಿರುವ ಸಂದರ್ಭದಲ್ಲಿ ಖಾಸಗಿಯವರಿಂದ ಮಾರುಕಟ್ಟೆ ದರದಲ್ಲಿ ನಿವೇಶನ, ಫ್ಲ್ಯಾಟ್‌ ಖರೀದಿಸುವುದು ಸಾಮಾನ್ಯ ಜನರಿಂದ ಸಾಧ್ಯವೇ ಇಲ್ಲ ಎಂಬ ಸ್ಥಿತಿ ಇದೆ. ಈ ರೀತಿಯ ಜನರಿಗೆ ಸ್ಪಂದಿಸಲೆಂದೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸರ್ಕಾರವೇ ನಿಯಮಿತವಾಗಿ ಬಡಾವಣೆಗಳನ್ನು ಅಭಿವೃದ್ಧಿಪಡಿಸಿ ನಿವೇಶನ ಹಂಚಿಕೆ ಮಾಡುತ್ತಿದೆ.

ಅದರಂತೆ 2017-18ನೇ ಸಾಲಿನಲ್ಲಿ ಕೆಂಪೇಗೌಡ ಬಡಾವಣೆಯಲ್ಲಿ 5,000 ನಿವೇಶನ ಹಂಚಿಕೆ ಮಾಡಲು ಬಿಡಿಎ ಸಿದ್ಧತೆ ನಡೆಸಿದೆ. ಜತೆಗೆ ಕೆಂಪೇಗೌಡ ಬಡಾವಣೆ ಮಾರ್ಗವಾಗಿ ಮೈಸೂರು ರಸ್ತೆಯಿಂದ ಮಾಗಡಿ ರಸ್ತೆಗೆ ನೇರ ಸಂಪರ್ಕ ಕಲ್ಪಿಸುವ 10.7 ಕಿ.ಮೀ. ಉದ್ದದ ಆರ್ಟಿರಿಯಲ್‌ ರಸ್ತೆಯನ್ನು ಸುಮಾರು 350 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವ ಯೋಜನೆ ರೂಪಿಸಿದೆ. ಅದೇರೀತಿ 3000 ಫ್ಲ್ಯಾಟ್‌ಗಳನ್ನು ಅಭಿವೃದ್ಧಿಪಡಿಸಿ ಪ್ರಸಕ್ತ ವರ್ಷದಲ್ಲೇ ಹಂಚಿಕೆ ಮಾಡುವ ಗುರಿ ಹೊಂದಿದೆ. ಕೋನದಾಸಪುರ ಗ್ರಾಮದಲ್ಲಿ 166 ಎಕರೆ ಪ್ರದೇಶದಲ್ಲಿ ನವೀನ ಮಾದರಿಯ ಟೌನ್‌ಶಿಪ್‌ ಕೂಡ ನಿರ್ಮಾಣವಾಗುತ್ತಿದೆ.

ಹೊರವರ್ತುಲ ರಸ್ತೆಯ ಹೆಬ್ಟಾಳ ಜಂಕ್ಷನ್‌ನಲ್ಲಿ ಕೆಳಸೇತುವೆ ನಿರ್ಮಾಣದ ಜತೆಗೆ ಮೇಲು ರಸ್ತೆಯಲ್ಲಿ ದಟ್ಟಣೆ ತಪ್ಪಿಸಲು ವಿಸ್ತರಣೆ ಮಾಡುವ ಕಾರ್ಯಕ್ಕೆ 88 ಕೋಟಿ ರೂ. ಅನುದಾನ ಕಾಯ್ದಿರಿಸಿದೆ. ಅಂದಾಜು 44 ಕೋಟಿ ರೂ. ವೆಚ್ಚದಲ್ಲಿ ಹೊರವರ್ತುಲ ರಸ್ತೆಯ ದೊಡ್ಡನೆಕ್ಕುಂದಿ ಜಂಕ್ಷನ್‌ನಲ್ಲಿ ನಿರ್ಮಾಣವಾಗುತ್ತಿರುವ ಮೇಲುಸೇತುವೆ ಕಾಮಗಾರಿಯು ಸದ್ಯದಲ್ಲೇ ಸಾರ್ವಜನಿಕರ ಬಳಕೆಗೆ ಮುಕ್ತಗೊಳ್ಳಲಿದೆ. ಬೆಂಗಳೂರು ಮೆಟ್ರೋ ರೈಲು ನಿಗಮದ ಸಹಯೋಗದಲ್ಲಿ ಹೊಸೂರು ರಸ್ತೆಯ ಸಿಲ್ಕ್ ಬೋರ್ಡ್‌ ಜಂಕ್ಷನ್‌ ಹಾಗೂ ಕೆ.ಆರ್‌.ಪುರ ಜಂಕ್ಷನ್‌ಗಳನ್ನು ಅಭಿವೃದ್ಧಿಪಡಿಸಲಿದೆ.

ಸಮೂಹ ಸಾರಿಗೆ ಬಳಕೆಗೆ ಉತ್ತೇಜನ: ನಗರದಲ್ಲಿ ಸಂಚಾರ ದಟ್ಟಣೆ ತಗ್ಗಿಸಲು ಹಾಗೂ ಸಾರ್ವಜನಿಕರು ಸಮೂಹ ಸಾರಿಗೆಯನ್ನೇ ಹೆಚ್ಚಾಗಿ ಬಳಸುವಂತೆ ಪ್ರೋತ್ಸಾಹ ನೀಡುವ ಸಲುವಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ನಾನಾ ಮಾದರಿ ಬಸ್‌ಗಳನ್ನು ಕಾರ್ಯಾಚರಣೆಗಿಳಿಸಿದೆ. ತನ್ನ ಕಾರ್ಯ ವೈಖರಿ ಹಾಗೂ ಪ್ರಯಾಣಿಕರಿಗೆ ನೀಡುತ್ತಿರುವ ಉತ್ತಮ ಸೇವೆ ಹಿನ್ನೆಲೆಯಲ್ಲಿ ಬಿಎಂಟಿಸಿ ಈವರೆಗೆ 100ಕ್ಕೂ ಹೆಚ್ಚು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಈಗಾಗಲೇ 6,500ಕ್ಕೂ ಹೆಚ್ಚು ಬಿಎಂಟಿಸಿ ಬಸ್‌ಗಳಿದ್ದು, ಹೆಚ್ಚುವರಿಯಾಗಿ 3000 ಹೊಸ ಬಸ್‌ಗಳನ್ನು ಖರೀದಿಸುವುದಾಗಿ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಈ ಪೈಕಿ 1,500 ಬಸ್‌ಗಳನ್ನು ಹೊಸದಾಗಿ ಖರೀದಿಸಿದರೆ ಇನ್ನೂ 1,500 ಬಸ್‌ಗಳನ್ನು ಗುತ್ತಿಗೆ ಆಧಾರದಲ್ಲಿ ಪಡೆಯಲು ನಿರ್ಧರಿಸಿದೆ.

ಟಾಪ್ ನ್ಯೂಸ್

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.